ಬೆಳಗಾವಿ; ಸಚಿವ ಸತೀಶ್ ಜಾರಕಿಹೊಳಿ ಕನಸಿನ ಯೋಜನೆಗೆ ಮರುಜೀವ

ಬೆಳಗಾವಿ, ಜನವರಿ 07: ಬೆಳಗಾವಿಯಲ್ಲಿ ಸಂಚಾರ ದಟ್ಟಣೆ ನಿವಾರಿಸಲು 4.50 ಕಿ. ಮೀ. ಉದ್ದದ ಫ್ಲೈಓವರ್ ನಿರ್ಮಾಣ ಮಾಡಬೇಕು ಎಂಬುದು ಸತೀಶ್ ಜಾರಕಿಹೊಳಿ ಚಿಂತನೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ರೂಪುರೇಷೆ ಸಿದ್ಧಪಡಿಸಿದರೂ ಯೋಜನೆ ಕಾರ್ಯಗತವಾಗಲಿಲ್ಲ.

ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಈ ಫ್ಲೈಓವರ್ ನಿರ್ಮಾಣ ಯೋಜನೆಗೆ ಮರು ಚಾಲನೆ ನೀಡಿದ್ದಾರೆ.

Flyover In Belagavi Satish Jarkiholi Dream Project

ಬೆಳಗಾವಿ‌ ನಗರದ ಫ್ಲೈ ಓವರ್ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆ ನಡೆಯಿತು. ಮಹಾನಗರ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಂಜಿನಿಯರ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

ನಗರದಲ್ಲಿ ವಾಹನ ಸಂಚಾರ ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ-48 ರಿಂದ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಒಟ್ಟಾರೆ 4.50 ಕಿ. ಮೀ. ಉದ್ದದ ಫ್ಲೈ ಓವರ್ ನಿರ್ಮಾಣ ಮಾಡಬೇಕು ಎಂಬುದು ಸತೀಶ್ ಜಾರಕಿಹೊಳಿ ಅವರ ಕನಸಿನ ಯೋಜನೆ. ಸಭೆಯಲ್ಲಿ ಯೋಜನೆ ಕುರಿತು ವಿವರವಾದ ಚರ್ಚೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, "ಫ್ಲೈ ಓವರ್ ನಿರ್ಮಾಣವು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಕನಸಿನ ಯೋಜನೆಯಾಗಿದೆ. ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುವುದರಿಂದ ಮುಂಬರುವ ದಿನಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಫ್ಲೈ ಓವರ್ ನಿರ್ಮಿಸಲು ಉದ್ಧೇಶಿಸಲಾಗಿದೆ" ಎಂದು ತಿಳಿಸಿದರು.

"ಈ ಫ್ಲೈ ಓವರ್ ನಿರ್ಮಾಣದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಅಶೋಕ ವೃತ್ತ, ಆರ್. ಟಿ. ಓ. ವೃತ್ತ ಮತ್ತು ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಸಂಚಾರ ಸುಗಮಗೊಳ್ಳಲಿದೆ. ನೂತನ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಹಾಗೂ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಗಳಿಗೆ ಅನುಕೂಲವಾಗುವಂತೆ ಫ್ಲೈ ಓವರ್ ವಿನ್ಯಾಸಗೊಳಿಸಲಾಗುವುದು" ಎಂದು ಜಿಲ್ಲಾಧಿಕಾರಿಗಳು ವಿವರಣೆ ನೀಡಿದರು.

ಹೇಗಿದೆ ಫ್ಲೈ ಓವರ್ ಯೋಜನೆ?; ರಾಷ್ಟ್ರೀಯ ಹೆದ್ದಾರಿ (ಎನ್.ಎಚ್-48)ಯಿಂದ ಸಂಕಮ್ ಹೋಟೆಲ್, ಅಶೋಕ‌ ವೃತ್ತ, ಆರ್. ಟಿ. ಓ. ವೃತ್ತದ ಮೂಲಕ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಫ್ಲೈ ಓವರ್ ನಿರ್ಮಾಣಗೊಳ್ಳಲಿದೆ. ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಅಶೋಕ ವೃತ್ತ ಮತ್ತು ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ರೋಟರಿ ನಿರ್ಮಿಸಲಾಗುತ್ತದೆ. ಅಶೋಕ ವೃತ್ತದಲ್ಲಿ ಒಂದು ರ್‍ಯಾಂಪ್ ಬಸ್ ನಿಲ್ದಾಣ, ಒಂದು ಆರ್. ಟಿ. ಓ. ವೃತ್ತದ ಕಡೆ ಹಾಗೂ ಇನ್ನೊಂದು ಮಹಾಂತೇಶ ನಗರ ಕಡೆಯ ರಸ್ತೆಗೆ ಸೇರಲಿದೆ.

ಅದೇ ರೀತಿ ಆರ್. ಟಿ. ಓ. ವೃತ್ತದಲ್ಲಿ ಕೂಡ ಮೂರು ರ್‍ಯಾಂಪ್ ಗಳಿರಲಿವೆ. ಚೆನ್ನಮ್ಮ ವೃತ್ತ, ಕೃಷ್ಣ ದೇವರಾಯ ವೃತ್ತ (ಕೊಲ್ಲಾಪುರ ಸರ್ಕಲ್) ಹಾಗೂ ಬಸ್ ನಿಲ್ದಾಣ ಕಡೆ ಸಂಪರ್ಕ ಕಲ್ಪಿಸಲಿವೆ. ಇದಲ್ಲದೇ ಒಂದು ರಸ್ತೆ ಮೇಲ್ಸೇತುವೆ (ಆರ್.ಓ.ಬಿ) ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸರ್ವೀಸ್ ರಸ್ತೆ‌ಯನ್ನು ಕೂಡ ಕಲ್ಪಿಸಲು ಉದ್ದೇಶಿಸಲಾಗಿರುತ್ತದೆ. ನಗರದ ಹೃದಯಭಾಗವಾಗಿರುವ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಕೂಡು ರಸ್ತೆಗಳಲ್ಲಿ ದೊಡ್ಡ ಕಮಾನುಗಳಿರಲಿವೆ. ಒಟ್ಟಾರೆ 4.50 ಕಿ.ಮೀ. ಉದ್ದದ ಫ್ಲೈಓವರ್ ಇದಾಗಿರಲಿದೆ.

ಬಿಎಸ್ಎನ್ಎಲ್, ಹೆಸ್ಕಾಂ, ಕೆ.ಎಸ್.ಆರ್.ಟಿ.ಸಿ ಹಾಗೂ ನಗರ ನೀರು ಸರಬರಾಜು ಮಂಡಳಿ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಈ ಕಾಮಗಾರಿ ವ್ಯಾಪ್ತಿಯಲ್ಲಿರುವ ಆಯಾ ಇಲಾಖೆಗೆ ಸಂಬಂಧಿಸಿದ ವ್ಯವಸ್ಥೆಯನ್ನು ತಾತ್ಕಾಲಿಕ ಸ್ಥಳಾಂತರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+