ಬಯಲಿನಲ್ಲಿ ಬಯಲಾದ ನಡೆದಾಡುವ ದೇವರು : ಗದಗ ಜಗದ್ಗುರು

ಬೆಳಗಾವಿ, ಜನವರಿ 21 : ಸಿದ್ಧಗಂಗಾ ಕ್ಷೇತ್ರದ ಡಾ. ಶಿವಕುಮಾರ ಮಹಾಸ್ವಾಮಿಗಳು ನಮ್ಮ ಮಧ್ಯದಲ್ಲಿ ಬದುಕಿ ಬಾಳಿದ ನಡೆದಾಡುವ ದೇವರು. ಸಿದ್ಧಗಂಗಾ ಮಠದ ಪೀಠಾಧಿಪತಿಗಳಾಗಿ ಸತತ ಎಂಟು ದಶಕಗಳ ಕಾಳ ಈ ನಾಡಿಗೆ ಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಎಂದು ಗದಗ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ನೆನೆದಿದ್ದಾರೆ.

ಸ್ವಾತಂತ್ರ್ಯಪೂರ್ವ ಕಾಲದಿಂದಲೇ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸಿ ಬಡ ಮಕ್ಕಳಿಗೆ ಅನ್ನ-ಆಶ್ರಯ ನೀಡಿ ವಿದ್ಯಾದಾನ ಮಾಡುತ್ತ ಅವರ ಬಾಳನ್ನು ಬೆಳಗಿದವರು. ಅವರು ನಮ್ಮ ದಿನಮಾನದ ಸಂತಶ್ರೇಷ್ಠರು. ಬಸವಾದಿ ಶರಣರ ದಾಸೋಹ ತತ್ತ್ವವನ್ನು ಆಧುನಿಕ ದಿನಮಾನದಲ್ಲಿ ಸಾಕಾರಗೊಳಿಸಿದ ಪುಣ್ಯಪುರುಷರು. ಇಂದು ಅವರು ಬಯಲಿನಲ್ಲಿ ಬಯಲಾದುದು ಸಮಸ್ತ ಜನತೆಯನ್ನು ಶೋಕಸಾಗರದಲ್ಲಿ ಮುಳುಗಿಸಿದಂತಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

ಒಬ್ಬ ಮಠಾಧಿಪತಿ ಹೇಗಿರಬೇಕು ಎಂಬುದಕ್ಕೆ ಮಾದರಿ ಎನಿಸಿದವರು ಪೂಜ್ಯ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳು. ಆಧುನಿಕ ಕಾಲದಲ್ಲಿ ಬಸವಾದಿ ಶರಣರ ದಾಸೋಹ ತತ್ತ್ವಕ್ಕೆ ಬಹುದೊಡ್ಡ ನೆಲೆಯನ್ನು ಶ್ರೀಗಳು ಒದಗಿಸಿದರು. ತಮ್ಮ ಸಾಧನೆ ಸಿದ್ಧಿಗಳ ಮೂಲಕ ಬದುಕಿರುವಾಗಲೇ ಅವರು ದಂತಕತೆಯಾದವರು ಎಂದು ಶ್ರೀಗಳನ್ನು ಸ್ಮರಿಸಿದರು.

Gadag Jagadguru remembers Shivakumara Swamiji

ತ್ರಿವಿಧ ದಾಸೋಹಿ, ಕರ್ನಾಟಕ ರತ್ನಗಳಿಂದ ವಿಭೂಷಿತರಾದ ಶ್ರೀಗಳು ಈ ನಾಡಿಗೆ ತನ್ಮೂಲಕ ನಮ್ಮ ರಾಷ್ಟ್ರಕ್ಕೆ ಕೊಟ್ಟ ಕೊಡುಗೆ ಅಪೂರ್ವವಾದುದು. ಅವರ ಬದುಕು ಸಂಪೂರ್ಣವಾಗಿ ಸಮಾಜಕ್ಕೆ ಸಮರ್ಪಿತವಾದುದು. ನೂರಾ ಹನ್ನೆರಡು ವರ್ಷಗಳ ವರೆಗೆ ಕ್ರಿಯಾಶೀಲರಾಗಿ ಬದುಕಿದ ಶ್ರೀಗಳು ತಮ್ಮ ನಡೆ-ನುಡಿ, ಸಾಧನೆ-ಸಿದ್ಧಿಗಳಿಂದ ನಡೆದಾಡುವ ದೇವರೆನಿಸಿದ್ದರು ಎಂದು ಅವರನ್ನು ಕೊಂಡಾಡಿದರು.

ಜಾತಿ ಮತ ಧರ್ಮಗಳ ಎಲ್ಲೆಯನ್ನು ಮೀರಿ ಎಲ್ಲರಿಗೂ ಆರಾಧ್ಯರೆನಿಸಿದ್ದರು. ಅವರ ಅಗಲುವಿಕೆ ನಾಡ ಜನತೆಯನ್ನು ಬಹುಕಾಲ ಬಾಧಿಸದಿರದು. ಪೂಜ್ಯರ ಆದರ್ಶದ ಮಾರ್ಗದಲ್ಲಿ ನಾವು ಮುನ್ನಡೆಯುವುದೇ ನಾವು ಅವರಿಗೆ ಸಲ್ಲಿಸುವ ಶ್ರದ್ಧಾಂಜಲಿ ಎಂದು ಪೂಜ್ಯ ಶ್ರೀಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಭಾರತ ಸರಕಾರವು ಅವರಿಗೆ ಮರಣೋತ್ತರ 'ಭಾರತ ರತ್ನ' ಪ್ರಶಸ್ತಿಯನ್ನು ನೀಡಿ ಗೌರವಿಸಬೇಕೆಂದು ಅವರು ಕೋರಿದ್ದಾರೆ.

ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು
ಶ್ರೀ ಜಗದ್ಗುರು ಎಡೆಯೂರು ತೋಂಟದಾರ್ಯ ಸಂಸ್ಥಾನಮಠ, ಗದಗ ಹಾಗು ನಾಗನೂರು ಶ್ರೀ ರುದ್ರಾಕ್ಷಿಮಠ, ಬೆಳಗಾವಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+