ಬೆಳಗಾವಿ ರಾಜಕೀಯ; ಬಂತೊಂದು Breaking News!
ಬೆಳಗಾವಿ, ಅಕ್ಟೋಬರ್ 19; ಕರ್ನಾಟಕದ ರಾಜಕೀಯವೇ ಬೇರೆ ಬೆಳಗಾವಿ ರಾಜಕೀಯವೇ ಬೇರೆ ಎಂಬ ಮಾತಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ರಾಜಕೀಯದ ನಡುವೆ ಜೆಡಿಎಸ್ ಪಕ್ಷ ಅಷ್ಟು ಪ್ರಭಾವಿಯಾಗಿಲ್ಲ. ಜಿಲ್ಲೆಯ ಜೆಡಿಎಸ್ ನಾಯಕರೊಬ್ಬರು ಈಗ ಕಾಂಗ್ರೆಸ್ ಸೇರುವ ಸಿದ್ಧತೆ ಆರಂಭಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಪ್ರಭಾವಿ ಜೆಡಿಎಸ್ ನಾಯಕ ಅಶೋಕ ಪೂಜಾರಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ತವರು ಕ್ಷೇತ್ರ. ಶೀಘ್ರದಲ್ಲಿಯೇ ಅಶೋಕ ಪೂಜಾರಿ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ. ಅಶೋಕ ಪೂಜಾರಿ ಪಕ್ಷ ತೊರೆದರೆ ಬೆಳಗಾವಿ ಭಾಗದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಲಿದೆ.
2023ರ ಚುನಾವಣೆಯಲ್ಲಿ ಗೋಕಾಕ್‌ನಿಂದ ಅಶೋಕ ಪೂಜಾರಿ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಬಳಿಕ ಮುಂದಿನ ರಾಜಕೀಯ ನಡೆಯ ಬಗ್ಗೆ ಮಾಹಿತಿ ತಿಳಿಯಲಿದೆ.

ಪ್ರಭಾವಿ ನಾಯಕ ಅಶೋಕ ಪೂಜಾರಿ
ಅಶೋಕ ಪೂಜಾರಿ ಗೋಕಾಕ್ ಕ್ಷೇತ್ರದ ಪ್ರಭಾವಿ ಜೆಡಿಎಸ್ ನಾಯಕ. 2008, 2013ರಲ್ಲಿ ಜೆಡಿಎಸ್‌ನಿಂದ ಅವರು ಚುನಾವಣೆಗೆ ಸ್ಪರ್ಧಿಸಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ 75,969 ಮತಗಳನ್ನು ಪಡೆದು ಕಾಂಗ್ರೆಸ್‌ನ ರಮೇಶ್ ಜಾರಕಿಹೊಳಿ ವಿರುದ್ಧ ಸೋತಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿ ಸೇರಿದರು. ಆಗ ನಡೆದ ಗೋಕಾಕ್ ಉಪಚುನಾವಣೆಯಲ್ಲಿ ಅಶೋಕ ಪೂಜಾರಿ ಮತ್ತೆ ರಮೇಶ್ ಜಾರಕಿಹೊಳಿ ವಿರುದ್ಧ ಜೆಡಿಎಸ್ ಅಭ್ಯರ್ಥಿಯಾದರು. ಉಪ ಚುನಾವಣೆಯಲ್ಲಿ ಸೋಲು ಕಂಡರು. ಈಗ ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ
ಅಶೋಕ ಪೂಜಾರಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಕಾಂಗ್ರೆಸ್‌ಗೆ ಅವರನ್ನು ಆಹ್ವಾನಿಸಲಾಗಿದ್ದು, ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಶೀಘ್ರವೇ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಲಿಂಗಾಯತ ಸಮುದಾಯಕ್ಕೆ ಸೇರಿದ ಅಶೋಕ ಪೂಜಾರಿಗೆ ಕ್ಷೇತ್ರದಲ್ಲಿ ಅವರದ್ದೇ ಆದ ಬೆಂಬಲಿಗರು, ಹಿತೈಷಿಗಳಿದ್ದಾರೆ. 2018ರ ಚುನಾವಣೆಯಲ್ಲಿ ಅವರು 75 ಸಾವಿರ ಮತಗಳನ್ನು ಪಡೆದಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಸತೀಶ್ ಜಾರಕಿಹೊಳಿ ಭೇಟಿ
ದಿ. ಸುರೇಶ್ ಅಂಗಡಿ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಶೋಕ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಪಕ್ಷಕ್ಕೆ ಆಹ್ವಾನಿಸಿದ್ದರು. ಬೆಳಗಾವಿ ಉಪ ಚುನಾವಣೆಯಲ್ಲಿ ಬಿಜೆಪಿಯ ಮಂಗಲ ಸುರೇಶ್ ಅಂಗಡಿ ಗೆಲುವು ಸಾಧಿಸಿದ್ದರು.
ಈಗ 2023ರ ವಿಧಾನಸಭೆ ಚುನಾವಣೆ ತಯಾರಿ ಆರಂಭವಾಗಿದೆ. ರಮೇಶ್ ಜಾರಕಿಹೊಳಿ ವಿರುದ್ಧ ವಿವಿಧ ಪಕ್ಷಗಳಿಂದ ಸ್ಪರ್ಧಿಸಿರುವ ಅಶೋಕ ಪೂಜಾರಿ ಮಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಲಿದ್ದಾರೆಯೇ? ಕಾದು ನೋಡಬೇಕಿದೆ.

ಸರ್ವಾಧಿಕಾರದ ವಿರುದ್ಧ ಹೋರಾಟ
ಗೋಕಾಕ್ ಉಪ ಚುನಾವಣೆ ಸಂದರ್ಭದಲ್ಲಿ ಮಾತನಾಡಿದ್ದ ಅಶೋಕ ಪೂಜಾರಿ, "ಕ್ಷೇತ್ರದ ರಾಜಕೀಯದಲ್ಲಿ ಒಂದು ರೀತಿಯ ಭಯದ ವಾತಾವರಣ ಸೃಷ್ಟಿ ಮಾಡಲಾಗಿದೆ. ಯಾರ ಜೊತೆ ಗುರುತಿಸಿಕೊಂಡರೂ ಕಷ್ಟ ಎಂಬಂಥ ಪರಿಸ್ಥಿತಿ ಸೃಷ್ಟಿಸಲಾಗಿದೆ. ಕಳೆದ 11 ವರ್ಷಗಳಿಂದ ರಾಜಕೀಯ ಸರ್ವಾಧಿಕಾರದ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ನನಗೆ ಯಾರ ಭಯವೂ ಇಲ್ಲ" ಎಂದು ಹೇಳಿದ್ದರು.
2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಅಶೋಕ ಪೂಜಾರಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ ಅದನ್ನು ತಿರಸ್ಕರಿಸಿದ ಪೂಜಾರಿ ಗೋಕಾಕ್ ಉಪ ಚುನಾವಣೆ ಸಂದರ್ಭದಲ್ಲಿ, "ಗೋಕಾಕ್‌ನಲ್ಲಿರುವ ಸರ್ವಾಧಿಕಾರಿ ರಾಜಕೀಯ ವ್ಯವಸ್ಥೆ ಬದಲಿಸುವ ಹೋರಾಟ ಮುಂದುವರೆಸುತ್ತೇನೆ" ಎಂದು ಹೇಳಿದ್ದರು. ಬಿಜೆಪಿ ಬಿಟ್ಟು ಜೆಡಿಎಸ್ ಸೇರಿದ್ದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications