ಕರುಣೆ ತೋರದ ಘಟಪ್ರಭೆ; ಗೋಕಾಕಿನ ಕೆಲ ಹಳ್ಳಿಗಳಿಗೆ ನುಗ್ಗಿದ ನೀರು
ಬೆಳಗಾವಿ, ಆಗಸ್ಟ್ 19: ಈ ವರ್ಷವೂ ಘಟಪ್ರಭಾ ನದಿ ತೀರದ ಕೆಲ ಹಳ್ಳಿಗಳಿಗೆ ನೀರು ನುಗ್ಗಿದೆ. ಗೋಕಾಕ ತಾಲೂಕಿನ ಅಡಿಬಟ್ಟಿ, ಹಡಿಗನಾಳ, ಕಲಾರಕೊಪ್ಪ, ಉದಗಟ್ಟಿ ಗ್ರಾಮಗಳು ಜಲಾವೃತಗೊಂಡಿವೆ.
ಹಿಡಕಲ್ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. 51 ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯದಲ್ಲಿ 50.05 ಟಿಎಂಸಿ ನೀರು ಈಗಾಗಲೇ ಸಂಗ್ರಹವಾಗಿದೆ.

ಹಿಡಕಲ್ ಜಲಾಶಯಕ್ಕೆ ಒಟ್ಟು 41 ಸಾವಿರ ಕ್ಯೂಸೆಕ್ ಒಳಹರಿವು ಇದ್ದು ಘಟಪ್ರಭಾ ನದಿಗೆ 40 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದೆ. ಹೀಗಾಗಿ ಗೋಕಾಕ್ ನಗರ ಸೇರಿ ನದಿಪಾತ್ರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕೆಲ ಗ್ರಾಮಗಳು ನಡುಗಡ್ಡೆಯಾಗಿ ಮಾರ್ಪಟ್ಟಿವೆ.












Click it and Unblock the Notifications