ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿ, ಡಿಸ್ನಿಲ್ಯಾಂಡ್ ಆಮೇಲೆ: ಯಡಿಯೂರಪ್ಪ

ಬೆಳಗಾವಿ, ಡಿಸೆಂಬರ್ 14: ಮೊದಲು ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿ ಅದನ್ನು ಬಿಟ್ಟು ಡಿಸ್ನೀಲ್ಯಾಂಡ್ ಕಟ್ಟಲು ಹೋಗಬೇಡಿ ಎಂದು ವಿರೋಧ ಪಕ್ಷ ನಾಯಕ ಯಡಿಯೂರಪ್ಪ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ಉತ್ತರ ಕರ್ನಾಟಕಕ್ಕಿಂತಲೂ ಡಿಸ್ನೀಲ್ಯಾಂಡ್ ಹೆಚ್ಚಾಗಿದೆ, ಇದು ನಿರ್ಲಕ್ಷ್ಯದ ಪರಮಾವಧಿ ಎಂದು ಅವರು ಹೇಳಿದರು.

ನೀರಾವರಿ ಯೋಜನೆಗಳನ್ನು ಮಾಡಿ ಬರ ನೀಗಿಸುವುದು ಬಿಟ್ಟು ಡಿಸ್ನೀಲ್ಯಾಂಡ್ ಮಾಡುತ್ತೇವೆ ಎನ್ನುತ್ತಿರುವುದು ಸರ್ಕಾರದ ಬೇಜವಾಬ್ದಾರಿತನ ತೋರಿಸುತ್ತದೆ. ಯಾವುದಕ್ಕೆ ಆದ್ಯತೆ ಕೊಡಬೇಕು ಎನ್ನುವುದೇ ಈ ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ ಎಂದು ಅವರು ಯಡಿಯೂರಪ್ಪ ದೂರಿದರು.

First develop North Karnataka then made disneyland: Yeddyurappa

ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೋಮವಾರದಿಂದ ಹೋರಾಟ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.

ಸರ್ಕಾರವು ಕೆ.ಆರ್‌.ಎಸ್‌ ಅನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಮಾಡುವ ಯೋಜನೆಯನ್ನು ರೂಪಿಸಿದ್ದು, ಡಿಪಿಆರ್ ಸಹ ತಯಾರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+