ಗೋಕಾಕ್ ಅರಭಾವಿ ಮಠದ ಶ್ರೀ 'ಸಿದ್ದಲಿಂಗ ಸ್ವಾಮೀಜಿ' ಲಿಂಗ್ಯಕ್ಯ: ಶೋಕ ಸಾಗರದಲ್ಲಿ ಭಕ್ತಗಣ
ಬೆಂಗಳೂರು, ಅಕ್ಟೋಬರ್ 16: ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಅರಭಾವಿ ಮಠದ (Arabhavi Mutt) ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ (Siddalinga Swamiji) (64) ಅವರು ಸೋಮವಾರ ಲಿಂಗೈಕ್ಯರಾದರು. ಶ್ರೀಗಳ ಅಲಿಕೆಯಿಂದ ಅವರ ಭಕ್ತಗಣ ಶೋಕ ಸಾಗರದಲ್ಲಿ ಮುಳುಗಿದೆ. ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಅನೇಕರು ಗಣ್ಯರು ಶ್ರೀಗಳ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳು ಭಾನುವಾರ ಮಠದಲ್ಲಿರುವಾಗಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಗೋಕಾಕ್ ನಗರ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ನಿಧನರಾದರು. ಈ ಸುದ್ದಿ ತಿಳಿಯುತ್ತಿದ್ದಂತೆ ಮಠದತ್ತ ಸಹಸ್ರಾರು ಭಕ್ತರು ದೌಡಾಯಿದರು. ಸದ್ಯ ದೂರದ ಊರುಗಳಿಂದ ಶ್ರೀಗಳ ಅಂತಿಮ ದರ್ಶನ ಪಡೆಯಲು ಮಠದತ್ತು ಭಕ್ತರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿಗಳ ಸಂತಾಪ
ಗೋಕಾಕ್ ತಾಲೂಕಿನ ಅರಬಾವಿಯ ಶ್ರೀ ದುರುದುಂಡೇಶ್ವರ ಸಿದ್ದ ಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಲಿಂಗೈಕ್ಯರಾಗಿರುವುದು ಅತ್ಯಂತ ದುಃಖ ತಂದಿದೆ. ಶಿಕ್ಷಣ, ಅನ್ನ ದಾಸೋಹದ ಮೂಲಕ ಸಮಾಜದ ಉನ್ನತಿಗೆ ಶ್ರಮಿಸಿದ ಅವರ ಅಗಲಿಕೆಯಿಂದ ಸಮಾಜ ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ. ಅವರ ಅಪಾರ ಭಕ್ತರಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಗೋಕಾಕ್ ತಾಲೂಕಿನ ಅರಬಾವಿಯ ಶ್ರೀ ದುರುದುಂಡೇಶ್ವರ ಸಿದ್ದ ಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಲಿಂಗೈಕ್ಯರಾಗಿರುವುದು ಅತ್ಯಂತ ದುಃಖ ತಂದಿದೆ. ಶಿಕ್ಷಣ, ಅನ್ನ ದಾಸೋಹದ ಮೂಲಕ ಸಮಾಜದ ಉನ್ನತಿಗೆ ಶ್ರಮಿಸಿದ ಅವರ ಅಗಲಿಕೆಯಿಂದ ಸಮಾಜ ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ. ಅವರ ಅಪಾರ ಭಕ್ತರಿಗೆ ಅವರ ಅಗಲಿಕೆಯ ದುಖವನ್ನು… pic.twitter.com/PnXslo5zYo
— Basavaraj S Bommai (@BSBommai) October 16, 2023
ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು, ಉತ್ತರ ಕರ್ನಾಟಕದ ಅಸಂಖ್ಯಾತ ಬಡವರ ಮನೆಗಳ ಬೆಳಕಾಗಿದ್ದವರು ಮತ್ತು ಶಿಕ್ಷಣ, ಧಾರ್ಮಿಕ, ಸಾಂಸ್ಕೃತಿಕ, ಅನ್ನ ದಾಸೋಹಕ್ಕೆ ಹೆಸರಾಗಿರುವ ಬೆಳಗಾವಿಯ ಗೋಕಾಕ್ ತಾಲ್ಲೂಕಿನ ಅರಭಾವಿಯ ಶ್ರೀ ದುರದುಂಡೇಶ್ವರ ಸಿದ್ದಸಂಸ್ಥಾನ ಮಠದ ಪರಮಪೂಜ್ಯ ಶ್ರೀಗಳು ಲಿಂಗೈಕ್ಯರಾದ ಸುದ್ದಿ ಅತೀವ ದುಃಖ ತಂದಿದೆ.
ಶ್ರೀಗಳ ಅಗಲಿಕೆ ಸಮಾಜಕ್ಕೆ ಬಹುದೊಡ್ಡ ನಷ್ಟವಾಗಿ. ಅವರ ಅಪಾರ ಭಕ್ತ ಸಮೂಹಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಆ ಶಿವನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.












Click it and Unblock the Notifications