• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ಸುರೇಶ ಅಂಗಡಿ ಬದುಕಿದ್ದರೆ 2-3 ತಿಂಗಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು''

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ಅಕ್ಟೋಬರ್ 25: ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವ ಕೇಂದ್ರ ಸಚಿವರಾಗಿದ್ದ ಸುರೇಶ ಅಂಗಡಿ ಬದುಕಿದ್ದರೆ 2-3 ತಿಂಗಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಸಚಿವ ರಮೇಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾಕ್‌ನಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸುರೇಶ್ ಅಂಗಡಿಯವರಿಗೆ ಬಹಳ ದೊಡ್ಡ ಭವಿಷ್ಯವಿತ್ತು. ಎರಡ್ಮೂರು ತಿಂಗಳು ಬದುಕಿದ್ದರೆ ಬಹಳ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದ್ದರು ಎಂದರು.

ಬೆಳಗಾವಿ ಉಪ ಚುನಾವಣೆ; ಪ್ರಕಾಶ್ ಹುಕ್ಕೇರಿ ಅಚ್ಚರಿಯ ಹೇಳಿಕೆ!

ಸುರೇಶ್ ಅಂಗಡಿ ಒಳ್ಳೆಯ ನಾಯಕರು ನಮ್ಮನ್ನು ಅಗಲಿದ್ದಾರೆ, ಅವರಿಗೆ ಒಂದು ವಿಚಿತ್ರ ಹುದ್ದೆ ಸಿಗುತ್ತಿತ್ತು. ದುರ್ದೈವ ನಮ್ಮನ್ನಗಲಿದರು. ಒಳ್ಳೆಯವರನ್ನು ಆ ದೇವರು ಬೇಗ ಕರೆದುಕೊಳ್ಳುತ್ತಾನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ದಿವಂಗತ ಸುರೇಶ್ ಅಂಗಡಿಯವರು ಮುಖ್ಯಮಂತ್ರಿ ಆಗುತ್ತಿದ್ದರು ಎಂದು ಬೆಳಗಾವಿ ಸಾಹುಕಾರ್ ಪರೋಕ್ಷವಾಗಿ ಹೇಳಿಕೆ ಕೊಟ್ಟಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಇತ್ತೀಚೆಗಷ್ಟೇ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ದರು ಎಂದು ಸುರೇಶ್ ಅಂಗಡಿ ಸೋದರ ಮಾವ ಲಿಂಗರಾಜ ಪಾಟೀಲ್ ಹೇಳಿಕೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Minister Ramesh Jarakiholi has a surprise statement saying that if Suresh Angadi, the Union minister who had died of coronavirus, had survived, he would have got a bigger post within 2-3 months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X