• search
 • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ: ರಾಜ್ಯದ 6 ಸೇತುವೆಗಳು ಜಲಾವೃತ

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ಜುಲೈ 9: ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಗೆ ಕರ್ನಾಟಕ ರಾಜ್ಯದ 6 ಸೇತುವೆಗಳು ಜಲಾವೃತಗೊಂಡಿವೆ.

   Facebook , Instagram , tinder ಸೇರಿದಂತೆ ಬಾರತೀಯ ಸೇನೆಯು 89 ಆ್ಯಪ್‌ಗಳನ್ನು ನಿಷೇಧಿಸಿದೆ.| Oneindia Kannada

   ಬೆಳಗಾವಿ ಜಿಲ್ಲೆ ಚಿಕ್ಕೋಡಿ ಭಾಗದ ಕೆಳಹಂತದ ಆರು ಸೇತುವೆಗಳು ಜಲಾವೃತವಾಗಿವೆ. ಕಲ್ಲೋಳ-ಯಡೂರ, ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ಕುನ್ನೂರ-ಬಾರವಾಡ, ಭೊಜ- ಹುನ್ನರಗಿ ಸೇತುವೆಗಳು ಮೈದುಂಬಿ ಹರಿಯುತ್ತಿವೆ.

   ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ, ಪ್ರವಾಹ ಭೀತಿ

   ಕೃಷ್ಣಾ ಹಾಗೂ ಉಪ ನದಿಗಳಾದ ವೇದಗಂಗಾ, ದೂದಗಂಗಾ ನದಿ ನೀರಿನ ಹರಿಯುವಿಕೆಯಲ್ಲಿ ಹೆಚ್ಚಳವಾಗಿದ್ದು, ಮಹಾಮಳೆಗೆ ಗಡಿಭಾಗದ ಎಲ್ಲ ನದಿಗಳು‌ ಉಕ್ಕಿ ಹರಿಯುತ್ತಿವೆ, ಮುಂದಿನ ಕೆಲವು ದಿನ ಇನ್ನೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದ್ದರಿಂದ ನದಿ ಪಾತ್ರದ ಜನರಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದ್ದು, ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.

   ಕರ್ನಾಟಕದಲ್ಲಿಯೂ ಮುಂಗಾರು ಮಳೆ ಚುರುಕುಗೊಂಡಿದ್ದು, ಮಳೆಯ ಅಬ್ಬರಕ್ಕೆ ಹಲವು ಜಿಲ್ಲೆಗಳು ತತ್ತರಿಸಿವೆ. ಕರಾವಳಿ ಭಾಗ, ಉತ್ತರ ಒಳನಾಡು, ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶಗಳ ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

   English summary
   Six bridges in the Karnataka state of have been submerged For heavy rains in the Konkan region of Maharashtra.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X