• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿ: ಭಾರಿ ಮಳೆಯಿಂದಾಗಿ ಕೃಷ್ಣಾ ನದಿ ತೀರದಲ್ಲೀಗ ಪ್ರವಾಹ ಭೀತಿ

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ಜುಲೈ 10: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ನಡುವೆಯೇ ಮಳೆಯ ಅಬ್ಬರ ಕೂಡ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಬೆಳಗಾವಿಯ ಚಿಕ್ಕೋಡಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಬೆಳಗಾವಿಯ ಚಿಕ್ಕೋಡಿ ಉಪ ವಿಭಾಗದ ಕೃಷ್ಣಾ ನದಿ ತೀರದಲ್ಲಿ ಈಗ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ ವೇದಗಂಗಾ, ದೂಧಗಂಗಾ, ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ 6 ಕೆಳ ಹಂತದ ಸೇತುವೆಗಳು ಮುಳುಗಡೆಯಾಗಿವೆ.

ಕೃಷ್ಣಾ ನದಿ ಪ್ರವಾಹ ಚರ್ಚೆಗೆ ಮಹಾರಾಷ್ಟ್ರಕ್ಕೆ ತೆರಳಿದ ರಾಜ್ಯ ನಿಯೋಗ

ದೂಧಗಂಗಾ ನದಿಗೆ ನಿರ್ಮಿಸಿರುವ ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಸಿದ್ನಾಳ-ಅಕ್ಕೋಳ, ಮಲಿಕವಾಡ-ದತ್ತವಾಡ ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕುನ್ನೂರ-ಬಾರವಾಡ ಹಾಗೂ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರು-ಕಲ್ಲೋಳ ಸೇತುವೆಗಳು ಮುಳುಗಡೆಯಾಗಿದ್ದು, ಪರ್ಯಾಯ ಮಾರ್ಗಗಳಿಂದ ಜನ ಸಂಚರಿಸುತ್ತಿದ್ದಾರೆ.

ಅಲ್ಲದೆ ಕೃಷ್ಣಾ ನದಿಗೆ 65 ಸಾವಿರ ಕ್ಯೂಸೆಕ್ಸ್ ನೀರು ಒಳ ಹರಿವು ಇದ್ದು, ಈ ಪ್ರಮಾಣ 1 ಲಕ್ಷ 50 ಸಾವಿರ ಮೀರಿದರೆ ಕೃಷ್ಣಾ ನದಿ ತನ್ನ ಪಾತ್ರವನ್ನು ಬಿಟ್ಟು ಹೊರಗೆ ಬರುತ್ತದೆ. ಇದೇ ಪ್ರಮಾಣದ ನೀರು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಪ್ರವಾಹ ಎದುರಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ.

English summary
Amid rising coronavirus infection in the state, the rains have been so loud that many districts are facing flood threats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X