ಬೆಳಗಾವಿಗೆ ಆಗಮಿಸಿದ ಯಡಿಯೂರಪ್ಪ; ಸಿಎಂಗೆ ರೈತ ಸಂಘಟನೆಗಳಿಂದ ಪ್ರತಿಭಟನೆ ಬಿಸಿ
ಬೆಳಗಾವಿ, ಆಗಸ್ಟ್ 25: ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಸಿಎಂ ಯಡಿಯೂರಪ್ಪ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
Recommended Video
ಇನ್ಮುಂದೆ ಈ ಏರಿಯಾ ವರೆಗೂ ಬರುತ್ತೆ ಮೆಟ್ರೋ | Oneindia Kannada
ಸಿಎಂಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸಾಥ್ ನೀಡಿದ್ದಾರೆ. ಇನ್ನೊಂದೆಡೆ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಮುಖ್ಯದ್ವಾರದ ಎದುರು ರೈತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿಎಂ ಭೇಟಿಗೆ ಅನುಮತಿ ನೀಡದ ಪೊಲೀಸರ ಕ್ರಮ ಖಂಡಿಸಿ ರೈತರು ವಿಮಾನ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications