ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲಿ ಮಳೆ ಗಾಳಿ ಅಬ್ಬರಕ್ಕೆ ನೆಲ ಕಚ್ಚಿದ ಮೊಬೈಲ್ ಟವರ್

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಮೇ 27: ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಬೀಸಿದ ಏಕಾ ಏಕಿ ಮಳೆ, ಗಾಳಿಗೆ ಭಾರೀ ಅವಘಡ ಸಂಭವಿಸಿದೆ.

ನಿನ್ನೆ ಸುರಿದ ಮಳೆಗೆ ಗ್ರಾಮದ ಪಂಚಾಯತ್ ಆವರಣದಲ್ಲಿರುವ ಮೊಬೈಲ್ ಟವರ್ ನೆಲ ಕಚ್ಚಿದೆ. ಜೋರಾಗಿ ಬೀಸಿದ ಗಾಳಿಗೆ ಕೆಲ ಮನೆಗಳ ಹಂಚುಗಳು, ತಗಡಿನ ಶೆಡ್ಡುಗಳು ಹಾರಿ ಹೋಗಿವೆ. ಮರಗಳು ನೆಲಕ್ಕೆ ಉರುಳಿವೆ.

ಮುಂಗಾರು ಪೂರ್ವ ಮಳೆ ಇನ್ನೂ 3 ದಿನ ಮುಂದುವರೆಯುವ ಸಾಧ್ಯತೆಮುಂಗಾರು ಪೂರ್ವ ಮಳೆ ಇನ್ನೂ 3 ದಿನ ಮುಂದುವರೆಯುವ ಸಾಧ್ಯತೆ

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ದೊಡ್ಡವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Heavy rains and wind occurred in Budarakatti village in bailhongal taluk

ರಾಜ್ಯದ ಹಲವೆಡೆ ಗಾಳಿ ಸಹಿತ ಮಳೆಯಾಗಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾನಿಯಾಗಿದೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಮತ್ತು ಹೊಸಪೇಟೆ ತಾಲೂಕಿನಾದ್ಯಂತ ಬೀಸಿದ ಬಿರುಗಾಳಿ ಮತ್ತು ಮಳೆಗೆ ವಿದ್ಯುತ್ ಪೋಲ್ ಗಳು, ಮೊಬೈಲ್ ಟವರ್ ಗಳು ಬಾಗಿ, ಬಾಳೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

English summary
Heavy rains and wind occurred in Budarakatti village in bailhongal taluk yesterday. There is a mobile tower on the village panchayat campus has landed on the ground for loud wind.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X