ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೆರೆ ಪರಿಹಾರ ಕೋರಿ ಬೆಳಗಾವಿ ರೈತರ ಬಾರುಕೋಲು ಚಳವಳಿ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 16: ನೆರೆ ಪರಿಹಾರವನ್ನು ಸೂಕ್ತವಾಗಿ ದೊರಕಿಸಬೇಕೆಂದು ಆಗ್ರಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಳಗಾವಿ ರೈತರು ಬಾರುಕೋಲು ಪ್ರತಿಭಟನೆಗೆ ಇಳಿದಿದ್ದಾರೆ.

ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ; ಸಿಎಂತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ; ಸಿಎಂ

ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಇಂದು ಹಸಿರು ಸೇನೆ, ರೈತ ಸಂಘಗಳು, 10 ಜಿಲ್ಲೆಗಳ ರೈತರು, ಬೆಳಗಾವಿಯಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು. ನಗರದ ಕೋಟೆ ಕೆರೆಯಿಂದ ಚೆನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ವಾಹನ ತಡೆದು ರಸ್ತೆ ಮಧ್ಯದಲ್ಲಿ ಕುಳಿತ ರೈತರು ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ಮಾಡಿಕೊಂಡು ಬಾರಕೋಲು ಚಳವಳಿಯನ್ನು ನಡೆಸಿದ್ದಾರೆ. ಕೋಲು ಹಿಡಿದು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

 Farmers Protested With Sticks In Belagavi Demanding Flood Relief

ನೆರೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು, ನೆರೆಪೀಡಿತ ಜಿಲ್ಲೆಗಳ ರೈತರ ಸಾಲ ಮನ್ನಾ, ಕಬ್ಬಿನ ಬಾಕಿ ಬಿಲ್‌ ಪಾವತಿ, ಪ್ರವಾಹದಲ್ಲಾದ ಬೆಳೆ ನಾಶಕ್ಕೆ ಒಂದು‌ ಎಕರೆಗೆ ಒಂದು ಲಕ್ಷ ಪರಿಹಾರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಲಾಯಿತು. ಉತ್ತರ ‌ಕರ್ನಾಟಕದ ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಹದಗೆಟ್ಟ ಹೆದ್ದಾರಿ ದುರಸ್ತಿಗೊಳಿಸಿ, ಜನರ ಪ್ರಾಣ ಉಳಿಸಿ; ದಕ್ಷಿಣ ಕನ್ನಡದಲ್ಲಿ ಭಾರೀ ಪ್ರತಿಭಟನೆಹದಗೆಟ್ಟ ಹೆದ್ದಾರಿ ದುರಸ್ತಿಗೊಳಿಸಿ, ಜನರ ಪ್ರಾಣ ಉಳಿಸಿ; ದಕ್ಷಿಣ ಕನ್ನಡದಲ್ಲಿ ಭಾರೀ ಪ್ರತಿಭಟನೆ

ಪ್ರತಿಭಟನಾ ಮೆರವಣಿಗೆ ಬಳಿಕ ಬೆಳಗಾವಿಯ ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುವುದಾಗಿಯೂ ತಿಳಿಸಿದ್ದಾರೆ.

English summary
The farmers of Belagavi have protested with sticks against the central and state government, demanding flood relief.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X