ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ : ಮಳೆ, ಪ್ರವಾಹ; ಸಹಾಯವಾಣಿ ಆರಂಭ

|
Google Oneindia Kannada News

ಬೆಳಗಾವಿ, ಆಗಸ್ಟ್ 06 : ಮಹಾರಾಷ್ಟ್ರ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾಗುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದುವರೆಗೂ ಜಿಲ್ಲೆಯಲ್ಲಿ 599 ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಪ್ರವಾಹ ಸಂತ್ರಸ್ತರ ನೆರವಿಗಾಗಿ ಬೆಳಗಾವಿ ಜಿಲ್ಲಾಡಳಿತ ಸಹಾಯವಾಣಿಯನ್ನು ಆರಂಭಿಸಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಲ್ಲಿಯವರೆಗೆ ಮೂರು ಜನರು ಸಾವನ್ನಪ್ಪಿದ್ದು, ಒಟ್ಟಾರೆ 599 ಮನೆಗಳು ಭಾಗಶಃ ಹಾನಿಗೊಂಡಿವೆ.

ಬೆಳಗಾವಿ: ನವೀಲುತೀರ್ಥ ಭರ್ತಿ; 6 ಸಾವಿರ ಕ್ಯುಸೆಕ್ ನೀರು ಬಿಡುಗಡೆಬೆಳಗಾವಿ: ನವೀಲುತೀರ್ಥ ಭರ್ತಿ; 6 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಜಿಲ್ಲೆಯ ಅಥಣಿ, ಕಾಗವಾಡ, ಚಿಕ್ಕೋಡಿ, ಖಾನಾಪೂರ, ರಾಯಬಾಗ, ಹುಕ್ಕೇರಿ, ಮೂಡಲಗಿ, ಗೋಕಾಕ ತಾಲೂಕುಗಳಲ್ಲಿ ಒಟ್ಟಾರೆ 96 ಗ್ರಾಮಗಳು ಪ್ರವಾಹದಿಂದ ಭಾದಿತವಾಗಿವೆ. 23 ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ಮಳೆಯಿಂದ ಒಟ್ಟು 80590 ಹೇಕ್ಟರ್ ಬೆಳೆ ಹಾನಿಯಾಗಿದೆ.

ಎಲ್ಲೆಲ್ಲೂ ಮಳೆಯೋ ಮಳೆ, ಆದ್ರೆ ಇಲ್ಲಿ ಕಥೆ ಕೇಳೋರೇ ಇಲ್ಲಎಲ್ಲೆಲ್ಲೂ ಮಳೆಯೋ ಮಳೆ, ಆದ್ರೆ ಇಲ್ಲಿ ಕಥೆ ಕೇಳೋರೇ ಇಲ್ಲ

Heavy Rain And Flood : Helpline Set Up In Belagavi

"ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಕೃಷ್ಣಾ ಮತ್ತು ಘಟಪ್ರಭಾ ನದಿಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ನದಿ ದಂಡೆಯ ಗ್ರಾಮಸ್ಥರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು" ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಇಂದಿನ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?ಕರ್ನಾಟಕದಲ್ಲಿ ಇಂದಿನ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

ಮಹಾರಾಷ್ಟ್ರದ ಜಲಾಶಯದಿಂದ ಕೃಷ್ಣಾ ನದಿಗೆ ಮಂಗಳವಾರ ಬೆಳಗ್ಗೆ 8 ಗಂಟೆಯವರೆಗೆ 3 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಇದು 4 ಲಕ್ಷ ಕ್ಯೂಸೆಕ್ ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹಿಡಕಲ್ ಜಲಾಶಯ ಕೂಡ ಭರ್ತಿಯಾಗಿದ್ದು, 1 ಲಕ್ಷ ಕ್ಯೂಸೆಕ್ ಒಳಹರಿವು ಇದೆ. ಅದೇ ಪ್ರಮಾಣದಲ್ಲಿ ನೀರನ್ನು ಜಲಾಶಯದಿಂದ ಬಿಡುಗಡೆ ಮಾಡಲಾಗುತ್ತಿದೆ.

ಸೇನೆ, ಪೊಲೀಸ್, ಅಗ್ನಿಶಾಮಕ ದಳ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಅನೇಕ ತಂಡಗಳು ಜನರು ಮತ್ತು ಜಾನುವಾರುಗಳನ್ನು ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿರುತ್ತಾರೆ.
ಜಲಾವೃತಗೊಂಡಿರುವ ಗ್ರಾಮಗಳಲ್ಲಿ ಉಳಿದುಕೊಂಡಿರುವ ಜನ ಮತ್ತು ಜಾನುವಾರುಗಳನ್ನು ಸ್ಥಳಾಂತರಿಸುವ ಕೆಲಸ ನಿರಂತರವಾಗಿ ಸಾಗಿದೆ.

2005-06 ನೇ ಸಾಲಿನಲ್ಲಿ ಎದುರಾಗಿದ್ದ ಪ್ರವಾಹ ಪರಿಸ್ಥಿತಿ ಪುನಾರವರ್ತನೆಗೊಳ್ಳುವ ಸಾಧ್ಯತೆ ಇದೆ. ನದಿಪಾತ್ರದ ಜನರು ಗರಿಷ್ಠಮಟ್ಟದ ಎಚ್ಚರಿಕೆ ವಹಿಸಬೇಕು. ಯಾವುದೇ ಕಾರಣಕ್ಕೂ ಹರಿಯುತ್ತಿರುವ ನೀರಿನಲ್ಲಿ ಈಜಲು ಅಥವಾ ದಾಟಲು ಪ್ರಯತ್ನಿಸಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಸಹಾಯವಾಣಿ ಸಂಖ್ಯೆ : ಜಿಲ್ಲಾಧಿಕಾರಿ ಕಚೇರಿ- 0831-2407290, ಪೊಲೀಸ್ ವರಿಷ್ಠಾಧಿಕಾರಿ ಕಚೇರಿ-0831-2405231, ಚಿಕ್ಕೋಡಿ-08338-272228, ರಾಯಬಾಗ: 08331-225482, ಅಥಣಿ: 08289-251146, ನಿಪ್ಪಾಣಿ: 08338-220395.

English summary
Due to heavy rain and the increase in release of water to river Krishna has created a flood situation in Belagavi. District administration has set up helpline for flood victims.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X