ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ ಲಖನ ಜಾರಕಿಹೊಳಿ

ಬೆಳಗಾವಿ, ಡಿಸೆಂಬರ್ 31 : 'ಕಾರ್ಯಕರ್ತರು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಬಯಸುತ್ತಿದ್ದಾರೆ. ನಾನೂ ಕಾಂಗ್ರೆಸ್‌ ಅಥವ ಬಿಜೆಪಿಯಿಂದ ಸ್ಪರ್ಧಿಸಬಹುದು' ಎಂದು ಲಖನ ಜಾರಕಿಹೊಳಿ ಹೇಳಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, 'ಯಮನಕರಡಿ ಕ್ಷೇತ್ರವೂ ಪಿಎಗಳ ರಾಜ್ಯವಾಗಿದೆ. ನಾನು ಎರಡು ಬಾರಿ ಕಾಂಗ್ರೆಸ್ ಟಿಕೆಟ್ ಬಿಟ್ಟು ಕೊಟ್ಟಿದ್ದೇನೆ, 2018ರ ಚುನಾವಣೆಗೆ ಸ್ಪರ್ಧಿಸುವುದು ಖಚಿತ' ಎಂದರು.

I will contest for 2018 assembly elections says Lakhan Jarkiholi

' 25 ವರ್ಷಗಳಿಂದ ನಾವು ಕಾಂಗ್ರೆಸ್ ಪಕ್ಷದಲ್ಲಿದ್ದೇವೆ. ಕೆಲವು ಮೂಲ ಕಾಂಗ್ರೆಸಿಗರು ಅಸಮಾಧಾನಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ನನಗೆ ಸಹಕಾರ ಕೊಟ್ಟಿದ್ದಾರೆ' ಎಂದು ಹೇಳಿದರು.

'ಯಮನಕರಡಿ ಕ್ಷೇತ್ರವೂ ಪಿಎಗಳ ರಾಜ್ಯವಾಗಿದೆ' ಎಂದು ಲಖನ ಜಾರಕಿಹೊಳಿ ಹೇಳಿದ್ದು ಕುತೂಹಲಕ್ಕೆ ಕಾರಣವಾಗಿದೆ. ಅವರು ಯಮನಕರಡಿ ಕ್ಷೇತ್ರದಿಂದ ಅವರು ಸ್ಪರ್ಧಿಸಲಿದ್ದಾರೆಯೇ? ಎಂಬ ಪ್ರಶ್ನೆ ಹುಟ್ಟು ಹಾಕಿದೆ.

ಜಾರಕಿಹೊಳಿ ಕುಟುಂಬದ ಐವರು ಸಹೋದರರ ಪೈಕಿ ಮೂವರು ಸದ್ಯ ಶಾಸಕರಾಗಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರು. ಮಾಜಿ ಸಚಿವ ಸತೀಶ ಜಾರಕಿಹೊಳಿ ಯಮನಕರಡಿ ಕ್ಷೇತ್ರದ ಸದ್ಯದ ಶಾಸಕರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+