• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕುಂದಾನಗರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: ಎಂಇಎಸ್ಗೆ ಮುಖಭಂಗ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ನವೆಂಬರ್ 1: ಕರ್ನಾಟಕ ರಾಜ್ಯೋತ್ಸವದ ಬದಲು ಕರಾಳ ದಿನಾಚರಣೆಗೆ ಮುಂದಾದ ಎಂಇಎಸ್ಗೆ ಮೊದಲ ಬಾರಿಗೆ ಮುಖಭಂಗವಾಗಿದೆ.

ಇದೇ‌ ಮೊದಲ ಬಾರಿಗೆ ಎಂಇಎಸ್ ನ ಕರಾಳ ದಿನಾಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಜಿಲ್ಲಾಧಿಕಾರಿ ಎಂ‌.ಜಿ ಹಿರೇಮಠ ಅವರು ಕರಾಳ ದಿನಾಚರಣೆ ಮಾಡದಂತೆ ಖಡಕ್ ಆದೇಶ ಹೊರಡಿಸಿದ್ದಾರೆ.

ಸೂರ್ಯ-ಚಂದ್ರ ಇರುವ ತನಕ ಬೆಳಗಾವಿ ಕರ್ನಾಟಕದ್ದೇ: ಡಿಸಿಎಂ ಸವದಿಸೂರ್ಯ-ಚಂದ್ರ ಇರುವ ತನಕ ಬೆಳಗಾವಿ ಕರ್ನಾಟಕದ್ದೇ: ಡಿಸಿಎಂ ಸವದಿ

ಕರಾಳ ದಿನಾಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡದ ಹಿನ್ನಲೆ ಸರ್ಕಾರದ ವಿರುದ್ಧ ನಾಡದ್ರೋಹಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ರಾಜ್ಯೋತ್ಸವದ ದಿನ ಬೆಳಿಗ್ಗೆ ಹತ್ತು ಗಂಟೆಗೆ ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ.

ಮನೆಯ ಮಹಡಿ ಮೇಲೆ ನಿಂತು ಕಪ್ಪು ಬಲೂನ್ ಗಳನ್ನು ಹಾರಿ ಬಿಡಲು ಕೆಲ ಎಂಇಎಸ್ ಕಾರ್ಯಕರ್ತರು ನಿರ್ಧರಿಸಿದ್ದು, ಇವರಿಗೆ ಮಹಾರಾಷ್ಟ್ರ ಸರ್ಕಾರದಿಂದ ಬೆಂಬಲ ದೊರಕಿದೆ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಸಚಿವರೆಲ್ಲರೂ ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಸ ಮಾಡುತ್ತಿದ್ದು, ಕರ್ನಾಟಕದ ರಾಜ್ಯೋತ್ಸವಕ್ಕೆ ಮಹಾರಾಷ್ಟ್ರ ಸಚಿವರು ಬಾಯಿ ಬಡಿದುಕೊಳ್ಳುತ್ತಿದ್ದಾರೆ.

ಬೆಳಗಾವಿ ನಗರ ಹಾಗೂ ಗಡಿ ಪ್ರದೇಶಗಳಲ್ಲಿ ಪೊಲೀಸ್ ಹೈ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.

English summary
For the first time, the MES's dark day celebration has not been approved by the Belagavi District Administration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X