Heavy Rains: ಭಾರೀ ಮಳೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಏನೆಲ್ಲಾ ಅನಾಹುತಗಳು ಸಂಭವಿಸಿದ್ವು ಗೊತ್ತಾ?
Heavy Rains: ಈಗಾಗಲೇ ರಾಜ್ಯದ ಹಲವೆಡೆ ಭಾರೀ ಮಳೆಯಿಂದಾಗಿ ಅನಾಹುತಗಳೇ ಸೃಷ್ಟಿಯಾಗಿವೆ. ಕೆಲವೆಡೆ ಸಾಧಾರಣ ಮಳೆಯಾಗುತ್ತಿದ್ದು, ಇನ್ನೂ ಹಲವೆಡೆ ಮಳೆಯೇ ಇಲ್ಲದೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಇನ್ನು ಇಂದು (ಜುಲೈ 01) ಬೆಳ್ಳಂಬೆಳಗ್ಗೆಯೇ ಬೆಳಗಾವಿ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ.
ಭಾರೀ ಮಳೆ ಸುರಿದ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಹಲವಡೆ ನದಿ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಗೋವಾ ಮತ್ತು ಮಹಾರಾಷ್ಟ್ರ ಭಾಗದಲ್ಲಿಯೂ ಧಾರಾಕಾರ ಮಳೆ ಸುರಿದು ರಸ್ತೆಗಳು ಚರಂಡಿಯಂತೆ ನಿರ್ಮಾಣವಾಗಿ, ವಾಹನ ಸವಾರರು ಪರದಾಡುವುದಲ್ಲದೆ, ಜನಜೀವನ ಅಸ್ತವ್ಯಸ್ಥವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಖಾನಾಪೂರದಲ್ಲಿರುವ ನದಿಗಳು ತುಂಬಿ ಹರಿಯುತ್ತಿದ್ದು, ನದಿಯಲ್ಲಿರುವ ಹಣುಮಾನ ದೇವಸ್ಥಾನ ಮುಳಗಡೆಯಾಗಿದೆ. ಆದ್ದರಿಂದ ಮುಜಾಗ್ರತಾ ಕ್ರಮವಾಗಿ ನದಿ ದಂಡೆಗೆ ಯಾರೂ ಹೋಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆಯಾ ಎಂದು ಕಾದುನೋಡಬೇಕಿದೆ.
ಹಾಗೆಯೇ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಇನ್ನೂ ನಾಲ್ಕು ದಿನಗಳ ಕಾಳ ಮಳೆರಾಯನ ಆರ್ಭಟ ಮುಂದುವರೆದರೆ, ಏನೆಲ್ಲಾ ಅನಾಹುತಗಳು ಸಂಭವಿಸಲಿವೆ ಎನ್ನುವ ಆತಂಕದಲ್ಲಿ ಬೆಳಗಾವಿ ಜಿಲ್ಲೆ ಜನರಿದ್ದಾರೆ.
8 ದಿನಗಳ ಕಾಲ ಭಾರೀ ಮಳೆ: ರಾಜ್ಯದಲ್ಲೆಡೆ ಜೂನ್ ಆರಂಭದಿಂದ ಮುಂಗಾರು ಚುರುಕು ಪಡೆದಿತ್ತು. ಆದರೆ ಕೆಲವು ಜಿಲ್ಲೆಗಳಲ್ಲಿ ಮೂರನೇ ವಾರ ಮಳೆರಾಯನ ಆರ್ಭಟ ತಗ್ಗಿದೆ. ಇದೀಗ ಕೆಲವು ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆ ಮುಂದುವರೆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಮತ್ತೊಂದೆಡೆ ಹಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಇದರ ನಡುವೆಯೇ ಕಾವೇರಿ, ಕೃಷ್ಣ ಜಲಾನಯನ ಪ್ರದೇಶದಲ್ಲಿ ಮುಂದಿನ 8 ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಮುಂಗಾರು ಪಡೆದು ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಜಲಾಶಯದ ನೀರಿನ ಮಟ್ಟವು ಕೂಡ ಹೆಚ್ಚಾಗುತ್ತಲೇ ಇತ್ತು. ಆದರೆ ಇದೀಗ ದಿಢೀರ್ ಮಳೆ ತಗ್ಗಿದ ಹಿನ್ನೆಲೆ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ 8 ದಿನಗಳ ಕಾಲ ಈ ಭಾಗದಲ್ಲಿ ಮಳೆ ಮುಂದುವರೆದರೆ, ಮತ್ತೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿ, ನೀರಿನ ಮಟ್ಟ ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಜುಲೈ 01 ರಿಂದ ಜುಲೈ 09 ರವರೆಗೆ ಕೃಷ್ಣಾ ಜಲಾನಯನ ಪ್ರದೇಶ, ಕಾವೇರಿ ಜಲಾಜನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಈ ಭಾಗದ ಕೆಲವೆಡೆ ಮಾತ್ರ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.
ಕಳೆದ ವರ್ಷ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಸಂಪೂರ್ಣ ಪ್ರಮಾಣದಲ್ಲಿ ನೆಲಕಚ್ಚಿದ್ದು, ಇದರಿಂದ ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜನರು ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ಉಂಟಾಗಿತ್ತು. ಇದರ ನಡುವೆಯೇ ಕಾವೇರಿ ವಿವಾದವೂ ಕೂಡ ಸೃಷ್ಟಿಯಾಯಿತು. ಆದರೆ ಇದೀಗ ಈ ವರ್ಷ ಅಂದರೆ 2024 ಜೂನ್ ಆರಂಭದಲ್ಲೇ ಮುಂಗಾರು ಚುರುಕು ಪಡೆದ ಹಿನ್ನೆಲೆ ಜಲಾಶಯಕ್ಕೆ ಜೀವಕಳೆ ಬಂದಂತಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಕೆಆರ್‌ಎಸ್ ಜಲಾಶಯದ ನೀರಿನ ಪ್ರಮಾಣವ ಹೆಚ್ಚಾಗಿದ್ದು, ಇದರಿಂದ ಬಾಡಿಹೋಗಿದ್ದ ಅನ್ನದಾತರ ಮುಖದಲ್ಲಿ ಮತ್ತೆ ಮಂದಹಾಸ ಮೂಡುವಂತಾಯಿತು. ಇದೀಗ ಜುಲೈ ಆರಂಭವಾಗುತ್ತಿದ್ದಂತೆ ಮಳೆ ತಗ್ಗಿದ್ದು, ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ. ಮತ್ತೊಂದೆಡೆ ಮುಂದಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಭಾರೀ ಮಳೆಯಾದರೆ ಮತ್ತೆ ಒಳಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.












Click it and Unblock the Notifications