ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Fathima Mosque controversial : ವಕ್ಪ್ ಬೋರ್ಡ್‌ಗೆ ನೋಟಿಸ್ ನೀಡಿದ ಬೆಳಗಾವಿ ಪಾಲಿಕೆ !

|
Google Oneindia Kannada News

ಬೆಳಗಾವಿ,ಜನವರಿ.16: ಬೆಳಗಾವಿಯ ಸಾರಥಿ ನಗರದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಫಾತಿಮಾ ಮಸೀದಿಯನ್ನು ತೆರವುಗೊಳಿಸುವಂತೆ ಬೆಳಗಾವಿ ಮಹಾನಗರ ಪಾಲಿಕೆಯು ವಕ್ಪ್‌ ಬೋರ್ಡ್‌ಗೆ ನೋಟಿಸ್ ನೀಡಿದೆ.

ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತು ಹಿಂದೂ ಪರಸಂಘಟನೆಗಳು ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಪಾಲಿಕೆ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ ಎನ್ನಲಾಗುತ್ತಿದೆ.

ಬೆಳಗಾವಿ-ಸಿಕಂದರಾಬಾದ್ ರೈಲು, ಮಂತ್ರಾಲಯ ಭಕ್ತರಿಗೆ ಅನುಕೂಲ ಬೆಳಗಾವಿ-ಸಿಕಂದರಾಬಾದ್ ರೈಲು, ಮಂತ್ರಾಲಯ ಭಕ್ತರಿಗೆ ಅನುಕೂಲ

ಮಸೀದಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು, ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಪ್ರತಿಭಟನೆ ನಡೆಸಿ ಪಾಲಿಕೆ ಅಧಿಕಾರಿಗಳಿಗೆ ಏಳು ದಿನಗಳಲ್ಲಿ ಮಸೀದಿ ತೆರವುಗೊಳಿಸುವಂತೆ ಎಚ್ಚರಿಕೆ ನೀಡಿದ್ದರು. ಒಂದು ವೇಳೆ ಪಾಲಿಕೆ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸದೇ ನಿರ್ಲಕ್ಷ ತೋರಿದಲ್ಲಿ ರಾಮಸೇನೆಯ ಕಾರ್ಯಕರ್ತರು ಮಸೀದಿಯನ್ನು ಧ್ವಂಸ ಗೊಳಿಸುವುದಾಗಿ ಎಚ್ಚರಿಕೆ ಸಹ ನೀಡಿದ್ದರು.

Fathima Mosque controversial Belagavi Corporation Issued notice to the Wakf Board

ಅಧಿಕಾರಿ ವರ್ಗ ಯಾವುದೇ ಪ್ರಭಾವಕ್ಕೆ ಒಳಗಾಗದೇ ಕಾನೂನು ನಿಮಯಗಳನ್ನು ಅನುಸರಿಸಬೇಕು. ಇಲ್ಲವಾದಲ್ಲಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದ ಅವರು, ಸಾರಥಿ ಕಾಲೋನಿ ಚಲೋ ಅಭಿಯಾನವನ್ನು ಹಮ್ಮಿಕೊಳ್ಳುವ ಶ್ರೀರಾಮ ಸೇನೆ ಮತ್ತು ಹಿಂದೂ ಪರಸಂಘಟನೆಗಳು ಒಗ್ಗೂಡಿಕೊಂಡು ಮಸೀದಿಯನ್ನು ದ್ವಂಸಗೊಳಿಸುತ್ತೇವೆ ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು.

ರಾಜಕಾರಣಿಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು !

ಮುಂಬರುವ ದಿನಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಜರುಗಲಿದೆ. ಮತದಾರನನ್ನು ಓಲೈಸುವ ಪ್ರಯತ್ನಕ್ಕೆ ಬಿಜೆಪಿ ಮತ್ತು ಕಾಂಗ್ರೇಸ್ ಪಕ್ಷಗಳು ದುಂಬಾಲು ಬಿದ್ದಿವೆ. ಮಸೀದಿ ನಿರ್ಮಾಣಕ್ಕೆ ಕಾಂಗ್ರೆಸ್‌ ಪಕ್ಷವು ಪರೋಕ್ಷವಾಗಿ ಬೆಂಬಲ ಸೂಚಿಸಿತ್ತು. ಅನಧಿಕೃತವಾಗಿ ಮಸೀದಿ ನಿರ್ಮಿಸಿದ್ದರೂ ತೆರವಿಗೆ ಮಹಾನಗರ ಪಾಲಿಕೆ ಹಿಂದೇಟು ಹಾಕುತ್ತಿದೆ. ಪಾಲಿಕೆಯ ಅಧಿಕಾರಿಗಳ ಮೇಲೆ ಶಾಸಕಿ ಒತ್ತಡ ಹಾಕುತ್ತಿದ್ದಾರೆ ಎಂದು ಹಿಂದೂ ಪರ ಸಂಘಟನೆಗಳು ಆರೋಪಿಸಿದ್ದವು. ಇತ್ತ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ಅವರು ಸಹ ಮಸೀದಿ ತೆರವುಗೊಳಿಸುವಂತೆ ಹಿಂದೂ ಪರ ಸಂಘಟನೆಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.

ಫಾತಿಮಾ ಮಸೀದಿ ವಿವಾದವೇನು ?

ಕರ್ನಾಟಕ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘದ ವತಿಯಿಂದ ಖಾಸಗಿ ಲೇಔಟ್‌ ನಿರ್ಮಿಸಲಾಗಿತ್ತು. ಈ ಲೇಔಟ್‌ನಲ್ಲಿದ್ದ ನಿವೇಶನ ಸಂಖ್ಯೆ 19ರ ಮೂಲ ಮಾಲೀಕರು ಮೌಲಾನಾ ಅಬ್ದುಲ್ ಕಲಂ ಆಜಾದ್ ಎಜ್ಯುಕೇಶನಲ್ & ಚಾರಿಟೇಬಲ್ ಸೊಸೈಟಿಗೆ ಗಿಫ್ಟ್ ನೀಡಲಾಗಿದೆ. ಈಗ ನಿವೇಶನದಲ್ಲಿ ಅನಧಿಕೃತವಾಗಿ ಫಾತಿಮಾ ಮಸೀದಿ ನಿರ್ಮಾಣ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದವು. ವಸತಿ ಕಟ್ಟಡದಲ್ಲಿ ಧಾರ್ಮಿಕ ಚುಟುವಟಿಕೆ ನಡೆಸುತ್ತಿರುವ ಹಿನ್ನಲೆಯಲ್ಲಿ ಮಸೀದಿ ತೆರವಿಗೆ ತಾತ್ಕಾಲಿಕ ಆದೇಶವನ್ನು ಸಹ ನೀಡಲಾಗಿತ್ತು. ಈ ಆದೇಶವನ್ನು ತಿರಸ್ಕರಿಸಿದ್ದ ಮುಸ್ಲಿಂ ಮುಖಂಡರು ಇದು ವಕ್ಫ್ ಮಂಡಳಿಯ ಆಸ್ತಿ ಎಂದು ವಾದಕ್ಕಿಳಿದ್ದಿದ್ದರು. ಆದರೇ ಈ ನಿವೇಶನ ನಿಯಮ ಬಾಹಿರವಾಗಿ ವಕ್ಫ ಬೋರ್ಡ್‌ಗೆ ವರ್ಗಾಯಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು.

English summary
The Belagavi Municipal Corporation has issued a notice to the wakf Board to clear the illegally constructed Fatima Masjid in Sarathi Nagar, Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X