ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಮೇಶ್‌ ಜಾರಕಿಹೊಳಿಗೆ ಬಿಜೆಪಿ ವರಿಷ್ಠರಿಂದ ಖಡಕ್ ಸೂಚನೆ

|
Google Oneindia Kannada News

ಬೆಂಗಳೂರು, ನವೆಂಬರ್ 22: ಗೋಕಾಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಗೆ ಬಿಜೆಪಿ ವರಿಷ್ಠರು ಖಡಕ್ ಸೂಚನೆ ನೀಡಿದೆ.

ಯಾವುದೇ ಕಾರಣಕ್ಕೂ ಚುನಾವಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಯಾವುದಕ್ಕೂ ಪ್ರತಿಕ್ರಿಯೆ, ಹೇಲಿಕೆ ನೀಡುವುದನ್ನು ಮಾಡಬಾರದು ಎಂದು ರಮೇಶ್ ಜಾರಕಿಹೊಳಿಗೆ ತಿಳಿಸಲಾಗಿದೆ.

ಲಕ್ಷ್ಮೀ ಮೇಲೆ ರಮೇಶ್‌ ಜಾರಕಿಹೊಳಿಗೆ ಯಾಕಿಷ್ಟು ಕೋಪ: ಕಾರಣ ಇಲ್ಲಿದೆಲಕ್ಷ್ಮೀ ಮೇಲೆ ರಮೇಶ್‌ ಜಾರಕಿಹೊಳಿಗೆ ಯಾಕಿಷ್ಟು ಕೋಪ: ಕಾರಣ ಇಲ್ಲಿದೆ

ರಮೇಶ್ ಜಾರಕಿಹೊಳಿ ಸೇರಿ ಹಲವು ಅನರ್ಹ ಶಾಸಕರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದೀಗ ಗೋಕಾಕ್‌ನಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲಿದ್ದು, ಅವರ ಸಹೋದರ ಲಖನ್ ಜಾರಕಿಹೊಳಿ ಅವರ ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲಿದ್ದಾರೆ.

Instructions For Ramesh Jarkiholi From BJP Senior Leaders

ರಮೇಶ್ ಜಾರಕಿಹೊಳಿ ಬಿಜೆಪಿ ಸೇರಿರುವುದಕ್ಕೆ ಬೇಸರಗೊಂಡಿರುವ ಸತೀಶ್ ಜಾರಕಿಹೊಳಿ ದಿನದಿನ ಜಾರಕಿಹೊಳಿ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಯಾರ ಹೇಳಿಕೆಗೂ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಉಪ ಚುನಾವಣೆ ಬಗ್ಗೆ ಗಮನಹರಿಸಿ ಎಂದು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಡಿಸೆಂಬರ್ 5ರಂದು ಗೋಕಾಕ್ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ರಮೇಶ್ ಜಾರಕಿಹೊಳಿ ಬಾಯಿಗೆ ವರಿಷ್ಠರು ಬೀಗ ಹಾಕಿದ್ದಾರೆ. ಚುನಾವಣೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಮುಜಗರಕ್ಕೆ ಒಳಗಾಗುವುದನ್ನು ತಪ್ಪಿಸಲು ಬಿಜೆಪಿ ವರಿಷ್ಠರು ಈ ಪ್ಲಾನ್ ಮಾಡಿದ್ದಾರೆ.

English summary
BJP Senior Leaders Are Given Instructions For Gokak BJP Candidate Ramesh Jarkiholi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X