• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿ : ಭೀಕರ ಪ್ರವಾಹ, 1.45 ಲಕ್ಷ ಜನರ ಸ್ಥಳಾಂತರ

|

ಬೆಳಗಾವಿ, ಆಗಸ್ಟ್ 09 : ಮಹಾರಾಷ್ಟ್ರದಿಂದ ಬಿಡಲಾಗುತ್ತಿರುವ ಭಾರಿ ಪ್ರಮಾಣದ ನೀರು ಹಾಗೂ ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ 14 ತಾಲೂಕುಗಳಲ್ಲೂ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 1.45 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದೆ.

In Pics: ಕರ್ನಾಟಕದಲ್ಲಿ ಮಹಾ ಮಳೆ

"ಶುಕ್ರವಾರದ ತನಕ ಒಟ್ಟು 323 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಇದುವರೆಗೆ 28,103 ಕುಟುಂಬಗಳನ್ನು ಸ್ಥಳಾಂತರಿಸಿ, ಪರಿಹಾರ ಕೇಂದ್ರಗಳಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ" ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದ್ದಾರೆ.

ಧಾರವಾಡ : 10 ವರ್ಷದಲ್ಲೇ ದಾಖಲೆ ಮಳೆ, 7650 ಕುಟುಂಬ ಸ್ಥಳಾಂತರ

323 ಗ್ರಾಮಗಳು ಹಾಗೂ ಕೆಲವು ಪಟ್ಟಣ ಪ್ರದೇಶಗಳೂ ಸೇರಿದಂತೆ ಒಟ್ಟಾರೆ 1,45,368 ಜನರನ್ನು ಸ್ಥಳಾಂತರಿಲಾಗಿದೆ. ಪ್ರವಾಹಕ್ಕೆ ಸಿಲುಕಿದ 43,972 ಜಾನುವಾರುಗಳನ್ನು ಕೂಡ ಸ್ಥಳಾಂತರಿಸುವುದರ ಜತೆಗೆ ಸೂಕ್ತ ರಕ್ಷಣೆ ಮತ್ತು ಮೇವಿನ ವ್ಯವಸ್ಥೆ ಕಲ್ಪಿಸಲಾಗಿದೆ.

2005-06ರ ಮಳೆಗೆ ಬೆಳಗಾವಿಯಲ್ಲಿ ಆದ ಹಾನಿ ಪ್ರಮಾಣ 424 ಕೋಟಿಗೂ ಹೆಚ್ಚು

ಪ್ರವಾಹಕ್ಕೆ ಸಿಲುಕಿರುವ ಜನರ ರಕ್ಷಣೆಗೆ ಸೇನೆಯ 3 ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಹೆಲಿಕಾಪ್ಟರ್ ಬಳಸಿಕೊಂಡು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿರುವ ನೌಕಾ ಮತ್ತು ವಾಯುಸೇನೆಯ ಯೋಧರು ಗುರುವಾರ ಒಟ್ಟು 32 ಜನರನ್ನು ರಕ್ಷಣೆ ಮಾಡಿದ್ದಾರೆ.

327 ಪರಿಹಾರ ಕೇಂದ್ರ ಸ್ಥಾಪನೆ

327 ಪರಿಹಾರ ಕೇಂದ್ರ ಸ್ಥಾಪನೆ

‌ಬೆಳಗಾವಿ ಜಿಲ್ಲೆಯ 14 ತಾಲೂಕುಗಳಲ್ಲಿ ಇದುವರೆಗೆ 327 ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದೆ. ಊಟೋಪಹಾರ, ವೈದ್ಯಕೀಯ ಸೌಲಭ್ಯ ಸೇರಿದಂತೆ ಎಲ್ಲ ಬಗೆಯ ವ್ಯವಸ್ಥೆ ಒದಗಿಸಲಾಗುತ್ತಿದೆ. ಈ ಪರಿಹಾರ ಕೇಂದ್ರಗಳಲ್ಲಿ ಮಕ್ಕಳು ಸೇರಿದಂತೆ 82,425 ಜನರು ಆಶ್ರಯ ಪಡೆದುಕೊಂಡಿದ್ದಾರೆ. ಅದೇ ರೀತಿ ರಕ್ಷಿಸಲಾದ ಹಾಗೂ ಸ್ಥಳಾಂತರಿಸಲಾದ ಜಾನುವಾರುಗಳ ಪೈಕಿ 26,750 ಜಾನುವಾರುಗಳಿಗೆ ಪರಿಹಾರ ಕೇಂದ್ರದಲ್ಲಿ ಆಶ್ರಯ ಒದಗಿಸಲಾಗಿದೆ.

ಚಿಕ್ಕೋಡಿಯಲ್ಲಿ ಹೆಚ್ಚು ಸ್ಥಳಾಂತರ

ಚಿಕ್ಕೋಡಿಯಲ್ಲಿ ಹೆಚ್ಚು ಸ್ಥಳಾಂತರ

ಚಿಕ್ಕೋಡಿ ತಾಲೂಕಿನಲ್ಲಿ ಅತೀ ಹೆಚ್ಚು 6953 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅಥಣಿಯಲ್ಲಿ 4351, ರಾಯಬಾಗದಲ್ಲಿ 4349, ಖಾನಾಪುರದಲ್ಲಿ 236, ಹುಕ್ಕೇರಿಯಲ್ಲಿ 975, ಗೋಕಾಕದಲ್ಲಿ 1082, ಕಾಗವಾಡದಲ್ಲಿ 4599, ನಿಪ್ಪಾಣಿಯಲ್ಲಿ 2973, ಮೂಡಲಗಿಯಲ್ಲಿ 1100, ಬೆಳಗಾವಿಯಲ್ಲಿ 546, ಬೈಲಹೊಂಗಲದಲ್ಲಿ 38, ರಾಮದುರ್ಗದಲ್ಲಿ 628, ಸವದತ್ತಿಯಲ್ಲಿ 631 ಹಾಗೂ ಕಿತ್ತೂರಿನಲ್ಲಿ 27 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

3 ಹೆಲಿಕಾಪ್ಟರ್ ನಿಯೋಜನೆ

3 ಹೆಲಿಕಾಪ್ಟರ್ ನಿಯೋಜನೆ

ಪ್ರವಾಹಕ್ಕೆ ಸಿಲುಕಿರುವ ಜನರ ರಕ್ಷಣೆಗೆ ಸೇನೆಯ ಮೂರು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿರುವ ನೌಕಾ ಮತ್ತು ವಾಯುಸೇನೆಯ ಯೋಧರು ಆಗಸ್ಟ್ 8 ರಂದು ಒಟ್ಟು 32 ಜನರನ್ನು ರಕ್ಷಿಸಿದ್ದಾರೆ. ಕಾರ್ಯಾಚರಣೆ ಇಂದೂ ಮುಂದುವರಿದಿದೆ.

ಆಹಾರ ಪೊಟ್ಟಣ ವಿತರಣೆ

ಆಹಾರ ಪೊಟ್ಟಣ ವಿತರಣೆ

ಪ್ರವಾಹದಿಂದಾಗಿ ಚಿಕ್ಕೋಡಿ ತಾಲೂಕಿನ ಕೆಲ ಗ್ರಾಮಗಳು ನಡುಗಡ್ಡೆಯಂತಾಗಿದ್ದು, ಅಂತಹ ಪ್ರದೇಶಗಳಲ್ಲಿ ಹೆಲಿಕಾಪ್ಟರ್ ಮೂಲಕ ಆಹಾರ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ಸದಲಗಾ, ಇಂಗಳಿ, ಚಂದೂರ ಟೇಕ್, ಯಡೂರವಾಡಿ ಮತ್ತಿತರ ಕಡೆಗಳಲ್ಲಿ ಆಹಾರ ಪೊಟ್ಟಣ ಮತ್ತು ಕುಡಿಯುವ ನೀರಿನ ಬಾಟಲ್ ಗಳನ್ನು ಸೇನಾ ಹೆಲಿಕಾಪ್ಟರ್ ಮೂಲಕ ಪೂರೈಸಲಾಗುತ್ತಿದೆ. ಬೆಳಗಾವಿ ನಗರದಲ್ಲಿಯೂ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿ, ಮಹಾನಗರ ಪಾಲಿಕೆಯ ವತಿಯಿಂದ ನಿರ್ವಹಿಸಲಾಗುತ್ತಿದೆ.

ಆತಂಕಕ್ಕೆ ಒಳಗಾಗಬೇಡಿ

ಆತಂಕಕ್ಕೆ ಒಳಗಾಗಬೇಡಿ

ಸೇನೆ, ಪೊಲೀಸ್, ಎನ್.ಡಿ.ಆರ್.ಎಫ್., ಎಸ್.ಡಿ.ಆರ್.ಎಫ್, ಗೃರಕ್ಷಕದಳ ಸೇರಿದಂತೆ ಸರ್ಕಾರದ ಎಲ್ಲ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಜನರು ಆತಂಕಕ್ಕೆ ಒಳಗಾಗದೇ ತುರ್ತು ಸಂದರ್ಭಗಳಲ್ಲಿ ಸಹಾಯವಾಣಿ ಕೇಂದ್ರಗಳು ಅಥವಾ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

English summary
As many as 1.45 people in Belagavi district were hit by floods and shifted families to rehabilitation center.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X