ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಂಚಾಯಿತಿ ಚುನಾವಣೆ; ಮೋದಿ ಫೋಟೋ, ಬಿಜೆಪಿ ಚಿಹ್ನೆ ಬಳಕೆ

|
Google Oneindia Kannada News

ಬೆಳಗಾವಿ, ಡಿಸೆಂಬರ್ 25 : ಗ್ರಾಮ ಪಂಚಾಯಿತಿ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಫೋಟೋ, ಬಿಜೆಪಿ ಚಿಹ್ನೆ ಬಳಕೆ ಮಾಡಿದ ಅಭ್ಯರ್ಥಿಗೆ ಸಂಕಷ್ಟ ಎದುರಾಗಿದೆ. ಚುನಾವಣೆ ಪಕ್ಷದ ಆಧಾರ ರಹಿತವಾಗಿ ನಡೆಯಲಿದೆ. ಆದ್ದರಿಂದ, ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗಿದೆ.

ಅಥಣಿ ತಾಲೂಕಿನ ಹುಲಗಬಾಳ ಪಂಚಾಯಿತಿ ವ್ಯಾಪ್ತಿಯ ಕರ್ಲಟ್ಟಿಯಲ್ಲಿ ನಾಲ್ವರು ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕಾಗಿ ರಾಷ್ಟ್ರೀಯ ನಾಯಕರ ಫೋಟೋ ಮತ್ತು ಪಕ್ಷದ ಚಿಹ್ನೆಯನ್ನು ಬಳಕೆ ಮಾಡಿದ್ದಾರೆ.

ಪಂಚಾಯಿತಿ ಚುನಾವಣೆ; ರಾಜಕೀಯ ಪಕ್ಷಗಳಿಗೆ ಸೂಚನೆಪಂಚಾಯಿತಿ ಚುನಾವಣೆ; ರಾಜಕೀಯ ಪಕ್ಷಗಳಿಗೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಮತ್ತು ಸ್ಥಳೀಯ ನಾಯಕ ಲಕ್ಷ್ಮಣ ಸವದಿ ಭಾವ ಚಿತ್ರ, ಬಿಜೆಪಿ ಚಿಹ್ನೆ ಇರುವ ಕರಪತ್ರವನ್ನು ಪ್ರಚಾರಕ್ಕಾಗಿ ಮುದ್ರಿಸಿದ್ದಾರೆ. ಈ ಕರಪತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಂಚಾಯಿತಿ ಚುನಾವಣೆ; ಕೋವಿಡ್ ಸೋಂಕಿತರು ಮತ ಚಲಾಯಿಸಬಹುದು ಪಂಚಾಯಿತಿ ಚುನಾವಣೆ; ಕೋವಿಡ್ ಸೋಂಕಿತರು ಮತ ಚಲಾಯಿಸಬಹುದು

Gram Panchayat Election Candidates Used BJP Logo

"ಜೊತೆಯಾಗಿ ನಡೆಯೋಣ ಗ್ರಾಮ, ರಾಜ್ಯ ಮತ್ತು ದೇಶ ಕಟ್ಟೋಣ", ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ, ಯುವಪೀಳಿಗೆ ಬಿಜೆಪಿ ಜೊತೆಗಿದೆ. ಗ್ರಾಮ ಗ್ರಾಮಗಳಲ್ಲಿ ಕಮಲ ಅರಳಲಿದೆ" ಎಂದು ಘೋಷಣೆಗಳನ್ನು ಕರಪತ್ರದಲ್ಲಿ ಮುದ್ರಿಸಲಾಗಿದೆ.

ಬಳ್ಳಾರಿಯಲ್ಲಿ ಗ್ರಾಂ. ಪಂಚಾಯಿತಿ ಸ್ಥಾನ ಹರಾಜು; ಎಫ್‌ಐಆರ್ ಬಳ್ಳಾರಿಯಲ್ಲಿ ಗ್ರಾಂ. ಪಂಚಾಯಿತಿ ಸ್ಥಾನ ಹರಾಜು; ಎಫ್‌ಐಆರ್

ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಯಾವುದೇ ಪಕ್ಷದ ಚಿಹ್ನೆ ಮತ್ತು ನಾಯಕರ ಫೋಟೋ ಬಳಸಿ ಪ್ರಚಾರ ಮಾಡಬಾರದು ಎಂದು ಹೇಳಿದೆ. ಆದರೂ ಸಹ ಅಭ್ಯರ್ಥಿ ಈ ನಿಯಮವನ್ನು ಉಲ್ಲಂಘನೆ ಮಾಡಿದ್ದಾನೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ತಾಲೂಕು ಚುನಾವಣಾಧಿಕಾರಿ ರವಿ ಬಂಗಾರಪ್ಪ, "ಪಕ್ಷದ ಚಿಹ್ನೆ ಬಳಸಿ ಗ್ರಾಮ ಪಂಚಾಯಿತಿ ಚುನಾವಣೆ ಪ್ರಚಾರ ಮಾಡುವಂತಿಲ್ಲ. ಈ ಕುರಿತು ಯಾರಾದರೂ ದೂರು ನೀಡಿದರೆ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದಾರೆ.

ಡಿಸೆಂಬರ್ 27ರಂದು 2ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ರಾಜಕೀಯ ಮುಖಂಡರ ಭಾವಚಿತ್ರ/ ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು/ ಹಂಚುವುದು ಮಾಡುವಂತಿಲ್ಲ.

ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್‌ಗಳು, ಬ್ಯಾನರ್ ಮತ್ತು ಬಂಟಿಂಗ್‌ಗಳ ಮೂಲಕ ಪ್ರಚಾರ ಮಾಡುವಂತಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ.

English summary
Gram panchayat election candidates in Belagavi district Athani used Narendra Modi, Yediyurappa photo and BJP logo.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X