ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉದ್ಯೋಗ ಒದಗಿಸಲು ಜಿಟಿಟಿಸಿ ಸಹಕಾರಿ: ಡಿಸಿಎಂ ಅಶ್ವಥ್ ನಾರಾಯಣ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ನವೆಂಬರ್ 25: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ಗಳು ಉದ್ಯೋಗ ತರಬೇತಿ ನೀಡುವ ಮೂಲಕ ಯುವಜನಾಂಗಕ್ಕೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಹೇಳಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಅರಭಾವಿಯಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿ.ಟಿ.ಟಿ.ಸಿ) ಹಾಗೂ ತರಬೇತಿ ಕೇಂದ್ರದ ನೂತನ ಕಟ್ಟಡಗಳ ಸಂಕೀರ್ಣವನ್ನು ಮಂಗಳವಾರ ಉದ್ಘಾಟಿಸಿ ಅವರು‌ ಮಾತನಾಡಿದರು.

ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೋಷಕರ ಒತ್ತಾಯ: ಡಿಸಿಎಂಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೋಷಕರ ಒತ್ತಾಯ: ಡಿಸಿಎಂ

ಕೃಷಿಯ ಜೊತೆ ಕೈಗಾರೀಕರಣ ಯುಗ ಪ್ರಾರಂಭ

ಕೃಷಿಯ ಜೊತೆ ಕೈಗಾರೀಕರಣ ಯುಗ ಪ್ರಾರಂಭ

ಅರಭಾವಿ ಕ್ಷೇತ್ರದ ಯುವ ಜನಾಂಗಕ್ಕೆ ಹೊಸ ಚೈತನ್ಯ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಜಿ.ಟಿ.ಟಿ ಸಂಸ್ಥೆ ಸಹಕಾರಿಯಾಗಲಿದೆ.

ಅರಭಾವಿ ಕ್ಷೇತ್ರದಲ್ಲಿ ಕೃಷಿಯ ಜೊತೆಗೆ ಕೈಗಾರೀಕರಣದ ಯುಗ ಪ್ರಾರಂಭವಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅರಭಾವಿಯ ಜಿ.ಟಿ.ಟಿ.ಸಿ ಕೇಂದ್ರವು ರಾಜ್ಯದ 23ನೇ ಸಂಸ್ಥೆಯಾಗಿದ್ದು, ಈ‌ ಸಂಸ್ಥೆಯಲ್ಲಿ ಮುಂಬರುವ ದಿನಗಳಲ್ಲಿ 2 ಹೊಸ ಕೋರ್ಸ್ ಗಳನ್ನು ಕೂಡ ಸೇರ್ಪಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳಿಗೆ ಉದ್ಯೋಗದ ಭರವಸೆ

ವಿದ್ಯಾರ್ಥಿಗಳಿಗೆ ಉದ್ಯೋಗದ ಭರವಸೆ

ಜಿ.ಟಿ.ಟಿ.ಸಿ ಸಂಸ್ಥೆಯು ಪ್ರತಿಷ್ಠಿತ ಕಂಪನಿಯಾದ ಟೋಯೊಟಾ ಕಿರ್ಲೋಸ್ಕರ್ ಸಂಸ್ಥೆಯ ಜೊತೆಗೆ ಒಡಂಬಡಿಕೆ ಮಾಡಿಕೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉದ್ಯೋಗ ಒದಗಿಸುವ ಭರವಸೆ ಕೂಡ ನೀಡಲಾಗುತ್ತಿದೆ. ಸ್ಥಳೀಯ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಡಾ.ಅಶ್ವಥ್ ನಾರಾಯಣ ತಿಳಿಸಿದರು. ಈ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ 100% ಉದ್ಯೋಗ ಲಭಿಸುವದರ ಜೊತೆಗೆ ವಿದ್ಯಾರ್ಥಿ ವೇತನವನ್ನು ಸಹ ನೀಡಲಾಗುವುದು ಎಂದರು.

ವಿದ್ಯಾರ್ಥಿಗಳ ಪರವಾಗಿ ಅವರಿಗೆ ಧನ್ಯವಾದ

ವಿದ್ಯಾರ್ಥಿಗಳ ಪರವಾಗಿ ಅವರಿಗೆ ಧನ್ಯವಾದ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅರಭಾವಿ ಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, 2017 ರಲ್ಲಿ ಶಾಸಕ ಸತೀಶ ಜಾರಕಿಹೊಳಿ ಹಾಗೂ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಅವರ ಪರಿಶ್ರಮದಿಂದ ಈ ಸಂಸ್ಥೆಯ ಕಟ್ಟಡ ನಿರ್ಮಾಣಗೊಂಡಿದೆ. ಆದ್ದರಿಂದ ಅರಭಾವಿ ಕ್ಷೇತ್ರದ ಜನತೆ ಹಾಗೂ ವಿದ್ಯಾರ್ಥಿಗಳ ಪರವಾಗಿ ಅವರಿಗೆ ಧನ್ಯವಾದಗಳು ತಿಳಿಸುತ್ತೇನೆ ಎಂದರು.

ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ

ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ

ಜಿ.ಟಿ.ಟಿ.ಸಿ ಸಂಸ್ಥೆಯಿಂದ ನೀಡಲಾಗುವ ತರಬೇತಿಯ ಲಾಭವನ್ನು ಈ ಭಾಗದ ರೈತರ ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

English summary
Deputy Chief Minister Dr.CN Ashwath Narayana said the Government Instrument and Training Center (GTTC) has helped create a better future for the youth by providing job training.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X