ಬೆಳಗಾವಿ: ಮತದಾನ ನೋಡಲು ಬಂದ 5 ದೇಶಗಳ ಅಧಿಕಾರಿಗಳು
ಬೆಳಗಾವಿ, ಮೇ 7: ದೇಶದಲ್ಲಿ 3ನೇ ಹಂತ ಮತ್ತು ಕರ್ನಾಟಕದ 2ನೇ ಹಂತದ ಲೋಕಸಭಾ ಚುನಾವಣೆ ಮತದಾನ ಮಂಗಳವಾರ ನಡೆಯುತ್ತಿದೆ. ಕರ್ನಾಟಕದಲ್ಲಿ 14 ಲೋಕಸಭಾ ಕ್ಷೇತ್ರದಲ್ಲಿ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ.
ಮಂಗಳವಾರ ಮತದಾನ ನಡೆಯುತ್ತಿರುವ ಲೋಕಸಭಾ ಕ್ಷೇತ್ರಗಳಲ್ಲಿ ಬೆಳಗಾವಿ ಸಹ ಒಂದು. ರಾಜ್ಯದಲ್ಲಿಯೇ ಅತಿ ಹೆಚ್ಚು ವಿಧಾನಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಬೆಳಗಾವಿ, ಚಿಕ್ಕೋಡಿ ಎಂದು ಎರಡು ಲೋಕಸಭಾ ಕ್ಷೇತ್ರಗಳಾಗಿ ವಿಂಗಡಿಸಲಾಗಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಮತದಾನದ ಪ್ರಕ್ರಿಯೆಯನ್ನು ವೀಕ್ಷಣೆ ಮಾಡಲು 5 ರಾಷ್ಟ್ರಗಳ ಚುನಾವಣಾ ಆಯೋಗದ ಅಂತರ್ ರಾಷ್ಟ್ರೀಯ ನಿಯೋಗದ ಸದಸ್ಯರು ಆಗಮಿಸಿದ್ದಾರೆ. ಮಂಗಳವಾರ ಅವರು ಬೆಳಗಾವಿ ನಗರದ ವಿವಿಧ ಮತಗಟ್ಟೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ವೀಕ್ಷಿಸಿದರು. ಮತಗಟ್ಟೆಯ ಒಳಗೆ ತೆರಳಿ ಅಧಿಕಾರಿಗಳ ಜೊತೆ ಪ್ರಕ್ರಿಯೆಗಳ ಕುರಿತು ಮಾಹಿತಿ ಸಂಗ್ರಹಣೆಯನ್ನು ಮಾಡಿದರು.
ಜಿಲ್ಲಾಡಳಿತ ಮಾಹಿತಿ ನೀಡಿತ್ತು: ಭಾರತ ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ಆದ್ದರಿಂದ ಲೋಕಸಭಾ ಚುನಾವಣಾ ಪ್ರಕ್ರಿಯೆ ವೀಕ್ಷಣೆಗಾಗಿ ಒಟ್ಟು 16 ದೇಶಗಳ ಪ್ರತಿನಿಧಿಗಳು ಈಗಾಗಲೇ ಭಾರತಕ್ಕೆ ಬಂದಿದ್ದಾರೆ. ಇವರಲ್ಲಿ 5 ದೇಶಗಳ ಚುನಾವಣಾ ಆಯೋಗಗಳ 10 ಮುಖ್ಯಸ್ಥರು/ ಸದಸ್ಯರರು/ ಅಧಿಕಾರಿಗಳ ಅಂತರ್ ರಾಷ್ಟ್ರೀಯ ನಿಯೋಗ ಬೆಳಗಾವಿ ಜಿಲ್ಲೆಗೆ ಆಗಮಿಸಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿತ್ತು.
ಬೆಳಗಾವಿ ಜಿಲ್ಲೆಯಲ್ಲಿ 2055870 ಪುರುಷ ಮತದಾರರು, 2049169 ಮಹಿಳಾ ಮತದಾರರು ಹಾಗೂ 186 ಇತರೆ ಮತದಾರರು ಸೇರಿದಂತೆ ಒಟ್ಟು 4105225 ಮತದಾರರಿದ್ದಾರೆ. ಮತದಾನ ಮಾಡಲು ಬರುವ ಜನರಿಗಾಗಿಯೇ ಅಗತ್ಯ ಮೂಲಸೌಕರ್ಯದ ವ್ಯವಸ್ಥೆ ಮಾಡಲಾಗಿದೆ. ಮತದಾನ ಪ್ರಕ್ರಿಯೆ ಹೇಗೆ ನಡೆಯುತ್ತದೆ? ಎಂದು ನಿಯೋಗ ಪರಿಶೀಲನೆಯನ್ನು ನಡೆಸುತ್ತಿದೆ.
ಕೇಂದ್ರ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ವಿವಿಧ ದೇಶಗಳ ಚುನಾವಣಾ ಆಯೋಗದ ಅಧಿಕಾರಿ, ಸಿಬ್ಬಂದಿಗಳ ತಂಡ ಭಾರತಕ್ಕೆ ಮತದಾನ ಪ್ರಕ್ರಿಯೆಯನ್ನು ವೀಕ್ಷಿಸಲು ಆಗಮಿಸಿದೆ. ದೇಶದಲ್ಲಿ ಒಟ್ಟು 7 ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮಂಗಳವಾರ ದೇಶದಲ್ಲಿ 3ನೇ ಹಂತದ ಮತದಾನ ನಡೆಯುತ್ತಿದೆ.
ಭೂತಾನ್, ಮಂಗೋಲಿಯಾ, ಆಸ್ಟ್ರೇಲಿಯಾ, ಮಡಗಾಸ್ಕರ್, ಫಿಜಿ, ರಷ್ಯಾ, ಮಾಲ್ಡೋವಾ, ಕಾಂಬೋಡಿಯಾ, ನೇಪಾಳ, ಫಿಲಿಫೈನ್ಸ್, ಶ್ರೀಲಂಕಾ, ಜಿಂಬಾಬ್ವೆ, ಬಾಂಗ್ಲಾದೇಶ, ಕಝಕಿಸ್ತಾನ, ನಮೀಬಿಯಾ ಸೇರಿದಂತೆ ವಿವಿಧ ದೇಶದ ಪ್ರತಿನಿಧಿಗಳು ಭಾರತಕ್ಕೆ ಚುನಾವಣೆ ವೀಕ್ಷಿಸಲು ಆಗಮಿಸಿದ್ದಾರೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ












Click it and Unblock the Notifications