Siddaramaiah-Bommai : ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಬೊಮ್ಮಾಯಿ ಬೆನ್ನು ತಟ್ಟಿದ ಸಿದ್ದರಾಮಯ್ಯ
ಕರ್ನಾಟಕ ಚುನಾವಣಾ ಕಣ ರಂಗೇರಿದೆ, ಎಲ್ಲಾ ಪಕ್ಷಗಳ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾ ಮತಯಾಚನೆ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಮುಖಾಮುಖಿಯಾದ ಘಟನೆ ನಡೆದಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಬ್ಬರು ರಾಜಕೀಯ ಮುಖಂಡರು ಆಕಸ್ಮಿಕವಾಗಿ ಎದುರಾಗಿದ್ದಾರೆ.
ಸಿದ್ದರಾಮಯ್ಯ ಮತ್ತು ಬೊಮ್ಮಾಯಿ ಮುಖಾಮುಖಿಯಾಗಿರುವ ವಿಡಿಯೋ ಸದ್ಯ ಸಾಕಷ್ಟು ಗಮನ ಸೆಳೆಯುತ್ತಿದೆ. ಇಬ್ಬರೂ ಹಿರಿಯ ರಾಜಕಾರಣಿಗಳು ನಗು ನಗುತ್ತಲೇ ಮಾತನಾಡಿದ್ದಾರೆ. ಸಿದ್ದರಾಮಯ್ಯ ನಗು ನಗುತ್ತಲೇ ಬೊಮ್ಮಾಯಿ ಬೆನ್ನು ತಟ್ಟಿದ್ದಾರೆ. ನಂತರ ಇಬ್ಬರೂ ಕೆಲ ಹೊತ್ತು ನಗು ನಗುತ್ತಲೇ ಮಾತನಾಡುತ್ತಾ ಹೆಜ್ಜೆ ಹಾಕಿದರು.

ರಾಜಕೀಯದಲ್ಲಿ ಏನೇ ವಿರೋಧವಿದ್ದರೂ ಸಿದ್ದರಾಮಯ್ಯ ಎಲ್ಲಾ ಪಕ್ಷದ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಬಸವರಾಜ ಬೊಮ್ಮಾಯಿ ಕೂಡ ಕಾಮನ್ ಮ್ಯಾನ್ ಸಿಎಂ ಎಂದೇ ಕರೆಸಿಕೊಂಡಿದ್ದಾರೆ. ಇತ್ತೀಚೆಗೆ ತಾನೇ ಸಿದ್ದರಾಮಯ್ಯ ನೀಡಿದ್ದ ಲಿಂಗಾಯತ ಸಿಎಂ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿತ್ತು.
ಬಸವರಾಜ ಬೊಮ್ಮಾಯಿ ಭ್ರಷ್ಟ ಸಿಎಂ ಎಂದು ಸಿದ್ದರಾಮಯ್ಯ ನೇರವಾಗಿ ಆರೋಪ ಮಾಡಿದ್ದರು. ಬೊಮ್ಮಾಯಿ ಲಿಂಗಾಯತ ಮುಖ್ಯಮಂತ್ರಿ ಆದರೂ ಅವರು ಸಾಕಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎಂದಿದ್ದ ಸಿದ್ದರಾಮಯ್ಯ ಹೇಳಿಕೆ ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ನಾಯಕರು ಈ ಬಗ್ಗೆ ಸಾಕಷ್ಟು ಟೀಕೆ ಮಾಡಿದ್ದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿದ್ದರಾಮಯ್ಯ . ಮುಖ್ಯಮಂತ್ರಿಯನ್ನು ಬೆನ್ನು ತಟ್ಟಿದ ಸಿದ್ದರಾಮಯ್ಯ. #KarnatakaElection2023 #basavarajbommai #Siddaramaiah #Belagavi #bjp #Congress #karnataka pic.twitter.com/pTW4zKpD35
— ₹ k.p.pati ₹ (@PampapatiK) April 26, 2023
ಬಸವರಾಜ ಬೊಮ್ಮಾಯಿ ಕೂಡ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾನು ಭ್ರಷ್ಟಾಚಾರ ಮಾಡಿದ್ದರೆ ಸೂಕ್ತ ದಾಖಲೆಗಳನ್ನು ನೀಡಲಿ, ಸಿದ್ದರಾಮಯ್ಯ ಲಿಂಗಾಯತ ಹೇಳಿಕೆ ವಿವಾದವಾಗುವುದನ್ನು ತಪ್ಪಿಸಲು ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಟೀಕಿಸಿದ್ದರು.
ಇಬ್ಬರೂ ನಾಯಕರಿಂದ ಭರ್ಜರಿ ಪ್ರಚಾರ
ಚುನಾವಣೆ ಸಮೀಪವಾಗುತ್ತಿರುವ ಹಿನ್ನಲೆಯಲ್ಲಿ ಇಬ್ಬರೂ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅಭಿವೃದ್ಧಿ ಕಾರ್ಯಗಳನ್ನು ಹೇಳಿಕೊಳ್ಳುತ್ತಾ ರಾಜ್ಯದ ಜನರದಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಇತ್ತ ಸಿದ್ದರಾಮಯ್ಯ ಬಿಜೆಪಿ ವೈಫಲ್ಯಗಳನ್ನು ಟೀಕಿಸುತ್ತಾ ಕಾಂಗ್ರೆಸ್‌ಗೆ ಅವಕಾಶ ಕೊಡಿ ಎಂದು ರಾಜ್ಯದ ಜನತೆಯಲ್ಲಿ ಮನವಿ ಮಾಡುತ್ತಿದ್ದಾರೆ.
ಹಲವು ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲದ ಹೋರಾಟ ನಡೆಸಲಿವೆ. ಕಾಂಗ್ರೆಸ್ ಬಿಜೆಪಿಗಿಂತ ಹೆಚ್ಚಿನ ಸ್ಥಾನ ಪಡೆಯುತ್ತದೆ ಎಂದು ಹಲವು ಸಮೀಕ್ಷೆಗಳು ಹೇಳಿದ್ದರೂ, ಆಪರೇಷನ್ ಕಮಲದ ಭೀತಿಯಲ್ಲಿರುವ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುವತ್ತ ಕಣ್ಣಿಟ್ಟಿದೆ.












Click it and Unblock the Notifications