• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಂತ್ರಸ್ತರ ಮನೆ ನಿರ್ಮಾಣಕ್ಕೆ 5 ಲಕ್ಷ: ಯಡಿಯೂರಪ್ಪ ಭರವಸೆ

|

ಬೆಳಗಾವಿ, ಸೆಪ್ಟೆಂಬರ್ 10: ಸ್ಥಳಾಂತರಕ್ಕೆ ಸಿದ್ಧವಿರುವುದಾಗಿ ನದಿತೀರದ ಗ್ರಾಮಸ್ಥರು ಲಿಖಿತವಾಗಿ ತಿಳಿಸಿದರೆ ಇಡೀ ಗ್ರಾಮವನ್ನು ಎತ್ತರದ ಪ್ರದೇಶಕ್ಕೆ ಸಂಪೂರ್ಣ ಸ್ಥಳಾಂತರಿಸಿ ನವಗ್ರಾಮ ನಿರ್ಮಿಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿದರು.

ಹೊಸ ಗ್ರಾಮದಲ್ಲಿ ಸುಸಜ್ಜಿತ ಶಾಲೆ, ಆಸ್ಪತ್ರೆ ಸೇರಿದಂತೆ ಎಲ್ಲ ಬಗೆಯ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಅವರು ಭರವಸೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಹಂಪಿಹೊಳಿ ಗ್ರಾಮಕ್ಕೆ ಮಂಗಳವಾರ (ಸೆ.10) ಭೇಟಿ ನೀಡಿದ ಬಳಿಕ ಸುರೇಬಾನ ಗ್ರಾಮದ ಪರಿಹಾರ ಕೇಂದ್ರದಲ್ಲಿ ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಅಮಿತ್ ಶಾ ಕಟ್ಟುನಿಟ್ಟಿನ ಫರ್ಮಾನಿಗೆ ರಾಜ್ಯ ಬಿಜೆಪಿ ಮುಖಂಡರು ಬೇಸ್ತು

ಪ್ರವಾಹದಿಂದ ಸಂಪೂರ್ಣ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಹೊಸ ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಲು ಒಂದು ವಾರದೊಳಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಒಂದು ಮನೆ ನಿರ್ಮಾಣಕ್ಕೆ ಒಟ್ಟಾರೆ ಐದು ಲಕ್ಷ ರೂಪಾಯಿ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲ ಕಂತಿನಲ್ಲಿ ಅಡಿಪಾಯಕ್ಕೆ ನೀಡುವ ಒಂದು ಲಕ್ಷ ರೂಪಾಯಿ ಬಳಸಿಕೊಂಡು ಕೆಲಸ ಆರಂಭಿಸಬೇಕು ಎಂದರು.

ಮನೆ ಅಡಿಪಾಯಕ್ಕೆ ಒಂದು ಲಕ್ಷ ಹಣ: ಯಡಿಯೂರಪ್ಪ

ಮನೆ ಅಡಿಪಾಯಕ್ಕೆ ಒಂದು ಲಕ್ಷ ಹಣ: ಯಡಿಯೂರಪ್ಪ

ಅಡಿಪಾಯ ಹಾಕಲು ಮುಂದಾಗುವ ಕುಟುಂಬಗಳಿಗೆ ವಾರದೊಳಗೆ ಒಂದು ಲಕ್ಷ ರೂಪಾಯಿ ಮೊದಲ ಕಂತು ಒಂದು ವಾರದೊಳಗೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಅದೇ ರೀತಿ ಮನೆಗಳ ದುರಸ್ತಿಗೆ ಒಂದು ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಅಭಿಮಾನಿಗೆ ಚಪ್ಪಲಿ ಉಡುಗೊರೆ ಕೊಟ್ಟ ಸಿಎಂ

ಅಂಗಡಿ-ಮುಂಗಟ್ಟು ಮಾಲೀಕರಿಗೆ ಹಣ: ಯಡಿಯೂರಪ್ಪ

ಅಂಗಡಿ-ಮುಂಗಟ್ಟು ಮಾಲೀಕರಿಗೆ ಹಣ: ಯಡಿಯೂರಪ್ಪ

ತಾತ್ಕಾಲಿಕವಾಗಿ ಸಂತ್ರಸ್ತರಿಗೆ ಶೆಡ್ ನಿರ್ಮಾಣ ಕಾಮಗಾರಿಯನ್ನು ಮೂರ್ನಾಲ್ಕು ದಿನಗಳಲ್ಲಿ ಆರಂಭಿಸಬೇಕು ಎಂದು ಸೂಚನೆ ನೀಡಿದರು. ಅಷ್ಟೆ ಅಲ್ಲದೆ, ಪ್ರವಾಹದಿಂದ ಹಾನಿಗೊಳಗಾದ ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ಕೂಡ ತಲಾ ಹತ್ತು ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಳೆನಾಶಕ್ಕೆ ಸೂಕ್ತ ಪರಿಹಾರ: ಯಡಿಯೂರಪ್ಪ

ಬೆಳೆನಾಶಕ್ಕೆ ಸೂಕ್ತ ಪರಿಹಾರ: ಯಡಿಯೂರಪ್ಪ

ಬೆಳೆನಾಶಕ್ಕೆ ಸೂಕ್ತ ಪರಿಹಾರ ನೀಡಲು ಕೇಂದ್ರದಿಂದ ಹೆಚ್ವಿನ ಪರಿಹಾರ ನೀಡಲು ಪ್ರಯತ್ನಿಸಲಾಗುತ್ತಿದ್ದು, ನೇಕಾರ ಕುಟುಂಬಗಳಿಗೂ ಸೂಕ್ತ ಪರಿಹಾರ ನೀಡಲಾಗುವುದು ಎಂದರು. ಮಲಪ್ರಭಾ ನದಿ ದಂಡೆಯ ತಡೆಗೋಡೆ ಒಡೆದ ಪರಿಣಾಮ ಹಂಪಿಹೊಳಿ ಗ್ರಾಮಕ್ಕೆ ನೀರು ನುಗ್ಗುತ್ತಿರುವುದರಿಂದ ತಡೆಗೋಡೆ ನಿರ್ಮಾಣಕ್ಕೆ ತಕ್ಷಣ ಹಣ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಲಕ್ಷ್ಮಣ ಸವದಿಗೆ ಪಕ್ಷದ ಬಗ್ಗೆ ಬೇಸರ, ಆಪ್ತರ ಬಳಿ ಏನು ಹೇಳಿದ್ರು?

ಕೇಂದ್ರದಿಂದ ಹೆಚ್ಚಿನ ಪರಿಹಾರ ಕೊಡಿಸುವ ಯತ್ನ: ಯಡಿಯೂರಪ್ಪ

ಕೇಂದ್ರದಿಂದ ಹೆಚ್ಚಿನ ಪರಿಹಾರ ಕೊಡಿಸುವ ಯತ್ನ: ಯಡಿಯೂರಪ್ಪ

ಬೆಳೆನಾಶಕ್ಕೆ ಸೂಕ್ತ ಪರಿಹಾರ ನೀಡಲು ಕೇಂದ್ರದಿಂದ ಹೆಚ್ಚಿನ ಪರಿಹಾರ ನೀಡಲು ಪ್ರಯತ್ನಿಸಲಾಗುತ್ತಿದ್ದು, ನೇಕಾರ ಕುಟುಂಬಗಳಿಗೂ ಸೂಕ್ತ ಪರಿಹಾರ ನೀಡಲಾಗುವುದು ಎಂದರು. ಮನೆಗಳ ಹಾನಿ, ಮಗ್ಗಗಳ ನಷ್ಟ ಮತ್ತು ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸುವುದರ ಜತೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ.

English summary
Government will release five lakh for building home for flood victims says Yediyurappa. He said government will release one lakh as first installment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X