ಶಾಸಕಾಂಗ ಸಭೆಯಲ್ಲಿ ಮುನಿಸು, ಹೊರ ನಡೆದ ರಮೇಶ್ ಕುಮಾರ್!
ಬೆಳಗಾವಿ, ನವೆಂಬರ್ 15 : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಆಕ್ರೋಶ ಹೊರಹಾಕಿದರು. ವಿವಾದಕ್ಕೆ ಕಾರಣವಾಗಿರುವ ಕೆಎಂಪಿಎ ಮಸೂದೆ ಕುರಿತು ಸಭೆಯಲ್ಲಿ ಹೆಚ್ಚಿನ ಚರ್ಚೆ ನಡೆಯಲಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಹಲವು ಶಾಸಕರು ಗೈರು ಹಾಜರಾಗಿದ್ದರು.

ಸಭೆಯ ಮುಖ್ಯಾಂಶಗಳು ಇಲ್ಲಿವೆ...
* ಕರ್ನಾಟಕ ಖಾಸಗಿ ವೈದ್ಯಕೀಯ ತಿದ್ದುಪಡಿ ಮಸೂದೆ ವಿಚಾರದಲ್ಲಿ ಸರ್ಕಾರದ ವಿರುದ್ಧ ಆರೋಗ್ಯ ಸಚಿವ ರಮೇಶ್ ಕುಮಾರ್ ಅಸಮಾಧಾನ ಹೊರಹಾಕಿದರು. ಸಭೆಯಿಂದ ಅರ್ಧದಲ್ಲೇ ಹೊರನಡೆದರು.
* ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ವರದಿ ಜಾರಿಗೆ ಪಟ್ಟು ಹಿಡಿದರು. ಕೆಲವು ಶಾಸಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಅಂತಿಮವಾಗಿ ಹಿರಿಯ ಸಚಿವರು, ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.
* ಎಲ್ಲಾ ಶಾಸಕರು ಕಡ್ಡಾಯವಾಗಿ ಕಲಾಪದಲ್ಲಿ ಪಾಲ್ಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.
* ತಮ್ಮ ಕ್ಷೇತ್ರಕ್ಕೆ ಸರಿಯಾದ ಅನುದಾನ ಕೊಟ್ಟಿಲ್ಲ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ದೂರುಗಳು ಬಂದವು
* ಸಚಿವರಾದ ರಮೇಶ ಜಾರಕಿಹೊಳಿ, ಸಂತೋಷ್ ಲಾಡ್, ಆರ್.ವಿ.ದೇಶಪಾಂಡೆ, ಪ್ರಿಯಾಂಕ ಖರ್ಗೆ, ಈಶ್ವರ ಖಂಡ್ರೆ ಗೈರು ಹಾಜರು.












Click it and Unblock the Notifications