Hidkal Dam: ಮುಂದುವರೆದ ಭಾರೀ ಮಳೆ: ಒಂದೇ ವಾರದಲ್ಲಿ ಹಿಡಕಲ್ ಜಲಾಶಯದ ನೀರಿನ ಮಟ್ಟ 10 ಟಿಎಂಸಿ ಹೆಚ್ಚಳ.!
ಬೆಳಗಾವಿ, ಜುಲೈ, 09: ಈಗಾಗಲೇ ರಾಜ್ಯದ ಹಲವು ಭಾಗಗಲ್ಲಿ ಭಾರೀ ಮಳೆಯಿಂದ ನದಿ-ಹಳ್ಳ ಕೊಳ್ಳಗಳು ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮತ್ತೊಂಡೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಒಳಹರಿವು ಕೂಡ ಹೆಚ್ಚಾಗುತ್ತಲಿದೆ. ಹಾಗೆಯೇ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಹಿಡಕಲ್ ಜಲಾಶಯಕ್ಕೂ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಹಾಗಾದರೆ ಪ್ರಸ್ತುತ ಜಲಾಶಯದ ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.

ಭಾರೀ ಮಳೆಯಿಂದ ಜಲಾಶಯಕ್ಕೆ ನೀರು ಹರಿದುಬರುತ್ತಿದೆ. ಪರಿಣಾಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೂಣ್ಣೂರು ಗ್ರಾಮ ಘಟಪ್ರಭಾ ನದಿ ನೀರಿನಲ್ಲಿ ಅಂದರೆ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ. ಅಲ್ಲದೆ, ಇಲ್ಲಿನ ಸುಮಾರು 148 ಅಡಿ ಎತ್ತರದ ವಿಠ್ಠಲ ಮಂದಿರವೂ ಕೂಡ ಮುಳುಗಿದ್ದು, ಸದ್ಯ 128 ಅಡಿಯಷ್ಟು ದೇವಸ್ಥಾನವನ್ನು ಘಟಪ್ರಭೆ ಆವರಿಸಿ ಗೋಪುರ ಒಂದೆ ಕಾಣುತ್ತಿದೆ. ಇನ್ನು ನಾಲ್ಕು ಅಡಿ ನೀರು ಜಾಸ್ತಿಯಾದರೂ ಸಂಪೂರ್ಣ ಮಂದಿರವೇ ಮುಳುಗಡೆಯಾಗಲಿದೆ.
ಭಾರೀ ಮಳೆ ಹಿನ್ನೆಲೆ ಎರಡು ಜಿಲ್ಲೆಗಳಿಗೆ ಕುಡಿಯುವ ನೀರು, ಕೃಷಿಗೆ ಆಧಾರವಾಗಿರುವ ಹಿಡಕಲ್ ಜಲಾಶಯದಲ್ಲಿ ನೀರಿನ ಮಟ್ಟ ಒಂದೇ ವಾರದ ಅವಧಿಯಲ್ಲಿ 8 ರಿಂದ 18 ಟಿಎಂಸಿಗೆ ಹೆಚ್ಚಳವಾಗಿದ್ದು, ಈ ಮೂಲಕ ಸುಮಾರು 10 ಟಿಎಂಸಿಯಷ್ಟು ನೀರಿನ ಪ್ರಮಾಣ ಹೆಚ್ಚಳ ಹೆಚ್ಚಳವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಸದ್ಯ ಜಲಾಶಯದ ಒಳಹರಿವಿನ ಪ್ರಮಾಣ 21,000 ಕ್ಯೂಸೇಕ್‌ನಷ್ಟಿದೆ. ಇನ್ನು ಈ ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯ 51 ಟಿಎಂಸಿ ಆಗಿದ್ದು, ಇದೀಗ 18 ಟಿಎಂಸಿ ಭರ್ತಿಯಾಗಿದೆ. ಇದರಿಂದ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ರೈತರಲ್ಲಿ ಸಂತಸ ಮೂಡಿದೆ.
5,000 ಸಾವಿರ ಕ್ಯೂಸೆಕ್ ನೀರು ಪೊಲು: ಭದ್ರಾ ಡ್ಯಾಂನಿಂದ ಕಳೆದ ಒಂದು ವಾರದಿಂದ 5,000ಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಹೋಗಿದ್ದು, ಇದಕ್ಕೆ ರಾಜ್ಯ ಸರ್ಕಾರ ಹಾಗೂ ಡ್ಯಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ನೀರು ಸ್ಥಗಿತ ಕುರಿತಂತೆ ಶಾಶ್ವತ ಪರಿಹಾರದ ಭರವಸೆ ಸಿಗಬೇಕು. ಈಗ ನೀರು ಸೋರಿಕೆ ತಡೆ ಮಾಡಿರುವ ಕುರಿತಂತೆ ಅಧಿಕಾರಿಗಳ ಸಮರ್ಪಕ ಉತ್ತರ ಸಿಗದಿದ್ದರೆ ಅಲ್ಲೇ ಪ್ರತಿಭಟನೆ ನಡೆಸುತ್ತೇವೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 8ಕ್ಕೆ ಬಿಜೆಪಿ ನಾಯಕರ ನಿಯೋಗವು ಭದ್ರಾ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಲಿದೆ. ಸ್ವಯಂಪ್ರೇರಿತರಾಗಿ ರೈತರು, ರೈತ ಮುಖಂಡರು ಬುತ್ತಿ, ರೊಟ್ಟಿ ಕಟ್ಟಿಕೊಂಡು ಬನ್ನಿ. ಭದ್ರಾ ಡ್ಯಾಂನಿಂದ 5,000 ಕ್ಯೂಸೆಕ್ ನೀರು ಹರಿದು ಹೋಗಿದ್ದು, ಇದರಿಂದ ಭದ್ರಾ ಅಚ್ಚುಕಟ್ಟುದಾರ ಪ್ರದೇಶದ ರೈತರು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸರ್ಕಾರ, ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.
ಕಳೆದ ವರ್ಷಕ್ಕೆ ಹೋಲಿಸಿದರೆ ಭದ್ರಾ ಡ್ಯಾಂ ನೀರಿನ ಪ್ರಮಾಣ ಕಡಿಮೆಯಾಗಿದೆ. ಇನ್ನೂ 7 ಅಡಿ ನೀರು ಬರಬೇಕು. ಜಲಾಶಯದ ನೀರಿನ ಮಟ್ಟ 131.10 ಅಡಿ ಮಾತ್ರ ಇದೆ. ಅಧಿಕಾರಿಗಳ ಯಡವಟ್ಟಿನಿಂದ ಮತ್ತೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಆತಂಕಕ್ಕೆ ಕಾರಣವಾಗಿದೆ. ಈ ಬಾರಿ ಮಳೆ ಕಡಿಮೆಯಾಗಿದೆ. ಡ್ಯಾಂಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದ್ದು, ಸಂಗ್ರಹವಾದರೆ ನೀರಿನ ಮಟ್ಟ ಏರಿಕೆಯಾಗುತಿತ್ತು. ಒಂದು ವಾರಗಳ ಕಾಲ ದಿನಕ್ಕೆ 5,000 ಕ್ಯೂಸೆಕ್ ನೀರು ಪೋಲಾದರೆ ಯಾರು ಹೊಣೆ? ಎಂದು ಪ್ರಶ್ನಿಸಿದರು.
ಜಲಾಶಯ ಭರ್ತಿಯಾದ ಬಳಿಕ, ನದಿಗೆ ನೀರು ಬಿಡಲು ಕ್ರಸ್ಟ್ ಗೇಟ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಡ್ಯಾಂಗೆ ಸಂಬಂಧಿಸಿದ ರಿಪೇರಿ ಕೆಲಸ ಬೇಸಿಗೆ ಸಮಯದಲ್ಲಿ ಮಾಡದೇ ಮಳೆಗಾಲದಲ್ಲಿ ಕೈಗೆತ್ತಿಕೊಂಡಿರುವುದೇ ಈ ಸಮಸ್ಯೆಗೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ.
ರೈತರ, ಜನರ ಬದುಕಿಗೆ ಸಂಬಂಧಿಸಿದ ಕಾರಣ ಚುನಾವಣಾ ನೀತಿ ಸಂಹಿತೆ ಪರಿಣಾಮ ಬೀರದು. ಚುನಾವಣೆ ಮುಗಿದು ಎಷ್ಟು ದಿನಗಳು ಆದವು. ಕೇವಲ ಹತ್ತು ದಿನಗಳಲ್ಲಿ ಮುಗಿಸುವ ಕೆಲಸಕ್ಕೆ ಇಷ್ಟೊಂದು ತಡವಾಗಿ ಕೈಗೆತ್ತಿಕೊಂಡಿರುವುದು ಯಾಕೆ? ಜಲಾಶಯಕ್ಕೆ ನೀರು ಹರಿದು ಬರುವ ಮೊದಲೇ ಯಾಕೆ ಕಾಮಗಾರಿ ಪೂರ್ಣಗೊಳಿಸಲಿಲ್ಲ ಎಂದು ಪ್ರಶ್ನಿಸಿದರು.
ಡ್ಯಾಂನ ರಿವರ್ ಗೇಟ್ ಅನ್ನ ಎತ್ತಿಕೊಂಡು ಗೇಟಿನ ರಿಪೇರಿ ಕೈಗೊಳ್ಳಲಾಗಿದೆ. ಆದರೆ ರಿಪೇರಿ ಮುಗಿದ ಮೇಲೆ ಒಂದು ಡ್ಯಾಂ ರಿವರ್ ಗೇಟ್ ಇಳಿಯುತ್ತಿಲ್ಲ. ಇದರಿಂದ ಡ್ಯಾಂಗೆ ಬರುತ್ತಿರುವ ನೀರು ಸರಾಗವಾಗಿ ಹೊರಕ್ಕೆ ಹೋಗುತ್ತಿದೆ ಎಂಬ ಮಾಹಿತಿ ನಮಗೂ ಸಿಕ್ಕಿದೆ. ಬರೋಬ್ಬರಿ 4-5 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದೆ. ಅಲ್ಲದೆ, ಡ್ಯಾಂನಲ್ಲಿ ನೀರು ಸಂಗ್ರಹ ಹೆಚ್ಚುತ್ತಿಲ್ಲ. ನದಿಯಲ್ಲಿ ಸರಾಗವಾಗಿ ಹರಿಯುತ್ತಿರುವ ನೀರನ್ನು ಗಮನಿಸಿರುವ ರೈತರು ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಸಮರ್ಪಕ ಉತ್ತರ ಸಿಗುತ್ತಿಲ್ಲ ಎಂದು ದೂರಿದರು.
ಭದ್ರಾ ಜಲಾಶಯ ದೊಡ್ಡದು. ನೀರು ಸಂಗ್ರಹವಾಗುವುದು ನಿಧಾನಗತಿಯಲ್ಲಿಯೇ. ಬೇಸಿಗೆಯಲ್ಲಿ ರೈತರಿಗೆ ವೇಳಾಪಟ್ಟಿ ನಿಗದಿ ಮಾಡಿ ನೀರು ಹೊರ ಬಿಡಲಾಗುತ್ತದೆ. ಮಳೆಗಾಲದಲ್ಲಿ ಜಲಾಶಯದಲ್ಲಿನ ಸಂಗ್ರಹವಾದ ನೀರು ಅಧಿಕಾರಿಗಳ ಯಡವಟ್ಟಿನಿಂದ ಹೋದರೆ ಯಾರು ಹೊಣೆ ಎಂಬುದು ರೈತ ಮುಖಂಡರ ಪ್ರಶ್ನೆಯಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications