ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬ ಅನಿವಾರ್ಯ: ಸತೀಶ್ ಜಾರಕಿಹೊಳಿ

ಬೆಳಗಾವಿ, ಆಗಸ್ಟ್ 25: ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬ ಅನಿವಾರ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

Recommended Video

      ಕೊನೆಗೂ Africa , Polioದಿಂದ ಮುಕ್ತ | Oneindia Kannada

      ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಗಾಂಧಿ ಕುಟುಂಬದ ಕೈಯಲ್ಲಿದೆ. ಹೀಗಾಗಿ ಮುಂದೆಯೂ ಗಾಂಧಿ ಕುಟುಂಬದ ಕೈಯಲ್ಲೇ ಇರಬೇಕು ಎಂದರು.

      ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬದಿಂದ ತ್ಯಾಗ, ಬಲಿದಾನವಾಗಿದ್ದು, ಹೀಗಾಗಿ ಅವರು ಅನಿವಾರ್ಯ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ನಾಯಕತ್ವ ಬದಲಾವಣೆ ಕೂಗು ಯಾರಿಂದಲೂ ಬಂದಿಲ್ಲ. ಆರು ತಿಂಗಳ ಬಳಿಕ ಪೂರ್ಣ ಪ್ರಮಾಣದ ಅಧ್ಯಕ್ಷರ ನೇಮಕ ಆಗಲಿದೆ ಎಂದು ತಿಳಿಸಿದರು.

      Gandhi family Indispensable To Congress Party: Satish Jarakiholi

      ಕಾಂಗ್ರೆಸ್ ಬಹಳಷ್ಟು ವರ್ಷದಿಂದ ಆಡಳಿತ ನಡೆಸಿದ್ದು, ಪಕ್ಷ ಸಂಘಟನೆಗೆ ಒತ್ತು ನೀಡಲಾಗಿಲ್ಲ. ಇದು ಈಗ ಸಮಸ್ಯೆ ಆಗುತ್ತಿದೆ. ಪಕ್ಷ ಹಿನ್ನಡೆಗೆ ರಾಹುಲ್ ಗಾಂಧಿ ಒಬ್ಬರೆ ಕಾರಣರಲ್ಲ ಎಂದರು.

      ಈ ಬಾರಿಯೂ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಾಗಿದೆ, ಆದರೆ ಕಳೆದ ವರ್ಷದಷ್ಟು ಈ ಸಲ ಹಾನಿ ಆಗಿಲ್ಲ. ಕೇಂದ್ರ ಸರ್ಕಾರವನ್ನು ಕೇಳುವ ಬದಲು ರಾಜ್ಯ ಸರ್ಕಾರವೇ ಹಾನಿಗೆ ಪರಿಹಾರ ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಆಗ್ರಹಿಸಿದರು .

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+