ಬೆಳಗಾವಿಗೆ ನಿರ್ಮಲಾ ಸೀತಾರಾಮನ್; ಅಧಿಕಾರಿಗಳಿಂದ ಮಾಹಿತಿ ಸಂಗ್ರಹ
ಬೆಳಗಾವಿ, ಆಗಸ್ಟ್ 10: ರಾಜ್ಯದಲ್ಲಿ ಭೀಕರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಅವಲೋಕನಕ್ಕೆಂದು ಬೆಳಗಾವಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿದ್ದಾರೆ. ನಗರದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ, ಜಿಲ್ಲೆಯಲ್ಲಿ ಆಗಿರುವ ಹಾನಿ ಪ್ರಮಾಣದ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಇಂದು ಬೆಳಗಾವಿ ನಗರದ ನಾನಾ ಕಡೆಗಳಿಗೆ ಅವರು ಭೇಟಿ ನೀಡಲಿದ್ದು, ಬೆಳಗಾವಿ, ಸಂಕೇಶ್ವರ ಮತ್ತಿತರ ಕಡೆಗಳಲ್ಲಿ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಮಧ್ಯಾಹ್ನ 12 ಗಂಟೆಗೆ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸಂಸದ ಸುರೇಶ್ ಅಂಗಡಿ ಉಪಸ್ಥಿತರಿದ್ದರು.












Click it and Unblock the Notifications