ಬೆಳಗಾವಿ; ರೈಲಿಗೆ ತಲೆಕೊಟ್ಟ ಒಂದೇ ಕುಟುಂಬದ ನಾಲ್ವರು
ಬೆಳಗಾವಿ, ಜನವರಿ 28; ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣದ ಬಳಿ ಗುರುವಾರ ಬೆಳಗ್ಗೆ ಶವಗಳು ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಾತಪ್ಪ ಸುತಾರ್ (60), ಮಹಾದೇವಿ (50), ದತ್ತಾತ್ರೇಯ (28), ಸಂತೋಷ್ (25) ಎಂದು ಗುರುತಿಸಲಾಗಿದೆ.

ಮೃತಪಟ್ಟವರು ಬೀರಡಿ ಗ್ರಾಮದವರು ಎಂಬ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ವೇಗವಾಗಿ ಚಲಿಸುವ ರೈಲಿಗೆ ತಲೆ ಕೊಟ್ಟಿದ್ದರಿಂದ ದೇಹಗಳು ಛಿದ್ರಗೊಂಡಿವೆ. ನಾಲ್ವರ ದೇಹದ ಭಾಗಗಳು ಒದೊಂದು ಕಡೆ ಹೋಗಿ ಬಿದ್ದಿವೆ. ಘಟನೆಗೆ ಸ್ಥಳೀಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತದೇಹಗಳನ್ನು ರಾಯಬಾಗ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಳಗಾವಿ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.












Click it and Unblock the Notifications