ಬೆಳಗಾವಿಯಲ್ಲಿ ಅಂಬ್ಯುಲೆನ್ಸ್‌ಗೆ ಬೆಂಕಿ, ದಾಂಧಲೆ; 14 ಜನರ ಬಂಧನ

ಬೆಳಗಾವಿ, ಜುಲೈ 24 : ಬೆಳಗಾವಿಯಲ್ಲಿ ಕೋವಿಡ್ ಸೋಂಕಿತ ರೋಗಿ ಮೃತಪಟ್ಟ ಬಳಿಕ ಸಂಬಂಧಿಕರು ದಾಂಧಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Recommended Video

      Pride of Karnataka in Egypt - Shubha Muralidhar | Oneindia Kannada

      ಬೆಳಗಾವಿ ನಗರ ಪೊಲೀಸ್ ಆಯುಕ್ತ ಟಿ.ತ್ಯಾಗರಾಜನ್ ಈ ಕುರಿತು ಮಾಹಿತಿ ನೀಡಿದ್ದಾರೆ. "ಬಿಮ್ಸ್ ಆಸ್ಪತ್ರೆ ಮುಂಭಾಗ ಬುಧವಾರ ರಾತ್ರಿ ಅಂಬ್ಯುಲೆನ್ಸ್‌ಗೆ ಬೆಂಕಿ ಇಟ್ಟು, ಆಸ್ಪತ್ರೆಗೆ ನುಗ್ಗಿ ಗಲಾಟೆ ಮಾಡಿ, ಕಲ್ಲು ತೂರಾಟ ನಡೆಸಿ ಶಾಂತಿ ಕದಡಲು ಯತ್ನಿಸಿದ 14 ಆರೋಪಿಗಳನ್ನು ಬಂಧಿಸಲಾಗಿದೆ" ಎಂದು ತಿಳಿಸಿದ್ದಾರೆ.

      ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಈ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ. ಪೊಲೀಸರು ಉಳಿದ ಆರೋಪಿಗಳಿಗಾಗಿ ಹುಡುಕಾಟವನ್ನು ಮುಂದುವರೆಸಿದ್ದಾರೆ.

      ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಘಟನೆಯನ್ನು ಖಂಡಿಸಿದ್ದರು. "ಇದು ಅಮಾನವೀಯ ವರ್ತನೆ. ಇಂತಹ ಸಂದಿಗ್ಧತೆಯಲ್ಲಿ ಅಂಬುಲೆನ್ಸ್ ಏನು ತಪ್ಪು ಮಾಡಿತ್ತು? ಸರ್ಕಾರದ ಆಸ್ತಿಯನ್ನು ಹಾಳು ಮಾಡುವವರಿಗೆ ಶಿಸ್ತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ" ಎಂದು ಟ್ವೀಟ್ ಮಾಡಿದ್ದರು.

      ರೋಗಿ ಆಸ್ಪತ್ರೆಗೆ ದಾಖಲು

      ರೋಗಿ ಆಸ್ಪತ್ರೆಗೆ ದಾಖಲು

      ಜುಲೈ 19ರಂದು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದಲೂ ಅವರು ಬಳಲುತ್ತಿದ್ದರು. ವ್ಯಕ್ತಿಗೆ ಕೋವಿಡ್ ಪರೀಕ್ಷೆ ಮಾಡಿದಾಗ ವರದಿ ಪಾಸಿಟಿವ್ ಬಂದಿತ್ತು.

      ಆಸ್ಪತ್ರೆಯಲ್ಲಿ ರೋಗಿ ಸಾವು

      ಆಸ್ಪತ್ರೆಯಲ್ಲಿ ರೋಗಿ ಸಾವು

      ಕೋವಿಡ್ ಖಚಿತವಾಗಿದ್ದರಿಂದ ಕೋವಿಡ್ ವಾರ್ಡ್‌ನಲ್ಲಿ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ರಾತ್ರಿ ತೀವ್ರ ಉಸಿರಾಟದ ತೊಂದರೆ ಕಾರಣ ಅವರು ಮೃತಪಟ್ಟಿದ್ದರು. ಸಾವಿನ ಸುದ್ದಿ ತಿಳಿದ ಸಂಬಂಧಿಕರು ಆಸ್ಪತ್ರೆಗೆ ನುಗ್ಗಿ ದಾಂಧಲೆ ಮಾಡಿದ್ದರು.

      ಅಂಬ್ಯುಲೆನ್ಸ್‌ಗೆ ಬೆಂಕಿ

      ಅಂಬ್ಯುಲೆನ್ಸ್‌ಗೆ ಬೆಂಕಿ

      ಮೃತಪಟ್ಟ ರೋಗಿಯ ಸುಮಾರು 20 ಸಂಬಂಧಿಕರು ದಾಂಧಲೆ ಮಾಡಿದ್ದರು. ಕಲ್ಲು ತೂರಾಟ ನಡೆಸಿದ್ದರು. ಅಂಬ್ಯುಲೆನ್ಸ್‌ಗೆ ಬೆಂಕಿ ಹಚ್ಚಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

      ಘಟನೆಯ ವಿಡಿಯೋ ಟ್ವೀಟ್ ಮಾಡಿದ್ದ ಸಚಿವರು

      ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಘಟನೆಯನ್ನು ಖಂಡಿಸಿದ್ದರು. ಘಟನೆಯ ವಿಡಿಯೋ ಟ್ವೀಟ್ ಮಾಡಿದ್ದರು. ದಾಂಧಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+