ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾರಾಷ್ಟ್ರದಲ್ಲಿ ಭಾರಿ ಮಳೆ; ಬೆಳಗಾವಿಯಲ್ಲಿ ಪ್ರವಾಹ ಭೀತಿ

|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 05 : ಮಹಾರಾಷ್ಟ್ರ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಕೃಷ್ಣಾ ನದಿಯ ಒಳಹರಿವು ಹೆಚ್ಚಾಗುತ್ತಿದ್ದು, ನದಿಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಲ್ಲಾಪುರ ಜಿಲ್ಲಾಧಿಕಾರಿ ಪತ್ರದ ಮೂಲಕ ಎಚ್ಚರ ವಹಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟದಲ್ಲಿ ಅತಿವೃಷ್ಟಿಯಿಂದಾಗಿ ಭಾರಿ ಮಳೆಯಾಗುತ್ತಿದೆ. ಆದ್ದರಿಂದ, ನದಿಗಳು ತುಂಬಿ ಹರಿಯುತ್ತಿವೆ.

ಪ್ರವಾಸಿಗರಿಗೆ ಸಿಹಿ ಸುದ್ದಿ; ದೂಧ್ ಸಾಗರದಲ್ಲಿ ರೈಲು ನಿಲ್ಲಲಿದೆಪ್ರವಾಸಿಗರಿಗೆ ಸಿಹಿ ಸುದ್ದಿ; ದೂಧ್ ಸಾಗರದಲ್ಲಿ ರೈಲು ನಿಲ್ಲಲಿದೆ

ಕೊಲ್ಲಾಪುರ ಮತ್ತು ಸತಾರ ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ, ಕೊಯ್ನಾ ಹಾಗೂ ಪಂಚಗಂಗಾ ನದಿಗಳಿಗೆ ಅಂದಾಜು 2 ಲಕ್ಷ ಕ್ಯೂಸೆಕ್ ಮತ್ತು ಅದಕ್ಕಿಂತ ಹೆಚ್ಚಿನ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಆದ್ದರಿಂದ, ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೊಯ್ನಾದಿಂದ ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ; ಬೆಳಗಾವಿಯಲ್ಲಿ ಮತ್ತೆ ತಲ್ಲಣಕೊಯ್ನಾದಿಂದ ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ; ಬೆಳಗಾವಿಯಲ್ಲಿ ಮತ್ತೆ ತಲ್ಲಣ

Heavy Rain In Maharashtra Panic in Belagavi

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮಹಾರಾಷ್ಟ್ರದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಇದರಿಂದಾಗಿ ಮುಂದಿನ 3 ರಿಂದ 4 ದಿನಗಳ ಕಾಲ ಹೆಚ್ಚಿನ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತದೆ.

ಭೀಕರ ಪ್ರವಾಹ: ಬೆಳಗಾವಿಯಲ್ಲಿ ಕೇಂದ್ರ ತಂಡದ ಪರಿಶೀಲನೆಭೀಕರ ಪ್ರವಾಹ: ಬೆಳಗಾವಿಯಲ್ಲಿ ಕೇಂದ್ರ ತಂಡದ ಪರಿಶೀಲನೆ

ನದಿ ಪಾತ್ರದಲ್ಲಿರುವ ಜನರು ತಮ್ಮ ಅಗತ್ಯ ಸಾಮಾಗ್ರಿ, ಜಾನುವಾರುಗಳ ಜೊತೆ ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕು. ಜಿಲ್ಲಾಡಳಿತ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳಲು ಅಗತ್ಯ ಸಹಕಾರ ನೀಡಲಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

English summary
Heavy rain continued in Maharashtra, Panic in Belagavi. Dr. S.B.Bommanahalli Deputy commissioner of Belagavi issued warning for the Krishna river catchment area people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X