ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉತ್ತರ ಕರ್ನಾಟಕದಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಗೆ ಮುಂದಾದ ರಾಜ್ಯ ಸರ್ಕಾರ!

|
Google Oneindia Kannada News

ಬೆಂಗಳೂರು, ಜ. 18: ಬೆಳಗಾವಿಯಲ್ಲಿ ಐಟಿ, ಬಿಟಿ ಪಾರ್ಕ್‌ ಸ್ಥಾಪನೆ ಮೂಲಕ ಸುಮಾರು 60 ಲಕ್ಷ ಉದ್ಯೋಗ ಸೃಷ್ಟಿಗೆ ರಾಜ್ಯ ಐಟಿ-ಬಿಟಿ ಇಲಾಖೆ ಮುಂದಾಗಿದೆ. ರಕ್ಷಣಾ ಇಲಾಖೆಯ ಭೂಮಿಯನ್ನು ಬಳಸಿಕೊಂಡು ಐಟಿ ಪಾರ್ಕ್‌ ಸ್ಥಾಪನೆಗೆ ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ.

ಈ ಹಿನ್ನೆಲೆಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ ರಾಜ್ಯದ 10,639 ಎಕರೆ ಭೂಮಿಯ ಪೈಕಿ 750 ಎಕರೆ ಭೂಮಿಯನ್ನು ರಾಜ್ಯ ಸರಕಾರಕ್ಕೆ ಬಿಟ್ಟು ಕೊಡುವಂತೆ ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಬೇಡಿಕೆಗೆ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ.

ಬೆಂಗಳೂರು ಹೊರತು ಪಡಿಸಿದರೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಐಟಿ ಕ್ಷೇತ್ರ ಅಷ್ಟಾಗಿ ಬೆಳೆದಿಲ್ಲ. ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಐಟಿ ಪಾರ್ಕ್‌ ಸ್ಥಾಪಿಸಲಾಗಿದ್ದರೂ ಪ್ರಯೋಜನವಾಗಿಲ್ಲ. ಇದೀಗ ಬೆಳಗಾವಿಯಲ್ಲಿ ಸುಸಜ್ಜಿತ ಐಟಿ ಪಾರ್ಕ್‌ ಸ್ಥಾಪನೆಗೆ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ರಕ್ಷಣಾ ಇಲಾಖೆಯ ಮೊರೆ ಹೋಗಿದೆ.

ಬೆಳಗಾವಿಯಲ್ಲಿ ಐಟಿ ಪಾರ್ಕ್‌

ಬೆಳಗಾವಿಯಲ್ಲಿ ಐಟಿ ಪಾರ್ಕ್‌

ರಾಜ್ಯ ಸರ್ಕಾರ ಸುಮಾರು ಹತ್ತು ಸಾವಿರ ಎಕರೆಯಷ್ಟು ಭೂಮಿಯನ್ನು ರಕ್ಷಣಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಹತ್ತು ವರ್ಷಗಳಿಗೊಮ್ಮೆ ಗುತ್ತಿಗೆ ನವೀಕರಣ ಮಾಡಲಾಗುತ್ತಿದೆ. ಅಷ್ಟೂ ಭೂಮಿಯನ್ನು ರಕ್ಷಣಾ ಇಲಾಖೆ ಬಳಸುತ್ತಿಲ್ಲ. ಹೀಗಾಗಿ ಈ ಜಾಗದ 750 ಎಕರೆ ಪ್ರದೇಶದಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್‌ ಸ್ಥಾಪನೆ ಮಾಡುವ ಬಗ್ಗೆ ಪ್ರಸ್ತಾವನೆ ಬಂದಿದೆ. ಈ ಪಾರ್ಕ್‌ ಬಂದರೆ ಬೆಳಗಾವಿ ಹಾಗೂ ಉತ್ತರ ಕರ್ನಾಟಕ ಪ್ರದೇಶದಲ್ಲಿ 60 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ.

ಸ್ಥಳೀಯರಿಗೆ ಉದ್ಯೋಗಾವಕಾಶ

ಸ್ಥಳೀಯರಿಗೆ ಉದ್ಯೋಗಾವಕಾಶ

ಜತೆಗೆ ಧಾರವಾಡದ ಐಐಟಿ ಮತ್ತು ಐಐಐಟಿ ಹಾಗೂ ಕೆಎಲ್‌ಇ ಶೈಕ್ಷಣಿಕ ಸಂಸ್ಥೆಗಳಿಂದ ಹೊರಬರುವ ಸ್ಥಳೀಯ ಪ್ರತಿಭೆಗಳಿಗೆ ಉದ್ಯೋಗಾವಕಾಶ ಕಲಿಸುವ ಉದ್ದೇಶವಿದೆ ಎಂಬ ವಿಷಯವನ್ನು ರಾಜನಾಥ್ ಸಿಂಗ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಅವರು ಅತ್ಯಂತ ಸಕಾರಾತ್ಮಕ ಸ್ಪಂದಿಸಿದ್ದು, ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಮಾಹಿತಿ ನೀಡಿದ್ದಾರೆ.

ಐಟಿ-ಬಿಟಿ ವಿಷನ್ ಗ್ರೂಪ್‌

ಐಟಿ-ಬಿಟಿ ವಿಷನ್ ಗ್ರೂಪ್‌

ಈ ಭೂಮಿ ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದಲ್ಲೇ ಇದ್ದು, ಐಟಿ ಪಾರ್ಕ್‌ ಸ್ಥಾಪನೆಗೆ ಅತ್ಯುತ್ತಮ ಜಾಗವಾಗಿದೆ. ಸ್ಥಳೀಯ ಆಡಳಿತ, ಮಾಹಿತಿ ತಂತ್ರಜ್ಞಾನ ಇಲಾಖೆ ಅಧಿಕಾರಿಗಳು, ಐಟಿ-ಬಿಟಿ ವಿಷನ್ ಗ್ರೂಪ್‌ ಸೇರಿದಂತೆ ಎಲ್ಲರೂ ಈ ಜಾಗವೇ ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಎಲ್ಲ ಸಂಗತಿಗಳನ್ನು ರಾಜನಾಥ್ ಸಿಂಗ್‌ ಅವರಿಗೆ ತಿಳಿಸಲಾಗಿದೆ ಎಂದಿದ್ದಾರೆ.

ಪ್ರಧಾನಿ ಆಶಯ

ಪ್ರಧಾನಿ ಆಶಯ

ಪ್ರಧಾನಿ ನರೇಂದ್ರ ಮೋದಿ ಅವರ ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯ ಕನಸಿಗೆ ಕರ್ನಾಟಕವು ಶೇ.30ರಷ್ಟು ಪಾಲು ಕೊಡುವ ಗುರಿಯನ್ನು ಹಾಕಿಕೊಂಡಿದೆ. ಆ ನಿಟ್ಟಿನಲ್ಲಿ 2020-21ನೇ ಸಾಲಿನ ನೂತನ ಐಟಿ ನೀತಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಆ ನೀತಿಯ ಭಾಗವಾಗಿ ಬೆಳಗಾವಿಯಲ್ಲಿ ಐಟಿ ಪಾರ್ಕ್‌ ಸ್ಥಾಪನೆ ಮಾಡುವ ಪ್ರಸ್ತಾವನೆ ಇದೆ ಎಂದು ರಾಜನಾಥ್ ಸಿಂಗ್ ಅವರಿಗೆ ವಿವರಿಸಿದ್ದೇವೆ ಎಂದು ಡಿಸಿಎಂ ತಿಳಿಸಿದರು.

English summary
The state IT-BT department is leading the creation of 60 lakh jobs through the establishment of IT Park in Belagavi. The state government has requested for 750 acres of land in the custody of the Defence Ministry. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X