ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಣೇಶೋತ್ಸವ ವೇಳೆ ಮಾರ್ಗಸೂಚಿ ಉಲ್ಲಂಘಿಸಿದರೆ ಕಠಿಣ ಕ್ರಮ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಆಗಸ್ಟ್ 20: ಕೋವಿಡ್ ಸೋಂಕಿನ ಭೀತಿಯ ನಡುವೆಯೇ ಗಣೇಶ ಚತುರ್ಥಿ ಬಂದಿದೆ. ಸೋಂಕು ಹರಡುವ ಭೀತಿಯ ಕಾರಣ ಹೆಚ್ಚು ಜನರು ಸೇರುವಂತಿಲ್ಲ ಎಂದು ಸರ್ಕಾರ ಹೇಳಿದೆ. ಗಣೇಶ ಚತುರ್ಥಿ ಆಚರಣೆ ಮಾಡಲು ಕರ್ನಾಟಕ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಕೋವಿಡ್ ಭೀತಿಯ ಕಾರಣ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಯನ್ನು ನಿಷೇಧಿಸಲಾಗಿದೆ.

ಕರ್ನಾಟಕದಲ್ಲಿ ಮೊಹರಂ ಆಚರಣೆಗೆ ಸರ್ಕಾರದ ಮಾರ್ಗಸೂಚಿ ಕರ್ನಾಟಕದಲ್ಲಿ ಮೊಹರಂ ಆಚರಣೆಗೆ ಸರ್ಕಾರದ ಮಾರ್ಗಸೂಚಿ

ಗಣೇಶೋತ್ಸವ ವೇಳೆ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದರು.

Belagavi: If Violating The Guidelines During Ganeshotsava Taken Strict Action

ಬೆಳಗಾವಿ ನಗರದಲ್ಲಿ ಬುಧವಾರ ಕರೆಯಲಾಗಿದ್ದ ‌ಗಣೇಶೋತ್ಸವ ಮಂಡಳಿ ಪದಾಧಿಕಾರಿಗಳ ಜತೆಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಬೇರೆ ಸಮುದಾಯಗಳ ಭಾವನೆಗಳಿಗೆ ಧಕ್ಕೆಯಾಗದಂತೆ ಹಾಗೂ ಸರ್ಕಾರದ ಮಾರ್ಗಸೂಚಿ ಅನ್ವಯ ಗಣೇಶೋತ್ಸವವನ್ನು ಆಚರಣೆ ಮಾಡಬೇಕು. ಗಣೇಶೋತ್ಸವ ಸಂದರ್ಭದಲ್ಲಿ ಸರ್ಕಾರದ ಎಲ್ಲ ಮಾರ್ಗಸೂಚಿಗಳನ್ನು ಜನರು ಹಾಗೂ ಗಣೇಶ ಮಂಡಳಿಗಳು ಪಾಲನೆ ಮಾಡಬೇಕು. ನಿಯಮ ಉಲ್ಲಂಘನೆ ಮಾಡಿದ್ದಲ್ಲಿ ಕಾನೂನು ರೀತಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

English summary
Law and order DCP Seema Lotkar has warned that if the government guidelines are violated, strict action will be taken.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X