ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಚಳಿಗಾಲ ಅಧಿವೇಶನದ ಮೊದಲ ದಿನವೇ ರೈತರಿಂದ ಸುವರ್ಣ ಸೌಧಕ್ಕೆ ಮುತ್ತಿಗೆ'

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ನವೆಂಬರ್ 11: ಬೆಳಗಾವಿಯ ನಡೆಯಲಿರುವ ಚಳಿಗಾಲ ಅಧಿವೇಶನದ ಮೊದಲ ದಿನವೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮತ್ತು ಸಂಪುಟ ಸಭೆಯ ಇತರ ತೀರ್ಮಾನಗಳುಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮತ್ತು ಸಂಪುಟ ಸಭೆಯ ಇತರ ತೀರ್ಮಾನಗಳು

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಶನಿವಾರ ಮಾತನಾಡಿದ ಶಾಸಕ ಕೋಡಿಹಳ್ಳಿ ಚಂದ್ರಶೇಖರ್, ರೈತರು ಬೆಳದ ಬೆಳೆಗೆ ಸರ್ಕಾರ ಬೆಂಬಲ ಬೆಲೆ ನೀಡುತ್ತಿಲ್ಲ. ಅಂದು ಬ್ರಿಟಿಷರು ರಾಯಣ್ಣನಿಗೆ ನೇರವಾಗಿ ಗಲ್ಲಿಗೇರಿಸಿದ್ರು.ಇಂದು ಪ್ರಜಾಸತ್ತಾತ್ಮಕ ಸರ್ಕಾರಗಳು ಪರೋಕ್ಷವಾಗಿ ರೈತರನ್ನ ಆತ್ಮಹತ್ಯೆ ರೂಪದಲ್ಲಿ ಗಲ್ಲಿಗೇರಿಸುತ್ತಿವೆ ಎಂದು ಕೋಡಿಹಳ್ಳಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

Farmers will Siege Suvarna Soudha On First Day of Winter assembly session says Kodihalli Chandrashekhar

ನಾಳೆಯಿಂದ (ನವೆಂಬರ್ 12) ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಿಂದ ಪಾದಯಾತ್ರೆ ಮೂಲಕ ತೆರಳಿ ಸಾವಿರಾರು ರೈತರಿಂದ ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಅವರು ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ 15 ವಿಧೇಯಕಗಳಿಗೆ ಒಪ್ಪಿಗೆಬೆಳಗಾವಿ ಅಧಿವೇಶನದಲ್ಲಿ 15 ವಿಧೇಯಕಗಳಿಗೆ ಒಪ್ಪಿಗೆ

ಇನ್ನು ಮುಂದಿನ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಈ ಭಾರಿ ನಾನು ಚುನಾವಣೆಗೆ ಸ್ಪರ್ಧಿಸುವುದು ಖಚಿತ, ಆದರೆ, ಹಳೆ ಮೈಸೂರು, ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಡವಿದೆ.

ರೈತ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನಾನು ಎಲ್ಲಿಂದ ಸ್ಪರ್ಧಿಸಬೇಕು ಎನ್ನುವುದನ್ನ ನಿರ್ಧಿಸುತ್ತಾರೆ ಎಂದರು. ನವೆಂಬರ್ 13 ರಿಂದ ಹತ್ತು ದಿನಗಳ ಕಾಲ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯಲಿದೆ.

English summary
Farmers will Siege Suvarna Soudha On First Day of Winter assembly session, said Karnataka Rajya Raitha Sangha president Kodihalli Chandrashekhar in Belagavi on November 11. Winter assembly session start from november 13 in Suvarna Soudha Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X