ಬೆಳಗಾವಿಯಲ್ಲಿ ಮತ್ತೆ ಭುಗಿಲೆದ್ದ ಪ್ರತ್ಯೇಕ ರಾಜ್ಯದ ಕೂಗು

Recommended Video

      ಉತ್ತರ ಕರ್ನಾಟಕಕ್ಕೆ ಕುಮಾರಸ್ವಾಮಿ ಅನ್ಯಾಯ ಮಾಡಿದ್ದಾರೆಂದು ಪ್ರತಿಭಟನೆ | Oneindia Kannada

      ಬೆಳಗಾವಿ, ಜುಲೈ.10: ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಉತ್ತರ ಕರ್ನಾಟಕದ 13 ಜಿಲ್ಲೆಗಳಿಗೆ ಅನ್ಯಾಯವಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿ ಬೆಳಗಾವಿ ಸುವರ್ಣ ಸೌಧದ ಮುಂದೆ ಉತ್ತರ ಕರ್ನಾಟಕ ವಿಕಾಸ ವೇದಿಕೆ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

      ಸುವರ್ಣಸೌಧವನ್ನು ಉತ್ತರ ಕರ್ನಾಟಕದ ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಬೇಕು, ಸುವರ್ಣ ಸೌಧದಲ್ಲಿ ಸೆಕ್ರೇಟಿಯಟ್ ಕಚೇರಿ ಆರಂಭಿಸಬೇಕು, ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಲಾಯಿತು.

      ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ಪ್ರತ್ಯೇಕ ರಾಜ್ಯದ ಕೂಗು ಎತ್ತಿದರು. ಹೀಗೆ ಮುಂದುವರಿದರೆ ಸಾಂಕೇತಿಕವಾಗಿ ಬೆಳಗಾವಿಯ ಸುವರ್ಣಸೌಧಕ್ಕೆ ಬೆಂಕಿ ಹಚ್ಚುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.

      In Kumaraswamy budget neglected 13 districts of North Karnataka

      ಉತ್ತರ ಕರ್ನಾಟಕವನ್ನು ಕುಮಾರಸ್ವಾಮಿ ಅವರು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದು, ಮುಂದಿನ ದಿನಗಳಲ್ಲಿ ಬೆಳಗಾವಿ ಸುವರ್ಣಸೌಧ ಮತ್ತು ಬೆಂಗಳೂರು ವಿಧಾನಸೌಧಕ್ಕೆ ಕೀಲಿ ಹಾಕುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ನಿಮ್ಮ ಉತ್ತರ ಕರ್ನಾಟಕ ಅಭಿವೃದ್ಧಿ ಸಾಕು.

      ನಮಗೆ ಪ್ರತ್ಯೇಕ ರಾಜ್ಯ ಮಾಡಿ ಬಿಡಿ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಕೋಶಾಧ್ಯಕ್ಷ ನಿಲೇಶ ಬನ್ನೂರ ಆಗ್ರಹಿಸಿದರು. ನೂರಾರು ಹೋರಾಟಗಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+