ಬೆಳಗಾವಿ ಗಡಿ ವಿವಾದದ ಕುರಿತು ನ.23ಕ್ಕೆ ಸುಪ್ರಿಂನಲ್ಲಿ ವಿಚಾರಣೆ: ಸರ್ವಪಕ್ಷ ಸಭೆ ಕರೆಯಲು ಸಿದ್ದರಾಮಯ್ಯ ಆಗ್ರಹ

ಬೆಳಗಾವಿ, ನವೆಂಬರ್‌, 22: ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬೆಳಗಾವಿ ಗಡಿ ವಿವಾದದ ಬಗ್ಗೆ ನವಂಬರ್ 23ರಂದು ಸುಪ್ರೀಂಕೋರ್ಟ್ ವಿಚಾರಣೆಯನ್ನು ನಡೆಸಲಿದೆ. ವಿಚಾರಣೆ ಎದುರಿಸಲು ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಅವರು ಭಾರಿ ಸಿದ್ಧತೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ಮಹಾರಾಷ್ಟ್ರದವರು ಈಗಾಗಲೇ ವಿಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿಯನ್ನು ಕೂಡ ರಚಿಸಿದ್ದಾರೆ. ಆ ರಾಜ್ಯ ಗಡಿವಿವಾದವನ್ನು ಹೀಗೆ ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಇದೇ ಸಾಕ್ಷಿಯಾಗಿದೆ ಎಂದಿದ್ದಾರೆ.

ಸರ್ವಪಕ್ಷಗಳ ಸಭೆ ಕರೆಯುವಂತೆ ಆಗ್ರಹ

ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಬಿಜೆಪಿ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸುತ್ತದೆ. ಸಮಯ ವ್ಯರ್ಥ ಮಾಡದೆ‌ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿರೋಧ ಪಕ್ಷಗಳ ಸಭೆ ಕರೆದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ‌ವನ್ನು ಮಾಡಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು. ಬೆಳಗಾವಿ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ನೇತೃತ್ವದಲ್ಲಿ ಸೋಮವಾರ ಸಭೆಯನ್ನು ನಡೆಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಗೆ ಸರ್ವಪಕ್ಷಗಳ ಸಭೆ ಕರೆಯುವಂತೆ ಆಗ್ರಹಿಸಿದ್ದಾರೆ.

Hearing of Belagavi border dispute: Siddaramaiah demand for call all party meeting

ಬೆಳಗಾವಿ ಗಡಿ ವಿವಾದ ಇವತ್ತು ನಿನ್ನೆಯದಲ್ಲ. ಹಿಂದಿನಿಂದಲೂ ಗಡಿ ವಿವಾದದ ವಿಚಾರವಾಗಿ ಮಹಾರಾಷ್ಟ್ರ, ಕರ್ನಾಟಕದ ನಡುವೆ ಒಳಜಗಳಗಳು ನಡೆಯುತ್ತಲೇ ಇವೆ. ಈ ವಿವಾದವನ್ನು ಇದುವರೆಗೂ ಯಾರೂ ಕೂಡ ಇತ್ಯರ್ಥಗೊಳಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಇದನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌ ನವೆಂಬರ್‌ 23ರಂದು ವಿಚಾರಣೆ ನಡೆಸಲು ಸಜ್ಜಾಗಿದೆ. ವಿಚಾರಣೆಗೆ ಈಗಾಗಲೇ ಮಹಾರಾಷ್ಟ್ರ ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದ್ದು, ನಮ್ಮ ರಾಜ್ಯವೂ ಕೂಡ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+