ಬೆಳಗಾವಿಯಲ್ಲಿ ಐಐಟಿ?, ಸುರೇಶ್ ಅಂಗಡಿಗೆ ಪತ್ರ
ಬೆಳಗಾವಿ, ಮೇ 5 : ಕರ್ನಾಟಕದಲ್ಲಿ ಐಐಟಿ ಎಲ್ಲಿ ಸ್ಥಾಪನೆಯಾಗಲಿದೆ? ಎಂಬ ಪ್ರಶ್ನೆಗೆ ಇನ್ನೂ ಉತ್ತರ ದೊರಕಿಲ್ಲ. ಐಐಟಿ ಸ್ಥಾಪನೆ ಮಾಡಲು ಸುಮಾರು 600 ಎಕರೆ ಭೂಮಿಯ ಅಗತ್ಯವಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರಿಗೆ ಪತ್ರ ಬರೆದಿದ್ದಾರೆ.
ಮಾರ್ಚ್‌ನಲ್ಲಿ ಸಂಸದ ಸುರೇಶ್ ಅಂಗಡಿ ಅವರು ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಬೆಳಗಾವಿಯಲ್ಲಿ ಐಐಟಿ ಸ್ಥಾಪನೆ ಮಾಡುವಂತೆ ಮನವಿ ಮಾಡಿದ್ದರು. ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಸ್ಥಾಪನೆ ಕುರಿತು ಸುರೇಶ್ ಅಂಗಡಿ ಅವರು ಸಲ್ಲಿಸಿದ್ದ ಮನವಿಗೆ ಸಚಿವರು ಸ್ಪಂದಿಸಿದ್ದು, ಪತ್ರದ ಮೂಲಕ ಉತ್ತರ ನೀಡಿದ್ದಾರೆ. [ಐಐಟಿ ಸ್ಥಾಪನೆಗೆ ಬೆಳಗಾವಿ ಉತ್ತಮ ಸ್ಥಳ]
ಸುರೇಶ್ ಅಂಗಡಿ ಅವರಿಗೆ ಬರೆದಿರುವ ಪತ್ರದಲ್ಲಿ ಐಐಟಿ ಸ್ಥಾಪನೆಗೆ 500 ರಿಂದ 600 ಎಕರೆ ಭೂಮಿ ಉಚಿತವಾಗಿ ಬೇಕು, ಯಾವುದೇ ಕಾನೂನು ತೊಡಕಿಲ್ಲದ ಭೂಮಿಯ ಅಗತ್ಯವಿದೆ. ಎಲ್ಲಾ ಮೂಲಭೂತ ಸೌಕರ್ಯಗಳು, ರಸ್ತೆ, ರೈಲ್ವೆ ಹಾಗೂ ವಿಮಾನಯಾನದ ಸೌಲಭ್ಯವಿರುವ ಸ್ಥಳ ಗುರುತಿಸುವಂತೆ ಸಚಿವರು ತಿಳಿಸಿದ್ದಾರೆ. [ಕರ್ನಾಟಕದಲ್ಲಿ ಐಐಟಿ, ಮೂರು ಜಿಲ್ಲೆಗಳ ಆಯ್ಕೆ]
ಕೆಲವು ದಿನಗಳ ಹಿಂದೆ ಕರ್ನಾಟಕ ಸರ್ಕಾರ ಐಐಟಿ ಸ್ಥಾಪನೆಗೆ ಮೂರು ಜಿಲ್ಲೆಗಳನ್ನು ಗುರುತಿಸಿತ್ತು. ರಾಯಚೂರು, ಧಾರವಾಡ, ಮೈಸೂರು ಜಿಲ್ಲೆಗಳನ್ನು ಗುರುತಿಸಿ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಈಗ ಕೇಂದ್ರ ಸಚಿವರು ಬೆಳಗಾವಿ ಸಂಸದರಿಗೆ ಪತ್ರ ಬರೆದಿರುವುದು ಕುತೂಹಲ ಮೂಡಿಸಿದೆ.

ಬೆಳಗಾವಿಯಲ್ಲಿ ಸ್ಥಾಪನೆಯಾಗಲಿದೆಯೇ ಐಐಟಿ?
ಕೇಂದ್ರ ಸರ್ಕಾರ 2015-16ನೇ ಸಾಲಿನ ಬಜೆಟ್‌ನಲ್ಲಿ ಕರ್ನಾಟಕದಲ್ಲಿ ಐಐಟಿ ಸ್ಥಾಪಿಸಲಾಗುವುದು ಎಂದು ಘೋಷಣೆ ಮಾಡುತ್ತಿದ್ದಂತೆ ಯಾವ ಜಿಲ್ಲೆಗೆ ಐಐಟಿ ಬರಬೇಕು? ಎಂಬ ಚರ್ಚೆ ನಡೆಯುತ್ತಿದೆ. ಬೆಳಗಾವಿಯಲ್ಲಿ ಐಐಟಿ ಸ್ಥಾಪನೆಯಾಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.

ಬೆಳಗಾವಿ ಸಂಸದರಿಂದ ಮನವಿ
ಮಾರ್ಚ್‌ನಲ್ಲಿ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಬೆಳಗಾವಿಯಲ್ಲಿ ಐಐಟಿ ಸ್ಥಾಪನೆ ಮಾಡುವಂತೆ ಮನವಿ ಮಾಡಿದ್ದರು. ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಸ್ಥಾಪನೆ ಕುರಿತು ಸುರೇಶ್ ಅಂಗಡಿ ಅವರು ಸಲ್ಲಿಸಿದ್ದ ಮನವಿಗೆ ಸಚಿವರು ಸ್ಪಂದಿಸಿದ್ದು, ಪತ್ರದ ಮೂಲಕ ಉತ್ತರ ನೀಡಿದ್ದಾರೆ.

ಸುಮಾರು 600 ಎಕರೆ ಭೂಮಿ ಬೇಕು
ಐಐಟಿ ಸ್ಥಾಪನೆಗೆ 500 ರಿಂದ 600 ಎಕರೆ ಭೂಮಿ ಉಚಿತವಾಗಿ ಬೇಕು, ಯಾವುದೇ ಕಾನೂನು ತೊಡಕಿಲ್ಲದ ಭೂಮಿಯ ಅಗತ್ಯವಿದೆ. ಎಲ್ಲಾ ಮೂಲಭೂತ ಸೌಕರ್ಯಗಳು, ರಸ್ತೆ, ರೈಲ್ವೆ ಹಾಗೂ ವಿಮಾನಯಾನದ ಸೌಲಭ್ಯವಿರುವ ಸ್ಥಳ ಗುರುತಿಸಿ, ರಾಜ್ಯ ಮತ್ತು ಕೇಂದ್ರ ತಂಡ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಐಐಟಿ ಸ್ಥಾಪನೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪತ್ರದಲ್ಲಿ ಸಚಿವರು ತಿಳಿಸಿದ್ದಾರೆ.

ಸರ್ಕಾರದ ಪ್ರಸ್ತಾವನೆಯಲ್ಲಿ ಬೆಳಗಾವಿ ಹೆಸರಿಲ್ಲ
ಕೆಲವು ದಿನಗಳ ಹಿಂದೆ ಕರ್ನಾಟಕ ಸರ್ಕಾರ ಐಐಟಿ ಸ್ಥಾಪನೆಗೆ ಮೂರು ಜಿಲ್ಲೆಗಳನ್ನು ಗುರುತಿಸಿತ್ತು. ರಾಯಚೂರು, ಧಾರವಾಡ, ಮೈಸೂರು ಜಿಲ್ಲೆಗಳನ್ನು ಗುರುತಿಸಿ, ಈ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಈಗ ಕೇಂದ್ರ ಸಚಿವರು ಬೆಳಗಾವಿ ಸಂಸದರಿಗೆ ಪತ್ರ ಬರೆದಿರುವುದು ಕುತೂಹಲ ಮೂಡಿಸಿದೆ.

ಐಐಟಿ ಸ್ಥಾಪನೆಗೆ ಭಾರೀ ಪೈಪೋಟಿ
ಕರ್ನಾಟಕದ ವಿವಿಧ ಜಿಲ್ಲೆಗಳ ನಡುವೆ ಐಐಟಿ ಸ್ಥಾಪನೆಗೆ ಭಾರೀ ಪೈಪೋಟಿ ನಡೆದಿದೆ. ರಾಯಚೂರು, ಧಾರವಾಡ, ಮೈಸೂರು, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ, ಹಾಸನ ಹೀಗೆ ವಿವಿಧ ಜಿಲ್ಲೆಗಳ ನಡುವೆ ಪೈಪೋಟಿ ನಡೆಯುತ್ತಿದ್ದು, ಎಲ್ಲಿ ಸ್ಥಾಪನೆಯಾಗಲಿದೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. [ಐಐಟಿ ಎಲ್ಲಿ ಸ್ಥಾಪನೆ ಆಗಬೇಕು?]
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications