ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ; ಆದ್ಯತೆಯ ಮೇರೆಗೆ ಅತಿವೃಷ್ಟಿ ಹಾನಿ ಸರಿಪಡಿಸಲು ಸೂಚನೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಅಕ್ಟೋಬರ್ 20: ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಇದುವರೆಗೆ ಪ್ರವಾಹ ಮತ್ತು ಅತಿವೃಷ್ಟಿಯಿಂದ ಆಗಿರುವ ಮೂಲಸೌಕರ್ಯಗಳು ಮತ್ತಿತರ ಹಾನಿಯನ್ನು ಸರಿಪಡಿಸಲು ಆದ್ಯತೆಯ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಯಿಂದಾಗಿ ಜಿಲ್ಲೆಯಲ್ಲಿ ಆಗಿರುವ ಹಾನಿಯ ಕುರಿತು ಚರ್ಚೆ ನಡೆಸಲಾಯಿತು. ಇದೇ ಸಂದರ್ಭ, ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡವರು ಮನೆ ನಿರ್ಮಾಣಕ್ಕೆ ವಿವಿಧ ಕಂತಿನಲ್ಲಿ ಪರಿಹಾರ ಪಡೆದುಕೊಂಡು ನಿರ್ಮಾಣ ಕಾರ್ಯ ಆರಂಭಿಸದಿರುವವರಿಗೆ ನೋಟಿಸ್ ನೀಡಿ ಸರ್ಕಾರದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಅತೀಕ್ ತಿಳಿಸಿದರು.

 ಕೋವಿಡ್ ಹಾಗೂ ಮಳೆಯಿಂದ ಯೋಜನೆಗಳ ವಿಳಂಬ

ಕೋವಿಡ್ ಹಾಗೂ ಮಳೆಯಿಂದ ಯೋಜನೆಗಳ ವಿಳಂಬ

ಮಳೆ ಮತ್ತು ಕೋವಿಡ್ ಕಾರಣಕ್ಕೆ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳು ವಿಳಂಬವಾಗಿವೆ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಹೆಚ್ಚಿನ ಅವಧಿ ಕಾರ್ಯನಿರ್ವಹಿಸುವ ಮೂಲಕ ತಕ್ಷಣವೇ ಟೆಂಡರ್ ಕರೆದು ಕಾರ್ಯ ಮುಗಿಸುವಂತೆ ತಿಳಿಸಿದರು. ಜಲಜೀವನ್ ಮಿಷನ್ ಅಡಿಯಲ್ಲಿ ಪ್ರತಿ ಮನೆಗೆ ನಲ್ಲಿ ಸಂಪರ್ಕ ಒದಗಿಸಲು ಪ್ರಯತ್ನಿಸಬೇಕು ಎಂದರು. ಜಿಲ್ಲೆಯ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳು ಹಾಗೂ ವೈದ್ಯಕೀಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದ ಅವರು, ಹೆರಿಗೆಗೆ ಸರ್ಕಾರಿ ಆಸ್ಪತ್ರೆಗೆ ಬರುವವರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂದು ತಿಳಿಸಿದರು.

ಗದಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 159 ಕೋಟಿ ರೂ. ನಷ್ಟಗದಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 159 ಕೋಟಿ ರೂ. ನಷ್ಟ

 ಅತಿವೃಷ್ಟಿಯಿಂದ ಜಿಲ್ಲೆಯಲ್ಲಾದ ನಷ್ಟವೆಷ್ಟು

ಅತಿವೃಷ್ಟಿಯಿಂದ ಜಿಲ್ಲೆಯಲ್ಲಾದ ನಷ್ಟವೆಷ್ಟು

ಜಿಲ್ಲೆಯಲ್ಲಿ ಇದುವರೆಗೆ ಅತಿವೃಷ್ಟಿಯಿಂದ 4 ಜನರು 13 ಜಾನುವಾರಗಳ ಜೀವಹಾನಿಯಾಗಿದ್ದು, ಸಂಬಂಧಿಸಿದ ಕುಟುಂಬದವರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲೆಯಲ್ಲಿ ಪೂರ್ಣ ಹಾಗೂ ಭಾಗಶಃ ಸೇರಿದಂತೆ ಒಟ್ಟಾರೆ 4619 ಮನೆಗಳ ಹಾನಿಯಾಗಿದೆ. ಅದೇ ರೀತಿ 1.66 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ 14 ಸಾವಿರ ರೈತರಿಗೆ 6.40 ಕೋಟಿ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

 ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಇಳಿಮುಖ

ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಇಳಿಮುಖ

ಕೊರೊನಾ ಪ್ರಕರಣಗಳು ಕೂಡ ಜಿಲ್ಲೆಯಲ್ಲಿ ಕ್ರಮೇಣ ನಿಯಂತ್ರಣಕ್ಕೆ ಬಂದಿದ್ದು, ಆಕ್ಸಿಜನ್ ಬೇಡಿಕೆ ಇಳಿಮುಖವಾಗಿದೆ ಎಂದು ತಿಳಿಸಿದರು. ಎಲ್ಲ ಹದಿನಾಲ್ಕು ತಾಲ್ಲೂಕುಗಳಲ್ಲಿ ಪವಿತ್ರ ವನ ನಿರ್ಮಾಣಕ್ಕೆ ಐದು ಎಕರೆ ಜಮೀನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಚಿತ್ರದುರ್ಗದಲ್ಲಿ ಮಳೆ ಹೆಚ್ಚಾಗಿ ಈರುಳ್ಳಿ ಸಂಪೂರ್ಣ ನಾಶ; ಶಾಸಕರಿಂದ ಪರಿಶೀಲನೆಚಿತ್ರದುರ್ಗದಲ್ಲಿ ಮಳೆ ಹೆಚ್ಚಾಗಿ ಈರುಳ್ಳಿ ಸಂಪೂರ್ಣ ನಾಶ; ಶಾಸಕರಿಂದ ಪರಿಶೀಲನೆ

 ಮನೆ ನಿರ್ಮಾಣಕ್ಕೆ ಮನವೊಲಿಕೆ

ಮನೆ ನಿರ್ಮಾಣಕ್ಕೆ ಮನವೊಲಿಕೆ

ಮನೆನಿರ್ಮಾಣಕ್ಕೆ ಕಂತಿನಲ್ಲಿ ಪರಿಹಾರ ಪಡೆದುಕೊಂಡು ನಿರ್ಮಾಣ ಕಾರ್ಯ ಆರಂಭಿಸದಿರುವವರಿಗೆ ನೋಟೀಸ್ ನೀಡಬೇಕು. ಅದಾಗ್ಯೂ ನಿರ್ಮಾಣ ಕಾರ್ಯ ಆರಂಭಿಸದಿದ್ದರೆ ಸರ್ಕಾರದ ಮಾರ್ಗಸೂಚಿ ಅನುಸಾರ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗುವುದು ಎಂದು ಬೈಲಹೊಂಗಲ ಉಪ ವಿಭಾಗಾಧಿಕಾರಿಗಳಾದ ಶಿವಾನಂದ ಭಜಂತ್ರಿ ತಿಳಿಸಿದರು. ನಗರದ ವ್ಯಾಪ್ತಿಯಲ್ಲಿ ಪ್ರವಾಹದಿಂದ ಹಾನಿಗೊಳಗಾದ 628ರ ಪೈಕಿ 104 ಮನೆಗಳ ನಿರ್ಮಾಣ ಕಾರ್ಯ ಇದುವರೆಗೆ ಆರಂಭಿಸಿಲ್ಲ. ಇಂತಹವರನ್ನು ಗುರುತಿಸಿ ಮನೆ ನಿರ್ಮಾಣ ಕಾರ್ಯ ಆರಂಭಿಸುವಂತೆ ಮನವೊಲಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಸಭೆಯಲ್ಲಿ ತಿಳಿಸಿದರು.

English summary
Belagavi district incharge Secretary Ateek has instructed officials to take up the priority of repairing infrastructure which are destroyed by flood
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X