ಡಿ. 23ಕ್ಕೆ ಕಾಂಗ್ರೆಸ್ ಸೇರುವುದಾಗಿ ಜೆಡಿಎಸ್ ನಾಯಕನ ಘೋಷಣೆ!
ಬೆಳಗಾವಿ, ಡಿಸೆಂಬರ್ 21; ಜೆಡಿಎಸ್ ನಾಯಕರ ನಡೆ ಕಾಂಗ್ರೆಸ್ ಕಡೆಗೆ ಮತ್ತೆ ಮುಂದುವರೆದಿದೆ. ಮತ್ತೊಬ್ಬ ಜೆಡಿಎಸ್ ನಾಯಕ ಡಿಸೆಂಬರ್ 23ರಂದು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದ ಪ್ರಭಾವಿ ಜೆಡಿಎಸ್ ನಾಯಕ ಅಶೋಕ ಪೂಜಾರಿ ಕಾಂಗ್ರೆಸ್ ಸೇರಲಿದ್ದಾರೆ. ಡಿಸೆಂಬರ್ 23ರ ಗುರುವಾರ ಸಂಜೆ 4 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಶೋಕ ಪೂಜಾರಿ ಕಾಂಗ್ರೆಸ್ ಸೇರುತ್ತಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಅಶೋಕ ಪೂಜಾರಿ ಮಾಹಿತಿ ನೀಡಿದರು, "ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದೇನೆ" ಎಂದರು.

"ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ಒಂದು ವರ್ಷದಿಂದಲೂ ವದಂತಿ ಹರಡಿತ್ತು. ನಾನು ಗೋಕಾಕ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಲು ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಪಕ್ಷದ ಅನೇಕ ಮುಖಂಡರು ಕಾಂಗ್ರೆಸ್ ಸೇರುವಂತೆ ಸಂಪರ್ಕಿಸಿದ್ದರು" ಎಂದು ಹೇಳಿದರು.
"ಕೆಪಿಸಿಸಿ ಕಾರ್ಯಾಧ್ಯಕ್ಷರೂ ಅಧಿಕೃತವಾಗಿ ಆಹ್ವಾನ ನೀಡಿದ್ದರು. ಗೋಕಾಕ್‌ನಲ್ಲಿನ ಸರ್ವಾಧಿಕಾರಿ ಧೋರಣೆ ವಿರುದ್ಧ ನಿಮ್ಮ ಹೋರಾಟಕ್ಕೆ ನಾವು ಕೈ ಜೋಡಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಇತ್ತೇಚೆಗೆ ಪಕ್ಷಕ್ಕೆ ಸ್ವಾಗತ ಕೋರಿದ್ದರು" ಎಂದು ಅಶೋಕ ಪೂಜಾರಿ ತಿಳಿಸಿದರು.
ಕಾಂಗ್ರೆಸ್ ಟಿಕೆಟ್ ಕೇಳಿಲ್ಲ; "ಒಮ್ಮೆ ಬಿಜೆಪಿ, ಮೂರು ಬಾರಿ ಜೆಡಿಎಸ್‌ನಿಂದ ಗೋಕಾಕ್ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದೇನೆ. ಆದರೆ ಚುನಾವಣೆ ಗೆಲ್ಲಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬೇಷರತ್ ಆಗಿ ಪಕ್ಷವನ್ನು ಸೇರುತ್ತಿದ್ದೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೇಳಲ್ಲ, ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ" ಎಂದು ಅಶೋಕ ಪೂಜಾರಿ ಸ್ಪಷ್ಟಪಡಿಸಿದರು.
"ರಮೇಶ್ ಜಾರಕಿಹೊಳಿ ಗೋಕಾಕ್‌ನಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಇದಕ್ಕೆ ಅವರದೇ ಕುಟುಂಬದ ಸತೀಶ್ ಜಾರಕಿಹೊಳಿ ಅಪವಾದ ವಾಗಿದ್ದಾರೆ" ಎಂದು ಅಶೋಕ ಜಾರಕಿಹೊಳಿ ಹೇಳಿದರು.
75 ಸಾವಿರ ಮತಗಳು; ಅಶೋಕ ಪೂಜಾರಿ ಬೆಳಗಾವಿಯ ಪ್ರಭಾವಿ ಜೆಡಿಎಸ್ ನಾಯಕ. 2008, 2013ರ ವಿಧಾನಸಭೆ ಚುನಾವಣೆಯಲ್ಲಿ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಕಣಕ್ಕಿಳಿದು 75,969 ಮತಗಳನ್ನು ಪಡೆದಿದ್ದರು.
ಬದಲಾದ ರಾಜಕೀಯ ಸನ್ನಿವೇಶದಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿ ಸೇರಿದರು. ಆಗ ನಡೆದ ಗೋಕಾಕ್ ಉಪಚುನಾವಣೆಯಲ್ಲಿ ಅಶೋಕ ಪೂಜಾರಿ ಮತ್ತೆ ರಮೇಶ್ ಜಾರಕಿಹೊಳಿ ವಿರುದ್ಧ ಜೆಡಿಎಸ್ ಅಭ್ಯರ್ಥಿಯಾದರು, ಸೋಲು ಕಂಡರು. ಈಗ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ.
ಅಶೋಕ ಪೂಜಾರಿ ಲಿಂಗಾಯತ ಸಮುದಾಯಕ್ಕೆ ಸೇರಿದ ನಾಯಕ. ಬೆಳಗಾವಿ ಜಿಲ್ಲೆಯ ಗೋಕಾಕ್ ಕ್ಷೇತ್ರದಲ್ಲಿ ಅವರದ್ದೇ ಆದ ಬೆಂಬಲಿಗರು, ಹಿತೈಷಿಗಳಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು 75 ಸಾವಿರ ಮತಗಳನ್ನು ಪಡೆದಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಈಗ ಅವರು ಕಾಂಗ್ರೆಸ್ ಸೇರುತ್ತಿರುವುದು ಜೆಡಿಎಸ್‌ಗೆ ಹಿನ್ನಡೆಯಾಗಿದೆ.
ಸೊರಬದ ಮಾಜಿ ಶಾಸಕ ಮಧು ಬಂಗಾರಪ್ಪ, ಶಿವಮೊಗ್ಗ ಜೆಡಿಎಸ್ ಅಧ್ಯಕ್ಷರಾಗಿದ್ದ ಆರ್. ಎಂ. ಮಂಜುನಾಥ ಗೌಡ, ನವಲಗುಂದ ಕ್ಷೇತ್ರದ ಮಾಜಿ ಶಾಸಕ ಕೋನ ರಡ್ಡಿ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ. ಆರ್. ಮನೋಹರ್ ಈಗಾಗಲೇ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ.
ಕೋಲಾರ ಶಾಸಕ ಕೆ. ಶ್ರೀನಿವಾಸಗೌಡ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡ, ವಿಧಾನ ಪರಿಷತ್ ಸದ್ಯರಾಗಿದ್ದ ಸಂದೇಶ ನಾಗರಾಜ್ ಸಹ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವ ತಯಾರಿಯಲ್ಲಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಇನ್ನಷ್ಟು ನಾಯಕರು ಕಾಂಗ್ರೆಸ್ ಸೇರುವ ನಿರೀಕ್ಷೆ ಇದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications