ಬೆಳಗಾವಿಯಲ್ಲಿ ಅಂಧ ಮಕ್ಕಳ ಜೊತೆ ಎಚ್‌ಡಿಕೆ ಹುಟ್ಟುಹಬ್ಬ
ಬೆಳಗಾವಿ, ಡಿ.16 : ಮಂಗಳವಾರ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ 56ನೇ ಹುಟ್ಟುಹಬ್ಬ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿರುವ ಕುಮಾರಸ್ವಾಮಿ ಬೆಳಗಾವಿಯಲ್ಲಿನ ಅಂಧ ಮಕ್ಕಳ ಶಾಲೆಗೆ ಭೇಟಿ ನೀಡಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.
ಇಂದು ಬೆಳಗ್ಗೆ ಬೆಳಗಾವಿಯ ಕೋಟೆಕೆರೆಯಲ್ಲಿರುವ ದುರ್ಗಾದೇವಿ ದೇವಾಲಯಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕಾರ್ಯಕರ್ತರೊಂದಿಗೆ ಕೇಕ್ ಕತ್ತರಿಸಿದರು.
ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ನೆಹರುನಗರದಲ್ಲಿರುವ ಮಹೇಶ್ವರ ಅಂಧ ಮಕ್ಕಳ ಶಾಲೆಗೆ ಭೇಟಿ ನೀಡಿ, ಅಂಧರ ಮಕ್ಕಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡರು. ಮಕ್ಕಳ ಜೊತೆ ಕೇಕ್ ಕತ್ತರಿಸಿ ಶಾಲೆಗೆ 1 ಲಕ್ಷ ರೂಪಾಯಿ ಸಹಾಯ ಧನ ನೀಡಿದರು. ಚಿತ್ರಗಳಲ್ಲಿ ನೋಡಿ ಕುಮಾರಸ್ವಾಮಿ ಹುಟ್ಟುಹಬ್ಬ

ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಸಂಭ್ರಮ
ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಇಂದು 56 ನೇ ಹುಟ್ಟು ಹಬ್ಬದ ಸಂಭ್ರಮ.

ಬೆಳಗಾವಿಯಲ್ಲಿರುವ ಕುಮಾರಸ್ವಾಮಿ
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿರುವ ಎಚ್.ಡಿ.ಕುಮಾರಸ್ವಾಮಿ ಅಲ್ಲಿಯೇ ತಮ್ಮ ಹುಟ್ಟು ಹಬ್ಬವನ್ನು ಕಾರ್ಯಕರ್ತರು ಮತ್ತು ಅಂಧ ಮಕ್ಕಳೊಂದಿಗೆ ಆಚರಿಸಿಕೊಂಡರು.

ದೇವಾಲಯಕ್ಕೆ ಭೇಟಿ
ಮಂಗಳವಾರ ಬೆಳಗ್ಗೆ ಬೆಳಗಾವಿಯ ಕೋಟೆಕೆರೆಯಲ್ಲಿರುವ ದುರ್ಗಾದೇವಿ ದೇವಾಲಯಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು.

ಕಾರ್ಯಕರ್ತರೊಂದಿಗೆ ಕೇಕ್ ಕತ್ತರಿಸಿದರು
ದೇವಾಲಯಕ್ಕೆ ಭೇಟಿ ನೀಡಿದ ನಂತರ ಕುಮಾರಸ್ವಾಮಿ ಕಾರ್ಯಕರ್ತರೊಂದಿಗೆ ಕೇಕ್ ಕತ್ತರಿಸಿದರು.

ಅಂಧ ಮಕ್ಕಳ ಶಾಲೆಗೆ ಭೇಟಿ
ಕಾರ್ಯಕರ್ತರೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ನಂತರ ಕುಮಾರಸ್ವಾಮಿ ಅವರು ನೆಹರುನಗರದಲ್ಲಿರುವ ಮಹೇಶ್ವರ ಅಂಧ ಮಕ್ಕಳ ಶಾಲೆಗೆ ಭೇಟಿ ನೀಡಿದ್ದರು.

ಮಕ್ಕಳಿಗೆ ಕೇಕ್ ತಿನ್ನಿಸಿದ ಕುಮಾರಸ್ವಾಮಿ
ಅಂಧ ಮಕ್ಕಳ ಜೊತೆ ಕೇಕ್ ಕತ್ತರಿಸಿದ ಕುಮಾರಸ್ವಾಮಿ ಮಕ್ಕಳಿಗೆ ಕೇಕ್ ತಿನ್ನಿಸಿದರು.

1 ಲಕ್ಷ ಸಹಾಯಧನ ನೀಡಿದರು
ಅಂಧ ಮಕ್ಕಳ ಶಾಲೆಯಲ್ಲಿ ಕೇಕ್ ಕತ್ತರಿಸಿದ ಬಳಿಕ ಶಾಲೆಗೆ 1 ಲಕ್ಷ ರೂಪಾಯಿ ಸಹಾಯ ಧನವನ್ನು ಕುಮಾರಸ್ವಾಮಿ ನೀಡಿದರು.

ಕಾರ್ಯಕರ್ತರಿಂದ 2 ಲಕ್ಷ ದೇಣಿಗೆ
ಜೆಡಿಎಸ್ ಕಾರ್ಯಕರ್ತರು ಅಂಧ ಮಕ್ಕಳ ಶಾಲೆಗೆ 2 ಲಕ್ಷ ದೇಣಿಗೆ ನೀಡಿದರು.












Click it and Unblock the Notifications