ಭಾರೀ ಮಳೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಬಲಿ
ಬೆಳಗಾವಿ, ಜುಲೈ, 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟದಿಂದ ಅವಂತಾರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇದೀಗ ಭಾರೀ ಮಳೆಗೆ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಸಾವು ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಳೆದೆರಡು ದಿನಗಳಿಂದ ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ ಜಿಲ್ಲೆಯ ಹಲವೆಡೆ ಅವಾಂತರಗಳೇ ಸಂಭವಿಸಿವೆ. ವರುಣಾರ್ಭಟದಿಂದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಜತ್ರಾಟ್‌ವೇಸ್ ಗ್ರಾಮದಲ್ಲಿ ಮನೆಯ ಗೋಡೆ ಕುಸಿದ ಪರಿಣಾಮ ಈ ವೆಳೆ ಮನೆಯಲ್ಲಿದ್ದ ತಿರುಪತಿ ರಾಜಾರಾಮ ವಾಟಕರ್(50) ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ ನಿಪ್ಪಾಣಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ನಡೆಸಿದೆ ಎನ್ನಲಾಗಿದೆ. ಮತ್ತೊಂದೆಡೆ ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದ ಪರಿಣಾಮ, ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲೂಕಿನ ಪ್ರಸಿದ್ಧ ನರಸಿಂಹವಾಡಿಯ ದೇವಸ್ಥಾನ ದತ್ತ ಮಂದಿರ ಜಲಾವೃತವಾಗಿದೆ. ಈ ದೇವಸ್ಥಾನ ಕೃಷ್ಣಾ ಹಾಗೂ ಪಂಚಗಂಗಾ ನದಿಗಳ ಸಂಗಮ ಸ್ಥಾನವಾಗಿದೆ. ಇನ್ನು ಇಷ್ಟೆಲ್ಲ ಅವಾಂತರಗಳಾದ್ರೂ ಕೂಡ ಈ ದೇವಸ್ಥಾನಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಭಕ್ತರು ನೀರಿನಲ್ಲಿಯೇ ಪ್ರದಕ್ಷಿಣೆ ಹಾಕುತ್ತಿದ್ದಾರೆ.
ಪ್ರವಾಹದ ಭೀತಿಯಲ್ಲಿ ಜನರು: ಮಹಾರಾಷ್ಟ್ರದ ಯಾವುದೇ ಜಲಾಶಯದಿಂದ ನೀರು ಬಿಡದಿದ್ದರೂ ಸಹ ಈ ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣ ಆಗಿದೆ. ಇನ್ನೂ ನೀರು ಬಿಟ್ಟರೇ ಏನೆಲ್ಲ ಅನಾಹುತಗಳು ಸಂಭವಿಸುತ್ತವೆಯೋ ಎನ್ನುವ ಭಯದಲ್ಲಿ ಇಲ್ಲಿನ ಜನರಿದ್ದಾರೆ.
ಖಾನಾಪುರ ತಾಲ್ಲೂಕಿಗೆ ಜಿಲ್ಲಾಧಿಕಾರಿ ಭೇಟಿ: ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಹಿರಿಯ ಅಧಿಕಾರಿಗಳು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಅವರು ಜೊತೆಗಿದ್ದರು.
ಖಾನಾಪೂರ ತಾಲೂಕಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಸ್ತುತದ ಸ್ಥಿತಿಗತಿ ಬಗ್ಗೆ, ಸಂಚಾರ ವ್ಯವಸ್ಥೆಯ ಬಗ್ಗೆ ಹಾಗೂ ನದಿ ಹಾಗೂ ಹೊಳೆಗಳ ನೀರಿನ ಮಟ್ಟ ಪರಿಶೀಲಿಸಿದರು. ತಾಲೂಕಿನ ಕುಸುಮಳಿ ಗ್ರಾಮದಲ್ಲಿನ ಸೇತುವೆ ಪರಿಶೀಲಿಸಿದರು. ಈ ಸಂಬಂಧ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನವನ್ನು ನೀಡಿದರು.












Click it and Unblock the Notifications