Holi 2023: ಮದ್ಯ ಪ್ರಿಯರೇ ಗಮನಿಸಿ, ಈ ದಿನ ಬೆಳಗಾವಿಯಲ್ಲಿ ಮದ್ಯ ಮಾರಾಟ ನಿಷೇಧ
ಹೋಳಿ ಹಬ್ಬದ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ತಾಲೂಕು ಹೊರತುಪಡಿಸಿ ಬೆಳಗಾವಿ ಜಿಲ್ಲೆಯಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಹೋಳಿ ನಿಮಿತ್ತ ಬೆಳಗಾವಿ ಜಿಲ್ಲೆಯಾದ್ಯಂತ ಮಾರ್ಚ್ 7 ಮತ್ತು 8ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ದಿನಗಳಲ್ಲಿ ಕಾಮದಹನ ಹಾಗೂ ರಂಗ ಪಂಚಮಿಯನ್ನು ಆಚರಿಸಲಾಗುತ್ತದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಹಿತ ದೃಷ್ಟಿಯಿಂದಾಗಿ ಬಾರ್ ಹಾಗೂ ವೈನ್ ಶಾಪ್‌ಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ.
ಹೋಳಿ ಹಬ್ಬದ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ತಾಲೂಕು ಹೊರತುಪಡಿಸಿ ಬೆಳಗಾವಿ ಜಿಲ್ಲೆಯಾದ್ಯಂತ ಮಾರ್ಚ್ 7ರ ಮುಂಜಾನೆ 6 ಗಂಟೆಯಿಂದ ಮಾರ್ಚ್ 9ರ ಮುಂಜಾನೆ 6 ಗಂಟೆಯವರೆಗೆ ಮದ್ಯದ ಅಂಗಡಿಗಳನ್ನು, ಬಾರ್‌ಗಳನ್ನು, ಮದ್ಯ ತಯಾರಿಕಾ ಘಟಕಗಳನ್ನು, ಸಾಗಾಣಿಕೆ ಹಾಗೂ ಮಾರಾಟ ಮಳಿಗೆಗಳನ್ನು ಬಂದ್ ಮಾಡಿ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಎಲ್ಲ ಬಾರ್, ಹೋಟೆಲ್ ರೆಸ್ಟೊರೆಂಟ್ ಮಾಲೀಕರು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಥವರು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 32ರನ್ವಯ ಶಿಕ್ಷೆಗೆ ಒಳಪಡುವರು.
#Karnataka
— Kiran Parashar (@KiranParashar21) March 6, 2023
On the account of Holi festival, bars and wine shops in Belagavi district will be closed from 7 March, 2023 6am to 9 March, 2023 6am. : @SPBelagavi @IndianExpress @allaboutbelgaum pic.twitter.com/qBoZXf39tl
ಬೆಳಗಾವಿ/ಚಿಕ್ಕೋಡಿಯ ಅಬಕಾರಿ ಜಂಟಿ ಆಯುಕ್ತರು, ಅಬಕಾರಿ ಉಪ ಆಯುಕ್ತರು, ಅಬಕಾರಿ ಅಧೀಕ್ಷಕರು, ಅಬಕಾರಿ ಉಪ ಅಧೀಕ್ಷಕರು ಮತ್ತು ಅಬಕಾರಿ ಉಪ ಅಧೀಕ್ಷಕರು ಇವರು ಹಬ್ಬದ ಸಮಯದಲ್ಲಿ ಮದ್ಯ ಮಾರಾಟ ಆಗದಂತೆ ಕಟ್ಟುನಿಟ್ಟಾಗಿ ನಿಗಾ ವಹಿಸಬೇಕು. ಕರ್ನಾಟಕ ಅಬಕಾರಿ ಕಾಯ್ದೆ ಅಡಿ ಒಬ್ಬ ವ್ಯಕ್ತಿ ಹೊಂದಬೇಕಾದ ಮದ್ಯ ಸಂಗ್ರಹಣೆ ಹೊರ್ತು ಪಡಿಸಿ ಹೆಚ್ಚಿನ ಸಂಗ್ರಹಣೆ ಇರದಂತೆ ಹಾಗೂ ಲೈಸನ್ಸ್ ಇಲ್ಲದ ಆವರಣಗಳಲ್ಲಿ ಸಂಗ್ರಹಣೆ ಇಡದಂತೆ ಸೂಕ್ತ ಕ್ರಮ ಜರುಗಿಸಲು ಸೂಚಿಸಿದೆ.












Click it and Unblock the Notifications