ರಮೇಶ್ ಜಾರಕಿಹೊಳಿ ಡಿಸ್ಚಾರ್ಜ್: ವಿಚಾರಣೆಗೆ ಹಾಜರಾಗ್ತಾರಾ ಮಾಜಿ ಸಚಿವ?

ಬೆಳಗಾವಿ, ಏಪ್ರಿಲ್ 7: ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಬುಧವಾರ ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.

ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿ ಅವರು, ಏ.4ರಂದು ರಾತ್ರಿ 10.30ಕ್ಕೆ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರಿಕ್ಷೆಯಲ್ಲಿ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಧೃಡವಾಗಿತ್ತು.

ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

Gokak: Former Minister Ramesh Jarkiholi Discharged From Hospital

ಬಿಪಿ, ಶುಗರ್ ಇದೀಗ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರು ಕರೆದುಕೊಂಡು ಬಂದರು. ರಮೇಶ್ ಜಾರಕಿಹೊಳಿ ಅವರು ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿ ಹೋಂ ಕ್ವಾರಂಟೈನ್ ಆಗಲಿದ್ದಾರೆ.

Gokak: Former Minister Ramesh Jarkiholi Discharged From Hospital

ಸಿಡಿ ಪ್ರಕರಣದಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿದ್ದು, ಈಗಾಗಲೇ ಅವರಿಗೆ ನೋಟಿಸ್ ಸಹ ನೀಡಲಾಗಿದೆ. ವೈದ್ಯರ ಸಲೆ ಮೇರೆಗೆ ಇನ್ನೂ ವಿಶ್ರಾಂತಿ ಪಡೆಬೇಕಾಗಿದ್ದು, ಕಾಲಾವಕಾಶ ಕೋರಿ ನಂತರ ಸಿಡಿ ಪ್ರಕರಣದ ಎಸ್ಐಟಿ ವಿಚಾರಣೆಗೆ ಹಾಜರಾಗಬಹುದು. ಇನ್ನಷ್ಟೇ ಅದರ ಬಗ್ಗೆ ಮಾಹಿತಿ ಸಿಗಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+