ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ ಚುನಾವಣೆ; ಅಪ್ಪ ಜೆಡಿಎಸ್‌ ಅಭ್ಯರ್ಥಿ, ಮಗ ಪಕ್ಷೇತರ!

|
Google Oneindia Kannada News

ಬೆಳಗಾವಿ, ನವೆಂಬರ್ 22 : ಉಪ ಚುನಾವಣಾ ಕಣ ಅಂತಿಮಗೊಂಡಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಮೇಶ್ ಜಾರಕಿಹೊಳಿ, ಲಖನ್ ಜಾರಕಿಹೊಳಿ ನಡುವಿನ ಸ್ಪರ್ಧೆಯಿಂದಾಗಿ ಕಣ ರಂಗೇರಿದೆ. ಇದಕ್ಕಿಂತ ಕುತೂಹಲದ ವಿಚಾರ ಕ್ಷೇತ್ರದಲ್ಲಿ ಮತ್ತೊಂದಿದೆ.

ರಮೇಶ್ ಜಾರಕಿಹೊಳಿ ಬಿಜೆಪಿಯಿಂದ, ಲಖನ್ ಜಾರಕಿಹೊಳಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದಾರೆ. ಬಿಜೆಪಿ ಟಿಕೆಟ್ ಸಿಗದೆ ಬಂಡಾಯವೆದ್ದಿದ್ದ ಅಶೋಕ ಪೂಜಾರಿ ಜೆಡಿಎಸ್ ಅಭ್ಯರ್ಥಿ. ಅಶೋಕ ಪೂಜಾರಿ ಮನವೊಲಿಕೆ ಮಾಡುವ ಬಿಜೆಪಿ ನಾಯಕರ ಪ್ರಯತ್ನ ಫಲ ಕೊಟ್ಟಿಲ್ಲ.

ಲಖನ್ V/S ರಮೇಶ್: ಗೋಕಾಕ್ ಚುನಾವಣೆ ಕುತೂಹಲದ ಕಣ ಲಖನ್ V/S ರಮೇಶ್: ಗೋಕಾಕ್ ಚುನಾವಣೆ ಕುತೂಹಲದ ಕಣ

ವಾಲ್ಮೀಕಿ ಸಮುದಾಯದ ರಮೇಶ್ ಜಾರಕಿಹೊಳಿ, ಲಖನ್ ಜಾರಕಿಹೊಳಿ ಕಣದಲ್ಲಿದ್ದಾರೆ. ಸಹೋದರರ ನಡುವೆ ಲಿಂಗಾಯತ ಸಮುದಾಯದ ಅಶೋಕ ಪೂಜಾರಿ ಅವರೂ ಕಣದಲ್ಲಿದ್ದಾರೆ. ಇದು ಗೋಕಾಕ್ ಕ್ಷೇತ್ರದ ಚುನಾವಣಾ ಕಣವನ್ನು ಮತ್ತಷ್ಟು ರಂಗೇರಿಸಿದೆ.

ಉಪ ಸಮರ: ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿ ಉಪ ಸಮರ: ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿ

ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದ ಅಶೋಕ ಪೂಜಾರಿ ರಮೇಶ್ ಜಾರಕಿಹೊಳಿ ವಿರುದ್ಧ 14,280 ಮತಗಳನ್ನು ಪಡೆದು ಸೋತಿದ್ದರು. ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ರಮೇಶ್ ಜಾರಕಿಹೊಳಿ ಎದುರಾಳಿಯಾಗಿದ್ದಾರೆ.

ಗೋಕಾಕ್ ಸಾಹುಕಾರ್ ಗೆ ಬಂತು 'ಭೀಮ' ಬಲಗೋಕಾಕ್ ಸಾಹುಕಾರ್ ಗೆ ಬಂತು 'ಭೀಮ' ಬಲ

ಮೂರು ಚುನಾವಣೆಗಳಲ್ಲಿ ಸೋಲು

ಮೂರು ಚುನಾವಣೆಗಳಲ್ಲಿ ಸೋಲು

ಅಶೋಕ ಪೂಜಾರಿ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ. ಕ್ಷೇತ್ರದಲ್ಲಿ ಅವರದ್ದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. 2008, 2013ರಲ್ಲಿ ಜೆಡಿಎಸ್‌ನಿಂದ 2018ರಲ್ಲಿ ಬಿಜೆಪಿಯಿಂದ ಕಣಕ್ಕಿಳಿದು ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಕಳೆದ ಬಾರಿ ರಮೇಶ್ ಜಾರಕಿಹೊಳಿ ವಿರುದ್ಧ 14, 280 ಮತಗಳ ಅಂತರದಿಂದ ಸೋತಿದ್ದಾರೆ.

ರಮೇಶ್ ಜಾರಕಿಹೊಳಿ ಬಿಜೆಪಿಗೆ

ರಮೇಶ್ ಜಾರಕಿಹೊಳಿ ಬಿಜೆಪಿಗೆ

ರಮೇಶ್ ಜಾರಕಿಹೊಳಿ ಬಿಜೆಪಿಗೆ ಸೇರಿದ ಮೇಲೆ ಅಶೋಕ ಪೂಜಾರಿ ಏನು ಮಾಡಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಅಭಿಮಾನಿಗಳು, ಹಿತೈಷಿಗಳ ಜೊತೆ ಚರ್ಚಿಸಿದ ಬಳಿಕ ಅವರು ಜೆಡಿಎಸ್‌ನಿಂದ ಕಣಕ್ಕಿಳಿದು ಕ್ಷೇತ್ರದ ಚುನಾವಣಾ ಕಣದ ರಂಗನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಅಶೋಕ ಪೂಜಾರಿ ಪುತ್ರನೂ ಕಣದಲ್ಲಿ

ಅಶೋಕ ಪೂಜಾರಿ ಪುತ್ರನೂ ಕಣದಲ್ಲಿ

ಅಶೋಕ ಪೂಜಾರಿ ಪುತ್ರ ಸತೀಶ್ ಪೂಜಾರಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಎಲ್‌ಎಲ್‌ಬಿ ಪೂರ್ಣಗೊಳಿಸಿರುವ ಅವರು ಚುನಾವಣಾ ಪ್ರಕ್ರಿಯೆ ಅರಿತುಕೊಳ್ಳಲು ಕಣಕ್ಕಿಳಿದಿದ್ದೇನೆ. ತಂದೆಯ ಪರವಾಗಿಯೇ ಮತ ಕೇಳುತ್ತೇನೆ ಎಂದು ಹೇಳಿದ್ದಾರೆ. ಕಳೆದ ಚುನಾವಣೆಯಲ್ಲಿಯೂ ಅವರು ಕಣಕ್ಕಿಳಿದಿದ್ದರು ಬಳಿಕ ನಾಮಪತ್ರ ವಾಪಸ್ ಪಡೆದಿದ್ದರು.

ಕಣದಲ್ಲಿ 11 ಅಭ್ಯರ್ಥಿಗಳು

ಕಣದಲ್ಲಿ 11 ಅಭ್ಯರ್ಥಿಗಳು

ಚುನಾವಣಾ ಕಣದಲ್ಲಿ 11 ಅಭ್ಯರ್ಥಿಗಳಿದ್ದಾರೆ. ರಮೇಶ್ ಜಾರಕಿಹೊಳಿ ಬಿಜೆಪಿಯಿಂದ, ಲಖನ್ ಜಾರಕಿಹೊಳಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದಾರೆ. ಜೆಡಿಎಸ್‌ನಿಂದ ಅಶೋಕ ಪೂಜಾರಿ ಇದ್ದು ಕಣ ಕುತೂಹಲಕ್ಕೆ ಕಾರಣವಾಗಿದೆ.

English summary
In a Gokak seat by elections Ashok Ningayyaswami Pujari JD(S) candidate and his son Satish Poojari in fray as independent candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X