ಬೆಳಗಾವಿಯಲ್ಲಿ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ
ಬೆಳಗಾವಿ, ಜುಲೈ 3: ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಗಾವಿ ತಾಲೂಕಿನ ಸಾಂಬ್ರಾ ಬಳಿಯ ಏರ್ ಫೋರ್ಸ್ ಟ್ರೈನಿಂಗ್ ಸ್ಕೂಲ್ ಗಾರ್ಡ್ ರೂಮ್ ನಲ್ಲಿ ನಡೆದಿದೆ.
ಹರಿಯಾಣ ಮೂಲದ ಅಮೀರ್ ಖಾನ್ (24) ಆತ್ಮಹತ್ಯೆ ಮಾಡಿಕೊಂಡ ಯೋಧ. ಇಂದು ಬೆಳಿಗ್ಗೆ ಇನ್ಸಾಸ್ ರೈಫಲ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಗುಂಡು ಹಾರಿಸಿಕೊಂಡ ತಕ್ಷಣವೇ ಯೋಧನನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೂ ಮುನ್ನವೇ ಯೋಧ ಮೃತ ಪಟ್ಟಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಗ್ರಾಮೀಣ ವಿಭಾಗದ ಎಸಿಪಿ, ಸಿಪಿಐ ವಿಜಯಕುಮಾರ್ ಸಿನ್ನೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












Click it and Unblock the Notifications