ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೋಕಾಕ್ ಉಪಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ; ಬಿಎಸ್ ‌ವೈಗೆ ಮತ್ತೆ ಸಂಕಷ್ಟ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜುಲೈ 25: ಗೋಕಾಕ್ ಉಪಚುನಾವಣಾ ಪ್ರಚಾರ ವೇಳೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಕಾರಣದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

Recommended Video

ಭಾರತದಲ್ಲಿ ಚೀನಾ ವ್ಯವಹಾರ ಇನ್ನು ಮುಂದೆ ಸುಲಭವಲ್ಲ | Oneindia Kannada

ಗೋಕಾಕ್ ಉಪಚುನಾವಣೆ ವೇಳೆ ವೀರಶೈವ ಸಮಾಜದ ಹೆಸರಿನಲ್ಲಿ ಮತ ಯಾಚನೆ ಮಾಡಿದರು ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆ ಗೋಕಾಕ್ ಜೆಎಂಎಫ್ ‌ಸಿ ನ್ಯಾಯಾಲಯ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿ ಮಾಡಿದೆ. ಸೆಪ್ಟೆಂಬರ್ 9ರೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಸಿದ್ದರಾಮಯ್ಯ ಆರೋಪ: ಸಿಎಂ ಯಡಿಯೂರಪ್ಪ ಗಲಿಬಿಲಿ ಯಾಕೆ?ಸಿದ್ದರಾಮಯ್ಯ ಆರೋಪ: ಸಿಎಂ ಯಡಿಯೂರಪ್ಪ ಗಲಿಬಿಲಿ ಯಾಕೆ?

Belagavi Gokak JMFC Court Issued Summons To BS Yediyurappa

2019ರ ನವೆಂಬರ್ 23ರಂದು ಗೋಕಾಕ್ ಉಪಚುನಾವಣೆ ಪ್ರಚಾರ ವೇಳೆ ಬಿ.ಎಸ್.ಯಡಿಯೂರಪ್ಪ ಭಾಷಣ ಮಾಡಿದ್ದರು. ಭಾಷಣ ಮಾಡುವ ವೇಳೆಯಲ್ಲಿ, "ವೀರಶೈವ ಸಮಾಜದ ಮತಗಳು ಆಕಡೆ ಈಕಡೆ ಆಗದಂತೆ ಇಲ್ಲಿ ಮತ ಚಲಾವಣೆ ಮಾಡಬೇಕು" ಎಂದು ಹೇಳಿಕೆ ನೀಡಿದ್ದರು. ಈ ಕಾರಣಕ್ಕಾಗಿ ನವೆಂಬರ್ 26ರಂದು ಗೋಕಾಕ್ ನಗರ ಠಾಣೆಯಲ್ಲಿ ಬಿಎಸ್ ‌ವೈ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯಡಿ ಕೇಸ್ ದಾಖಲಾಗಿತ್ತು.

Belagavi Gokak JMFC Court Issued Summons To BS Yediyurappa

ಈ ಪ್ರಕರಣದ ಕುರಿತು ತನಿಖಾಧಿಕಾರಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಇದೀಗ ಬಿ ರಿಪೋರ್ಟ್ ತಿರಸ್ಕರಿಸಿರುವ ನ್ಯಾಯಾಲಯ, ಸಮನ್ಸ್ ಜಾರಿ ಮಾಡಿ, ಸೆಪ್ಟೆಂಬರ್ 1ರೊಳಗೆ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದೆ.

English summary
Belagavi district Gokak JMFC court has issued summons to BS Yediyurappa based on the allegation of violating Code of Conduct in Gokak by-election,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X