ನಾನು ಎಲ್ಲೂ ಹೋಗಿಲ್ಲ, ಕಾಂಗ್ರೆಸ್ ನಲ್ಲೇ ಇದ್ದೇನೆ: ಲಖನ್ ಜಾರಕಿಹೊಳಿ
Recommended Video
ಬೆಳಗಾವಿ, ಏಪ್ರಿಲ್ 23: ನಾನು ಎಲ್ಲೂ ಹೋಗಿ ಹಾಳಾಗಿಲ್ಲ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಎಂದು ಲಖನ್ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದ್ದಾರೆ.
ರಮೇಶ್ ಜಾರಕಿಹೊಳಿ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ ಬೆನ್ನಲ್ಲೆ ಅವರ ಸಹೋದರ ಲಖನ್ ಅವರು ಸಹ ಪಕ್ಷ ಬಿಡುತ್ತಾರೆಂಬ ಸುದ್ದಿ ಹರಿದಾಡಿತ್ತು, ಅದಕ್ಕೆ ಸಿಟ್ಟಿನಿಂದಲೇ ಪ್ರತಿಕ್ರಿಯಿಸಿರುವ ಲಖನ್ ತಾವು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದಿದ್ದಾರೆ.
ನಾನು ಕಾಂಗ್ರೆಸ್‌ನಲ್ಲೇ ಇರುತ್ತೇನೆ, ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲ್ಲುವುದೇ ನಮ್ಮ ಗುರಿ, ರಮೇಶ್ ಅವರು ಕಾಂಗ್ರೆಸ್ ನಲ್ಲಿ ಇದ್ದರಷ್ಟೆ ಅವರಿಗೆ ಬೆಂಬಲ ಎಂದು ಲಖನ್ ಅವರು ಸ್ಪಷ್ಟಪಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ಅವರು ಈಗಾಗಲೇ ಪಕ್ಷ ಬಿಟ್ಟು ಹೊರಗೆ ಹೋಗಿ ಬಂದಿದ್ದಾರೆ, ನಾನು ಪಕ್ಷದಲ್ಲೇ ಇರುತ್ತೇನೆ, ಸಿದ್ದರಾಮಯ್ಯ ಅವರೇ ನಮ್ಮ ನಾಯಕರು ಎಂದು ಲಖನ್ ಅವರು ಹೇಳಿದ್ದಾರೆ.
ಇಂದು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ರಮೇಶ್ ಜಾರಕಿಹೊಳಿ, 'ಸತೀಶ್ ಜಾರಕಿಹೊಳಿ ತಲೆಕೆಟ್ಟವರಂತೆ ಮಾತನಾಡುತ್ತಾರೆ, ಈಗಾಗಲೇ ಒಬ್ಬ ಸಹೋದರನನ್ನು ಹಾಳು ಮಾಡಿದ್ದಾರೆ' ಎಂದಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಲಖನ್ ಜಾರಕಿಹೊಳಿ, ನಾನು ಎಲ್ಲಿಗೂ ಹೋಗಿಲ್ಲ, ಹಾಳಾಗಿಯೂ ಹೋಗಿಲ್ಲ ಎಂದಿದ್ದಾರೆ.












Click it and Unblock the Notifications