ಬೆಳಗಾವಿ: ನಾನು ಮಂತ್ರಿಯಾಗಲು ದೇವೇಂದ್ರ ಫಡ್ನವಿಸ್ ಆಶೀರ್ವಾದವಿದೆ
ಬೆಳಗಾವಿ, ಸೆಪ್ಟೆಂಬರ್ 20: ನಾನು ರಾಜ್ಯದಲ್ಲಿ ಮಂತ್ರಿಯಾಗಲು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಆಶೀರ್ವಾದವಿದೆ, ಹೀಗಾಗಿ ಥ್ಯಾಂಕ್ಸ್ ಹೇಳಲು ಅವರ ಭೇಟಿಯಾಗಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ಪೌರ ಕಾರ್ಮಿಕರಿಗೆ ನಿರ್ಮಿಸಲಾದ ಪೌರಕಾರ್ಮಿಕರ ವಸತಿ ಸಮುಚ್ಚಯವನ್ನು ಸಚಿವ ರಮೇಶ ಜಾರಕಿಹೊಳಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ G+2 ಮಾದರಿಯಲ್ಲಿ ಗೋಕಾಕ್ ಪೌರಕಾರ್ಮಿಕರಿಗೆ ವಸತಿ ಸಮುಚ್ಚಯ ನಿರ್ಮಿಸಿ ಉದ್ಘಾಟನಾ ಸಮಾರಂಭ ನಡೆಸಲಾಯಿತು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಮೇಶ್, ಶಾಸಕ ಉಮೇಶ್ ಕತ್ತಿ ನನ್ನ ಹಳೆಯ ಗೆಳೆಯ. ಅವರಿಗೆ ಮಂತ್ರಿ ಸ್ಥಾನ ಕೊಟ್ಟರೆ ಖುಷಿಪಡುತ್ತೇನೆ. ಎಲ್ಲರೂ ನನ್ನ ಗೆಳೆಯರೇ ಎಲ್ಲರಿಗೂ ಮಂತ್ರಿ ಸ್ಥಾನ ಸಿಕ್ಕರೆ ಒಳ್ಳೆಯದು. ಆದರೆ ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬ ತೀರ್ಮಾನವನ್ನು ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ತಗೆದುಕೊಳ್ಳುತ್ತದೆ ಎಂದರು.
ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ""ಥ್ಯಾಂಕ್ಸ್ ಹೇಳಲು ದೇವೇಂದ್ರ ಫಡ್ನವೀಸ್ ಭೇಟಿಯಾಗಿದ್ದೆ. ಫೆಬ್ರವರಿ 6 ರಂದು ನಾನು ಮಂತ್ರಿಯಾದ ತಕ್ಷಣ ಅವರನ್ನು ಭೇಟಿಯಾಗಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ದೇವೇಂದ್ರ ಫಡ್ನವಿಸ್ ಭೇಟಿಯಾಗಿರಲಿಲ್ಲ.''

ದೆಹಲಿಯಲ್ಲಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದು, ಇದು ಸೌಜನ್ಯಯುತ ಭೇಟಿಯಷ್ಟೇ. ನಾನು ಮಂತ್ರಿಯಾಗಲು ದೇವೇಂದ್ರ ಫಡ್ನವಿಸ್ ಅವರ ಪ್ರಮುಖ ಆಶೀರ್ವಾದವಿದೆ. ಹೀಗಾಗಿ ಥ್ಯಾಂಕ್ಸ್ ಹೇಳಲು ದೇವೇಂದ್ರ ಫಡ್ನವಿಸ್ ಭೇಟಿಯಾಗಿದ್ದೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications