Get Updates
Get notified of breaking news, exclusive insights, and must-see stories!

ಗಣೇಶ ಚತುರ್ಥಿ : ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ರೈಲು

ಬೆಂಗಳೂರು, ಆಗಸ್ಟ್ 27 : ಗಣೇಶ ಚತುರ್ಥಿ ಅಂಗವಾಗಿ ಪ್ರಯಾಣಿಕರ ದಟ್ಟಣೆ ತಪ್ಪಿಸಲು ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು-ಬೆಳಗಾವಿ ನಡುವೆ ಈ ವಿಶೇಷ ರೈಲು ಸಂಚಾರ ನಡೆಸಲಿದೆ.

ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಸೂಚನೆಯಂತೆ ವಿಶೇಷ ರೈಲಿನ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.

ರೈಲು ನಂಬರ್ 06581 ಮತ್ತು 06582 ಬೆಂಗಳೂರು-ಬೆಳಗಾವಿ ನಡುವೆ ಸಂಚಾರ ನಡೆಸಲಿವೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಈ ವಿಶೇಷ ರೈಲು ಬೆಳಗಾವಿಗೆ ಸಂಚಾರ ನಡೆಸಲಿದೆ. ಬೆಳಗಾವಿಯಿಂದ ಹೊರಡುವ ರೈಲು ಯಶವಂತಪುರದ ತನಕ ಬರಲಿದೆ.

Ganesh Chaturthi Special Train Between Bengauru Belagavi

ಆಗಸ್ಟ್ 30ರ ಶುಕ್ರವಾರ ಯಶವಂತಪುರದಿಂದ ರೈಲು ಬೆಳಗಾವಿಗೆ ಸಂಚಾರ ನಡೆಸಲಿದೆ. ಸೆಪ್ಟೆಂಬರ್ 2ರ ಸೋಮವಾರ ರೈಲು ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಲಿದೆ.

ನಿಲ್ದಾಣಗಳು : ಯಶವಂತಪುರದಿಂದ ಹೊರಡುವ ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಹುಬ್ಬಳ್ಳಿ ದಕ್ಷಿಣ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ನಿಲ್ದಾಣದಲ್ಲಿ ನಿಲುಗಡೆಗೊಂಡು ಬೆಳಗಾವಿಗೆ ತಲುಪಲಿದೆ.

ಬೆಂಗಳೂರು-ಬೆಳಗಾವಿ ನಡುವೆ ಪ್ರತಿದಿನ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರ ನಡೆಸುತ್ತಿದೆ. ಜೂನ್ 29ರಂದು ಆರಂಭವಾದ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನವೆಂಬರ್ 1ರಿಂದ ಈ ರೈಲು ಖಾಯಂ ಆಗಿ ಸಂಚಾರ ನಡೆಸಲಿದೆ.

ಈ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ 15 ಕೋಚ್‌ಗಳಿದ್ದು, 868 ಸೀಟುಗಳಿವೆ. ಬೆಂಗಳೂರು-ಬೆಳಗಾವಿ ನಡುವಿನ ಸುಮಾರು 610 ಕಿ.ಮೀ. ಮಾರ್ಗವನ್ನು ರೈಲು 10 ಗಂಟೆಗಳಲ್ಲಿ ಕ್ರಮಿಸಲಿದೆ. ಆದ್ದರಿಂದ, ಜನರ ಮೆಚ್ಚುಗೆಗೆ ಪಾತ್ರವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+