ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ ವೈರಲ್: ಸಂತ್ರಸ್ತರಿಗಾಗಿ ಭಿಕ್ಷೆ ಬೇಡಲೂ ಸಿದ್ಧ ಎಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಆಗಸ್ಟ್ 29: "ರಾಜ್ಯದಲ್ಲಿ ಸಂಭವಿಸಿದ ಪ್ರವಾಹಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರವಾಗಿ ಒಂದು ರೂಪಾಯಿಯೂ ಬಂದಿಲ್ಲ" ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದನದೊಳಗೇ ದೊಂಬರಿಗೆ ಅವಮಾನ; ಲಕ್ಷ್ಮಿ ಹೆಬ್ಬಾಳ್ಕರ್ ಗೆ ತಿಳಿವಳಿಕೆ ನೀಡುವವರು ಯಾರಿದ್ದಾರೆ?ಸದನದೊಳಗೇ ದೊಂಬರಿಗೆ ಅವಮಾನ; ಲಕ್ಷ್ಮಿ ಹೆಬ್ಬಾಳ್ಕರ್ ಗೆ ತಿಳಿವಳಿಕೆ ನೀಡುವವರು ಯಾರಿದ್ದಾರೆ?

ಗೋಕಾಕ್ ವಿಧಾನಸಭಾ ಕ್ಷೇತ್ರದ ಪ್ರವಾಹ ಪೀಡಿತ ಕ್ಷೇತ್ರಗಳಿಗೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, " ಪ್ರವಾಹದಲ್ಲಿ ಗೋಕಾಕಿನ ಎಷ್ಟೋ ಕುಟುಂಬಗಳು ಬೀದಿಪಾಲಾಗಿವೆ. ಆದರೆ ಸರ್ಕಾರ ಸೇರಿದಂತೆ ಯಾವ ಜನಪ್ರತಿನಿಧಿಗಳೂ ಜನರಿಗೆ ಸ್ಪಂದಿಸುತ್ತಿಲ್ಲ. ಸಂತ್ರಸ್ತರಾದವರ ನೆರವಿಗೆ ನಿಲ್ಲುತ್ತಿಲ್ಲ. ಬರಗಾಲ ಇದೆ ಎಂದು ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಇದಕ್ಕೆ ಒಂದು ಸಾವಿರ ಕೋಟಿ ಬಿಡುಗಡೆಯಾಗಿದೆ. ಆ ಹಣದಲ್ಲಿ ನಿಮಗೆ 10 ಸಾವಿರ ರೂಪಾಯಿ ನೀಡಿ ರಾಜ್ಯ ಸರ್ಕಾರ ದಿಕ್ಕು ತಪ್ಪಿಸುತ್ತಿದೆ" ಎಂದು ಆರೋಪಿಸಿದರು.

I Am Ready To Beg To Build House For Flood Victims Said Lakshmi Hebbalkar In Gokak

"ಪ್ರವಾಹ ಸಂತ್ರಸ್ತರಿಗೆ ಮನೆ ಕಟ್ಟಿಕೊಡುವುದರ ವಿಚಾರವಾಗಿ ಪ್ರತಿಭಟನೆ ಮಾಡಿ ಬೆಂಗಳೂರಿನಲ್ಲಿ ಭಿಕ್ಷೆ ಎತ್ತುತ್ತೇನೆ. ಕೇಂದ್ರ ಸರ್ಕಾರದ ಕಣ್ಣು ತೆರೆಸಲು ಭಿಕ್ಷೆ ಬೇಡಲೂ ನಾನು ಸಿದ್ಧ" ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

ಬೆಳಗಾವಿ: ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಮತ್ತೆ ಕಿರಿಕ್ಬೆಳಗಾವಿ: ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಮತ್ತೆ ಕಿರಿಕ್

ಜೊತೆಗೆ, "ಸಂಘದಿಂದ ಸಾಲ ತುಂಬಿ ಎಂದು ಯಾರಾದರೂ ಕೇಳಿದರೆ ನೀವು ಸಾಲ ತುಂಬಬೇಡಿ, ಅವರ ಹೆಸರು ಬರೆದಿಟ್ಟು ವಿಷ ತೆಗೆದುಕೊಳ್ಳುತ್ತೇವೆ ಎಂದು ಹೇಳಿ, ನಾನು ನಿಮ್ಮೊಂದಿಗಿದ್ದೇನೆ" ಎಂದೂ ಹೇಳಿದ್ದಾರೆ.

English summary
Lakshmi Hebbalkar's video is viral, saying, "I am ready to beg for the sake of flood victims. I will protest in bangalore".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X